ಪ್ರಾತಿನಿಧಿಕ ಚಿತ್ರ AI Generated
ರಾಜ್ಯ

ಬೆಂಗಳೂರು: ಐಪಿಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ; ರಾಜಸ್ಥಾನದ ಅಪ್ರಾಪ್ತನನ್ನು ವಶಕ್ಕೆ ಪಡೆದ ಪೊಲೀಸರು!

ಪೊಲೀಸರು ಬಾಲಾಪರಾಧಿಯಿಂದ ₹2 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದು ನಕಲಿ ಬ್ಯಾಂಕ್ ಖಾತೆಗಳ ಮೂಲಕ ವಂಚನೆಯಿಂದ ಪಡೆದ ಹಣದ ಭಾಗವಾಗಿದೆ ಎನ್ನಲಾಗಿದೆ.

ಬೆಂಗಳೂರು: ಐಪಿಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ರಚಿಸಿ ವಿವಿಧ ನೆಪಗಳನ್ನು ಹೇಳಿ ಜನರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಬಾಲಾಪರಾಧಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರೋಪಿಯು ಬೆಂಗಳೂರಿನಲ್ಲಿ ಉಪ ಪೊಲೀಸ್ ಆಯುಕ್ತರಾಗಿ (ಎಲೆಕ್ಟ್ರಾನಿಕ್ ಸಿಟಿ ವಿಭಾಗ) ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ನಾರಾಯಣ ಎಂ ಅವರ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದಿದ್ದಾನೆ ಎಂದು ಅವರು ಹೇಳಿದರು.

ಪೊಲೀಸರು ಬಾಲಾಪರಾಧಿಯಿಂದ ₹2 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದು ನಕಲಿ ಬ್ಯಾಂಕ್ ಖಾತೆಗಳ ಮೂಲಕ ವಂಚನೆಯಿಂದ ಪಡೆದ ಹಣದ ಭಾಗವಾಗಿದೆ ಎನ್ನಲಾಗಿದೆ.

ಐಪಿಎಸ್ ಅಧಿಕಾರಿಯ ಛಾಯಾಚಿತ್ರ ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿರುವ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಗಳು ನಕಲಿ ಖಾತೆಯ ಮೂಲಕ ಪೊಲೀಸ್ ಅಧಿಕಾರಿಯ ಪರಿಚಯಸ್ಥರು ಮತ್ತು ಸಾರ್ವಜನಿಕರಿಗೆ ಫ್ರೆಂಡ್ ರಿಕ್ವೆಸ್ಟ್‌ಗಳನ್ನ ಕಳುಹಿಸುತ್ತಿದ್ದರು ಮತ್ತು ನಂತರ ವಿವಿಧ ನೆಪಗಳನ್ನು ನೀಡಿ ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದರು.

ತನಿಖೆಯ ಸಮಯದಲ್ಲಿ, ಪೊಲೀಸರು ವಿಚಾರಣೆ ನಡೆಸಿ ರಾಜಸ್ಥಾನದ ಕೋಟಾ ಖುರ್ದ್ ಗ್ರಾಮದಿಂದ ಕಾರ್ಯನಿರ್ವಹಿಸುತ್ತಿದ್ದ ಸಂಘಟಿತ ಜಾಲವನ್ನು ಭೇದಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 24 ರಂದು, ಅಪರಾಧದಲ್ಲಿ ಭಾಗಿಯಾಗಿದ್ದಾನೆಂದು ಹೇಳಲಾದ ಬಾಲಾಪರಾಧಿಯ ಪೋಷಕರಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಗಾಗಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಅವರು ಹೇಳಿದರು.

'ವಿಚಾರಣೆಯ ಸಮಯದಲ್ಲಿ, ಆತ ಕೆಲವು ಸಹಚರರೊಂದಿಗೆ ಈ ಅಪರಾಧ ಮಾಡಿರುವುದಾಗಿ ಮತ್ತು ದೇಶದಾದ್ಯಂತ ಹಲವಾರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ, ಅವರಂತೆ ನಟಿಸಿ ಹಣ ಸಂಗ್ರಹಿಸುತ್ತಿದ್ದಾಗಿ ಬಹಿರಂಗಪಡಿಸಿದ್ದಾನೆ' ಎಂದು ಅಧಿಕಾರಿ ಹೇಳಿದರು.

'ವಂಚಕರು ನಕಲಿ ಖಾತೆಗಳನ್ನು ಬಳಸಿ, ತಮ್ಮ ಸ್ನೇಹಿತನೊಬ್ಬ ಸಿಆರ್‌ಪಿಎಫ್ ಕಮಾಂಡೆಂಟ್ ಆಗಿದ್ದು, ಅವರ ವರ್ಗಾವಣೆ ಮಾಡಲಾಗಿದೆ. ಆದ್ದರಿಂದ ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದರು. ಈ ವಸ್ತುಗಳಿಗೆ ಹಣ ಪಾವತಿಸುವಂತೆ ಜನರನ್ನು ಪ್ರೇರೇಪಿಸುವ ಮೂಲಕ, ಅವರು ಹಣವನ್ನು ಸಂಗ್ರಹಿಸಿ ವಂಚಿಸುತ್ತಿದ್ದರು' ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಪ್ರಕರಣದಲ್ಲಿ ಇನ್ನೂ ಹಲವಾರು ಜನರು ಭಾಗಿಯಾಗಿದ್ದಾರೆಂದು ಶಂಕಿಸಲಾಗಿದ್ದು, ಅವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ಆಗಸ್ಟ್ 25 ರಂದು ಬಾಲಾಪರಾಧಿಯನ್ನು ದೇವನಹಳ್ಳಿಯಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿ, ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ನಂತರ ಹಣಕ್ಕಾಗಿ ಬೇಡಿಕೆ ಇಡುವ ಸೈಬರ್ ವಂಚಕರ ವಿರುದ್ಧ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಅಧಿಕಾರಿಯ ಹೆಸರಿನಲ್ಲಿ ರಚಿಸಲಾದ ನಕಲಿ ಖಾತೆಗಳ ಮೂಲಕ ಹಣಕ್ಕಾಗಿ ವಿನಂತಿಗಳನ್ನು ಸ್ವೀಕರಿಸುವ ಜನರು ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಬೇಕೆಂದು ಮತ್ತು ಸರಿಯಾದ ಎಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: 'ನೀವೇನ್ ದಾನ ಕೊಡ್ತಿಲ್ಲ.. ಪ್ರವಾಹಕ್ಕೆ ನೀವೇ ಕಾರಣ.. ಪರಿಹಾರ ಕೊಡಿ ಅಷ್ಟೇ': ಭಾರತ, ಚೀನಾ, ಅಮೆರಿಕಕ್ಕೆ ನೇಪಾಳ ಖಡಕ್ ಆಗ್ರಹ!

ಮೇಕೆದಾಟು ವಿಚಾರದಲ್ಲಿ ಕರ್ನಾಟಕ ದಿಟ್ಟ ಹೆಜ್ಜೆ; CWC ಮುಖ್ಯಸ್ಥರ ಜೊತೆ ಸಚಿವರ ಮಹತ್ವದ ಮಾತುಕತೆ

‘ಬೆಂಗಳೂರು ಮೆಟ್ರೋ ಶಿಸ್ತಿನ ಸಿಪಾಯಿ’: ಪ್ರಯಾಣಿಕರ ನಾಗರಿಕ ಪ್ರಜ್ಞೆಯನ್ನು ಹಾಡಿ ಹೊಗಳಿದ ಉತ್ತರ ಭಾರತದ ಮಹಿಳೆ! ವಿಡಿಯೋ ವೈರಲ್

ಅಸ್ಸಾಂ ಹಾರರ್: ಪತ್ನಿ, ಮೂವರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಶಿಕ್ಷಕ!

ಲಂಚ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಉಪ ತಹಶೀಲ್ದಾರ್‌ ಪುಷ್ಪಲತಾಗೆ 4 ವರ್ಷ ಜೈಲು, ₹40 ಸಾವಿರ ದಂಡ