ಹೈಕೋರ್ಟ್, ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದೆ.

ಬಿ ರಿಪೋರ್ಟ್ ನಲ್ಲಿ ಹಲವು ಅಂಶಗಳನ್ನು ಲೋಕಾಯುಕ್ತ ತನಿಖಾಧಿಕಾರಿಗಳು ಪರಿಗಣಿಸಿಲ್ಲ. ಇಡಿ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶಗಳನ್ನು ಪರಿಗಣಿಸಿಲ್ಲ. ಕಾನೂನು ಬಾಹಿರ ಡಿನೋಟಿಫಿಕೇಷನ್ ಬಗ್ಗೆ ತನಿಖೆ ಸಮರ್ಪಕವಾಗಿಲ್ಲ. ಭೂ ಪರಿವರ್ತನೆ ಕಾನೂನುಬಾಹಿರವೆಂಬುದನ್ನು ಪರಿಗಣಿಸಿಲ್ಲ ಎಂದು ಜಾರಿ ನಿರ್ದೇಶನಾಲಯದ ಪರ ಎಎಸ್‌ಜಿ ಅರವಿಂದ್ ಕಾಮತ್ ವಾದ ಮಂಡಿಸಿದ್ದಾರೆ.

ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

2025ರ ಫೆಬ್ರವರಿ 12ರಂದು ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ, ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯಕ್ಕೆ(ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ.

ಆದರೆ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿರುವ 'ಬಿ' ರಿಪೋರ್ಟ್‌ ಅನ್ನು ಪಡೆದು ಪರಿಶೀಲಿಸಬೇಕು ಮತ್ತು ಅದನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೆ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣ ಕೋರಿದ್ದರು. ಆದ್ರೆ, ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಹ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣವು ಈಗ ಹೊಸ ಕಾನೂನು ತಿರುವು ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಗಸ್ಟ್‌ನಲ್ಲಿ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ; ಶೇ.15 ರಷ್ಟು ಹೆಚ್ಚಳ!

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕೇಸ್

ಅಫ್ಘಾನ್ ವಿರುದ್ಧದ T20 ಸರಣಿಗೆ ಭಾರತ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ಸ್ಥಾನ; ಬುಮ್ರಾ, ರಾಣಾ ಕಮ್​ಬ್ಯಾಕ್!

KPSC ಕಿಂಗ್ ಪಿನ್ ಕನ್ನಾಳೆ ಬಾಯಿಗೆ ಸ್ವೀಟ್ ತಿನ್ನಿಸಿದ ಸಚಿವ ಈಶ್ವರ ಖಂಡ್ರೆ: ಸ್ಪಷ್ಟನೆಗೆ ಭಗವಂತ ಖೂಬಾ ಆಗ್ರಹ

ಐರ್ಲೆಂಡ್‌ನಲ್ಲಿ 440 ಎಕರೆ ವಿಸ್ತೀರ್ಣದ ಕೋಟೆ ಖರೀದಿಸಿದ ಮಾರ್ಕ್ ಜುಕರ್‌ಬರ್ಗ್! ಇದರ ವಿಶಿಷ್ಟತೆ, ಬೆಲೆ ಎಷ್ಟು ಗೊತ್ತಾ?