ಹೋಟೆಲ್‌ಗಳ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ (ಸಂಗ್ರಹ ಚಿತ್ರ) 
ರಾಜ್ಯ

ಬಳ್ಳಾರಿ ಹೋಟೆಲ್‌ಗಳ ಮೇಲೆ ದಿಢೀರ್ ಪರಿಶೀಲನೆ; ಕೊಳೆತ ಮಾಂಸ-ಅವಧಿ ಮೀರಿದ ಆಹಾರ ಪತ್ತೆ; ಎರಡು ಹೋಟೆಲ್‌ಗಳಿಗೆ 25 ಸಾವಿರ ರೂ ದಂಡ..! Video

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗುರುವಾರ ಬೆಳಿಗ್ಗೆ ನಡೆಸಿದ ದಿಢೀರ್ ತಪಾಸಣೆ ವೇಳೆ ಈ ಅಕ್ರಮಗಳು ಬೆಳಕಿಗೆ ಬಂದಿವೆ.

ಬಳ್ಳಾರಿ: ಸಾರ್ವಜನಿಕರಿಂದ ಬಂದ ಸಾಲು ಸಾಲು ದೂರುಗಳ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ನಗರದ ಪ್ರಮುಖ ಹೋಟೆಲ್‌ ಹಾಗೂ ತಿನಿಸು ಕೇಂದ್ರಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯ ವೇಳೆ ಅಡುಗೆಮನೆಗಳಲ್ಲಿ ಕೊಳೆತ ಮಾಂಸ, ತರಕಾರಿ ಹಾಗೂ ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಬಳಸಿ ಸಾರ್ವಜನಿಕರ ಆರೋಗ್ಯದ ಜೊತೆ ಚಿಲ್ಲಾಟವಾಡುತ್ತಿರುವುದು ಪತ್ತೆಯಾಗಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗುರುವಾರ ಬೆಳಿಗ್ಗೆ ನಡೆಸಿದ ದಿಢೀರ್ ತಪಾಸಣೆ ವೇಳೆ ಈ ಅಕ್ರಮಗಳು ಬೆಳಕಿಗೆ ಬಂದಿವೆ.

ಹೋಟೆಲ್‌ಗಳಲ್ಲಿ ಸ್ವಚ್ಛತೆ ಕಾಪಾಡದೆ, ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಆಹಾರ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಸಹಾಯಕ ಕಮಿಷನರ್ ರಾಜೇಶ್ ಎಚ್.ಡಿ. ಅವರ ನೇತೃತ್ವದ ಜಂಟಿ ತಂಡ ನಿಯಮ ಉಲ್ಲಂಘಿಸಿದ ಎರಡು ಪ್ರಮುಖ ಹೋಟೆಲ್‌ಗಳಿಗೆ ತಲಾ ರೂ.25,000 ದಂಡ ವಿಧಿಸಿದೆ.

ದಾಳಿ ವೇಳೆ ಆಹಾರ ಪದಾರ್ಥಗಳ ಗುಣಮಟ್ಟ, ಅಡುಗೆ ತಯಾರಿಸುವ ಸ್ಥಳದ ಸ್ವಚ್ಛತೆ ಹಾಗೂ ಆಹಾರ ಸಂಗ್ರಹಣಾ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು.

ಈ ವೇಳೆ ಕೆಲವು ಹೋಟೆಲ್‌ಗಳಲ್ಲಿ ಕೊಳೆತ ಮಾಂಸ, ಹಾಳಾದ ತರಕಾರಿ ಹಾಗೂ ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಆಹಾರ ತಯಾರಿಕೆಗೆ ಕಳಪೆ ಗುಣಮಟ್ಟದ ಮತ್ತು ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ಪದಾರ್ಥಗಳನ್ನು ಬಳಸುತ್ತಿರುವುದಕ್ಕೆ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕರಿಗೆ ಅನೈರ್ಮಲ್ಯದ ಹಾಗೂ ಅಸುರಕ್ಷಿತ ಆಹಾರ ಮಾರಾಟವಾಗುವುದನ್ನು ತಡೆಯುವುದು ಮತ್ತು ಹೋಟೆಲ್‌ಗಳು ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಈ ದಿಢೀರ್ ತಪಾಸಣೆಯ ಉದ್ದೇಶವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನ್ಯಾಯಾಂಗ ನಿಂದನೆ ಆರೋಪ: CJP ನಾಯಕ ಸೌರವ್ ದಾಸ್ ಹಿನ್ನೆಲೆ ಕುರಿತು ತನಿಖೆ, passport-Aadhaar card ರದ್ದು ಕೋರಿ PIL; ಕೇಂದ್ರ ಸರ್ಕಾರಕ್ಕೆ Madras ಹೈಕೋರ್ಟ್ ನೋಟಿಸ್..!

ಭೂತಾನ್‌ನಲ್ಲಿ ಹಿಮನದಿ ಸ್ಫೋಟ: ಭಾರತದ ಗಡಿ ರಾಜ್ಯಗಳಲ್ಲಿ ದಿಢೀರ್ ಪ್ರವಾಹ ಭೀತಿ, ಬಂಗಾಳ-ಅಸ್ಸಾಂನಲ್ಲಿ ಹೈ ಅಲರ್ಟ್ ಘೋಷಣೆ

ನಟ ಧನ್ವೀರ್‌ಗೆ ಹೆಚ್ಚಿದ ಸಂಕಷ್ಟ: ಮೂರು ಠಾಣೆಗಳಲ್ಲಿ ಎಫ್‌ಐಆರ್ ದಾಖಲು, ವಿಚಾರಣೆಗೆ ಹಾಜರಾಗಲು ಪೊಲೀಸರ ನೋಟಿಸ್

ಅಮೆರಿಕದ ನಾರ್ತ್ ಡಕೋಟಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ!

CEC ಜ್ಞಾನೇಶ್ ಕುಮಾರ್ ವಿರುದ್ಧ INDIA ಒಕ್ಕೂಟ ಹೊಸ ಅಸ್ತ್ರ; ‘ಸಾರ್ವಜನಿಕ ದೋಷಾರೋಪಣೆ’ಗೆ ಸಜ್ಜು; ಇಂದು ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ