ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಶನಿವಾರ ಬಿಎಂಟಿಸಿ ಬಸ್ಸೊಂದು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮಧ್ಯಾಹ್ನ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ನಿರ್ವಾಹಕರು ತಕ್ಷಣ ಸಮಯ ಪ್ರಜ್ಞೆ ಮೆರೆದು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.
ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಹೊಗೆಯು ಕೆಲವೇ ಕ್ಷಣಗಳಲ್ಲಿ ಬಸ್ ಅನ್ನು ಸಂಪೂರ್ಣವಾಗಿ ಆವರಿಸಿಕೊಂಡಿದೆ.
ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.