ವಿಷ್ಣುವರ್ಧನ್, ನಟಿ ಬಿ.ಸರೋಜಾದೇವಿ 
ರಾಜ್ಯ

ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ ಪ್ರಶಸ್ತಿ'; ನವೆಂಬರ್ 19ಕ್ಕೆ ಪ್ರದಾನ; ನಟ ರಜನಿಕಾಂತ್ ಕರೆಸಲು ಚಿಂತನೆ!

ನ.19ರಂದು ವಿಧಾನಸೌಧ ಗ್ರಾಂಡ್ ಸ್ಟೆಪ್ ಮುಂಭಾಗ ನಡೆಯಲಿರುವ ಸಮಾರಂಭದಲ್ಲಿ ದಿವಂಗತರಾದ ಸರೋಜಾ‌ದೇವಿ ಮತ್ತು ವಿಷ್ಣುವರ್ಧನ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ನ.19ರಂದು ವಿಧಾನಸೌಧ ಗ್ರಾಂಡ್ ಸ್ಟೆಪ್ ಮುಂಭಾಗ ನಡೆಯಲಿರುವ ಸಮಾರಂಭದಲ್ಲಿ ದಿವಂಗತರಾದ ಸರೋಜಾ‌ದೇವಿ ಮತ್ತು ವಿಷ್ಣುವರ್ಧನ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 11, 2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹಾಗೂ ನಟಿ ಸರೋಜಾದೇವಿಗೆ ಮರಣೋತ್ತರವಾಗಿ ನೀಡಲು ತೀರ್ಮಾನಿಸಲಾಗಿತ್ತು. ಇದೀಗ ನ.19ರಂದು ಇಬ್ಬರಿಗೆ ಕರ್ನಾಟಕ ರತ್ನ ಪ್ರಸಶ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ.

ಹಿರಿಯ ನಟ ರಜನಿಕಾಂತ್ ಕರೆಸಲು ಚಿಂತನೆ: ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತಮಿಳುನಾಡು ಹಿರಿಯ ನಟ ರಜನಿಕಾಂತ್ ಜೊತೆಗೆ ಅವರ ಜೊತೆ ನಟಿಸಿದ ನಟಿ ಲಕ್ಷ್ಮೀ, ಸುಹಾಸಿನಿ ಅವರ‌ನ್ನು ಕರೆಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಈ ಹಿಂದೆ ಪ್ರಶಸ್ತಿ ಪಡೆದ ಸಾಧಕರು ಯಾರು?: ಈವರೆಗೆ ಸಾಧನೆ ಮಾಡಿದ 10 ಕನ್ನಡಿಗರು ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. 1992ರಲ್ಲಿ ರಾಷ್ಟ್ರ ಕವಿ ಕುವೆಂಪು ಹಾಗೂ ಹಿರಿಯ ನಟ ಡಾ.ರಾಜಕುಮಾರ್ ಅವರಿಗೆ ಮೊದಲ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು.‌

1999ರಲ್ಲಿ ಮಾಜಿ ಸಿಎಂ ಎಸ್.ನಿಜಲಿಂಗಪ್ಪ, 2000ರಲ್ಲಿ ವಿಜ್ಞಾನಿ ಸಿ.ಎನ್.ಆರ್.ರಾವ್, 2001ರಲ್ಲಿ ಹೃದ್ರೋಗ ತಜ್ಞ ದೇವಿ ಶೆಟ್ಟಿ, 2005ರಲ್ಲಿ ಹಿಂದುಸ್ತಾನಿ ಗಾಯಕ ಭೀಮ್ ಸೇನ್ ಜೋಶಿ, 2007ರಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ್ ಸ್ವಾಮೀಜಿ, 2008ರಲ್ಲಿ ಸಾಹಿತಿ ದೆ.ಜವರೇಗೌಡ, 2009ರಲ್ಲಿ ವೀರೇದ್ರ ಹೆಗ್ಗಡೆ, 2022ರಲ್ಲಿ ನಟ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ಇದೀಗ ನಟ ವಿಷ್ಣುವರ್ಧನ್ ಹಾಗೂ ನಟಿ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಈ ಹಿಂದೆ ವಿಷ್ಣುವರ್ಧನ್ ಕುಟುಂಬ, ಅಭಿಮಾನಿಗಳ ಸಂಘ ಮತ್ತು ಚಲನಚಿತ್ರ ಕಲಾವಿದರು ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ ಅವರು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.

ಜೊತೆಗೆ, ನಟಿಯರಾದ ಜಯಮಾಲಾ, ಶ್ರುತಿ, ತಾರಾ ಅನೂರಾಧ, ಮಾಳವಿಕಾ ಅವಿನಾಶ್ ಅವರು ವಿಷ್ಣುವರ್ಧನ್ ಮತ್ತು ಬಿ.ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ನೀಡುವ ತೀರ್ಮಾನ ಕೈಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Uttarakhand helicopter crash: ಹೆಲಿಕಾಪ್ಟರ್ ಛಿದ್ರ; ಐವರು ಕನ್ನಡಿಗರು ಸೇರಿದಂತೆ ಆರು ಮೃತದೇಹಗಳು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆ!

ಗೌರಿ ಲಂಕೇಶ್ ಹತ್ಯೆಯಿಂದ ಘಾಸಿಗೊಂಡ ಪ್ರಕಾಶ್ ರಾಜ್; ನಾನು ದೇವರನ್ನು ನಂಬುತ್ತೇನೆ, ಅವರು ನಂಬಲ್ಲ: ಪತ್ನಿ ಪೋನಿ ವರ್ಮಾ ಸಂವಾದ!

ಜನವರಿ 25ರಿಂದ ಜನಗಣತಿ ಆರಂಭ; ಚುನಾವಣೆ ನಡೆಯಲಿರುವ ರಾಜ್ಯಗಳು, ಹಿಮಪಾತ ಪೀಡಿತ ಪ್ರದೇಶಗಳಿಗೆ ವಿನಾಯಿತಿ

Nora Fatehi ಗೆ ಮತ್ತೆ ಸಂಕಷ್ಟ: ಸುಕೇಶ್ ಚಂದ್ರಶೇಖರ್ ಸುಲಿಗೆ ಪ್ರಕರಣದಲ್ಲಿ ಪೊಲೀಸ್ ಸಮನ್ಸ್!

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಭಾನುವಾರ ಚಾಲನೆ; ಇಲ್ಲಿದೆ ವೇಳಾಪಟ್ಟಿ