ಬೆಂಗಳೂರು: ಹಾಲಿನ ದರ ಏರಿಕೆ ಬಹುದಿನಗಳ ಬೇಡಿಕೆಯಾಗಿತ್ತು, ಹೆಚ್ಚುವರಿ ಹಣ ರೈತರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಂದಿನಿ ಬ್ರ್ಯಾಂಡ್ ಹಾಲಿನ ದರವನ್ನು ಪ್ರತಿ ಲೀಟರ್ ಗೆ 8 ರೂಪಾಯಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ವಿರೋಧ ಪಕ್ಷಗಳು ತೀವ್ರವಾಗಿ ಸರ್ಕಾರವನ್ನು ಟೀಕಿಸುತ್ತಿವೆ.
ಇದಕ್ಕೆ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ ಉತ್ತರಿಸಿದ ಸಿಎಂ ಡಿ ಕೆ ಶಿವಕುಮಾರ್, ಹೆಚ್ಚಳವಾಗಿರುವ 8 ರೂಪಾಯಿಯಲ್ಲಿ 7 ರೂಪಾಯಿ ರೈತರಿಗೆ ಹಾಗೂ 1 ರೂಪಾಯಿ ಸಹಕಾರ ಸಂಘಗಳಿಗೆ (ಕರ್ನಾಟಕ ಹಾಲು ಮಹಾಮಂಡಳಿ) ದೊರೆಯಲಿದೆ. ಪರಿಷ್ಕೃತ ದರ ನವೆಂಬರ್ 1ರಿಂದ ಜಾರಿಗೆ ಬರಲಿದೆ ಎಂದರು.
ಇದು ಬಹುದಿನಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿತ್ತು. ದರ ಹೆಚ್ಚಳದಿಂದ ಬರುವ ಹೆಚ್ಚುವರಿ ಹಣ ರೈತರಿಗೆ ತಲುಪಲಿದೆ ಎಂದು ಹೇಳಿದರು.
ರೈತರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ ಅವರಿಗೆ ನೆರವಾಗಲು ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ತಿನ ಎಲ್ಲ ಪಕ್ಷಗಳ ಸದಸ್ಯರು ಒತ್ತಾಯಿಸಿದ್ದರು. ಹಾಲು ಉತ್ಪಾದಕರೇ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸಹಕಾರ ಸಂಘಗಳೂ ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿದ್ದವು’ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.