ಸಂಗ್ರಹ ಚಿತ್ರ 
ರಾಜ್ಯ

ರಾಜ್ಯಾದ್ಯಂತ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ: ನಿಯಮ ಉಲ್ಲಂಘಿಸಿದ 24 ಕುಡಿಯುವ ನೀರಿನ ಘಟಕಗಳಿಗೆ ನೋಟಿಸ್‌..!

ರಾಜ್ಯದಾದ್ಯಂತ 45 ಪ್ಯಾಕೇಜ್ಡ್ ಕುಡಿಯುವ ನೀರಿನ ತಯಾರಿಕಾ ಘಟಕಗಳನ್ನು ಪರಿಶೀಲಿಸಲಾಗಿದೆ. ಪ್ರಯೋಗಾಲಯ ಪರೀಕ್ಷೆಗಾಗಿ 32 ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವಿವಿಧ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ 24 ಘಟಕಗಳಿಗೆ ನೋಟಿಸ್ ನೀಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳಪೆ ಹಾಗೂ ಅಶುದ್ಧ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರಾಟಕ್ಕೆ ಬ್ರೇಕ್ ಹಾಕಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಭಾರಿ ಕಾರ್ಯಾಚರಣೆ ನಡೆಸಿದೆ.

ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದ 24 ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ರಾಜ್ಯದಾದ್ಯಂತ 45 ಪ್ಯಾಕೇಜ್ಡ್ ಕುಡಿಯುವ ನೀರಿನ ತಯಾರಿಕಾ ಘಟಕಗಳನ್ನು ಪರಿಶೀಲಿಸಲಾಗಿದೆ. ಪ್ರಯೋಗಾಲಯ ಪರೀಕ್ಷೆಗಾಗಿ 32 ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವಿವಿಧ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ 24 ಘಟಕಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ವಿಶೇಷ ತಪಾಸಣಾ ಕಾರ್ಯಾಚರಣೆಗಾಗಿ ಆಹಾರ ಸುರಕ್ಷತಾ ಅಧಿಕಾರಿಗಳನ್ನೊಳಗೊಂಡ 23 ತಂಡಗಳನ್ನು ಜಿಲ್ಲೆಗಳಲ್ಲಿ ನಿಯೋಜಿಸಲಾಗಿತ್ತು. ಶುಕ್ರವಾರವೂ ತಪಾಸಣೆ ಮುಂದುವರಿಯಲಿದೆ. ಪರಿಶೀಲನೆ ವೇಳೆ ಹಲವು ಘಟಕಗಳಲ್ಲಿ ಸ್ವಚ್ಛತೆಯ ಕೊರತೆ, ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣಪತ್ರಗಳಿಲ್ಲದಿರುವುದು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಪರವಾನಗಿ ಇಲ್ಲದಿರುವುದು, ಲೇಬಲ್‌ಗಳಲ್ಲಿನ ಲೋಪಗಳು ಹಾಗೂ ಕೀಟ ನಿಯಂತ್ರಣ ಪ್ರಮಾಣಪತ್ರಗಳ ಕೊರತೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಮೈಸೂರು ಮತ್ತು ದಾವಣಗೆರೆಯ ಘಟಕಗಳಿಂದ ತಪ್ಪು ಲೇಬಲ್ ಹೊಂದಿದ್ದ ಪ್ಯಾಕೇಜ್ಡ್ ಕುಡಿಯುವ ನೀರಿನ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿರುವ ತಯಾರಿಕಾ ಘಟಕವೊಂದನ್ನು ಸ್ವಚ್ಛತೆಯ ಕೊರತೆಯ ಕಾರಣದಿಂದ ಮುಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಿಯಮ ಉಲ್ಲಂಘನೆ ಮಾಡಿರುವುದು ಸಾಬೀತಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ನಿಯಮಿತವಾಗಿ ತಪಾಸಣೆ ಮುಂದುವರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪ್ಯಾಕೇಜ್ಡ್ ಕುಡಿಯುವ ನೀರು ಖರೀದಿಸುವ ಮುನ್ನ ಗ್ರಾಹಕರು ಎಫ್‌ಎಸ್‌ಎಸ್‌ಎಐ ಪರವಾನಗಿ ಸಂಖ್ಯೆ, ಐಎಸ್‌ಐ ಗುರುತು, ತಯಾರಿಕಾ ದಿನಾಂಕ ಮತ್ತು ಬಾಟಲಿಯ ಮುಚ್ಚಳದ ಮುದ್ರೆ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಿರುದ್ಧ INDIA ಒಕ್ಕೂಟ ಹೊಸ ಅಸ್ತ್ರ; ‘ಸಾರ್ವಜನಿಕ ದೋಷಾರೋಪಣೆ’ಗೆ ಸಜ್ಜು; ಇಂದು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ

ನೀರಿಗೇ ರೂ.30-35 ಕೊಡ್ತೀರಿ, ಹಾಲಿನ ಬೆಲೆ ಹೆಚ್ಚಾದರೆ ವಿರೋಧವೇಕೆ?: ದರ ಏರಿಕೆ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

'ನೋಡಲು ಅಸಹ್ಯವಾಗಿದ್ದೀಯ, ಮೊದಲು ದೇಹದ ಆಕಾರ ಸರಿಪಡಿಸಿಕೋ': ಆರೋಗ್ಯದ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಟ್ರಂಪ್ ಅವಮಾನ..!

ರಾಜಮನೆತನದ ವಿರುದ್ಧ ಹೇಳಿಕೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಭುಗಿಲೆದ್ದ ತೀವ್ರ ಪ್ರತಿಭಟನೆ..!

ದೇಶದಲ್ಲಿ ಅರಾಜಕತೆ ಸೃಷ್ಟಿಸಲು I.N.D.I.A ಒಕ್ಕೂಟ ಯತ್ನ: ಶೋಭಾ ಕರಂದ್ಲಾಜೆ ಆರೋಪ