ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಮನೆಯಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ

ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಮತ್ತು ಇದೇ ರೀತಿಯ ದಾಳಿಗಳನ್ನು ತಡೆಯಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳೀಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಕಲಬುರಗಿ: ಮನೆಯಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿದ ಪರಿಣಾಮ ನಾಲ್ಕು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಸೇಡಂ ತಾಲ್ಲೂಕಿನ ಮೀನಹಬಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಲಕಿಯನ್ನು ಸಾನ್ವಿ ಎಂದು ಗುರುತಿಸಲಾಗಿದ್ದು, ಆಕೆಯ ಮುಖದಲ್ಲಿ ಆಳವಾದ ಗಾಯಗಳಾಗಿದ್ದು, ತುಟಿ ಮತ್ತು ಕೆನ್ನೆಗೆ ಹೆಚ್ಚಿನ ಗಾಯಗಳಾಗಿವೆ.

ಕೂಡಲೇ ಆಕೆಯನ್ನು ಸೇಡಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ, ಬಾಲಕಿಯ ತುಟಿ ಮತ್ತು ಕೆನ್ನೆಯ ಗಾಯಗಳಿಗೆ ಹೊಲಿಗೆ ಹಾಕಲಾಯಿತು. ಈ ಘಟನೆಯು ಗ್ರಾಮದಲ್ಲಿ ಬೆಳೆಯುತ್ತಿರುವ ಬೀದಿ ನಾಯಿಗಳ ಕಾಟದ ಬಗ್ಗೆ ನಿವಾಸಿಗಳಲ್ಲಿ ಕಳವಳವನ್ನು ಉಂಟುಮಾಡಿದೆ. ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಮತ್ತು ಇದೇ ರೀತಿಯ ದಾಳಿಗಳನ್ನು ತಡೆಯಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳೀಯರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಕರ್ನಾಟಕದಲ್ಲಿ ವರದಿಯಾದ ಇದೇ ರೀತಿಯ ಬೀದಿ ನಾಯಿಗಳ ದಾಳಿಯಲ್ಲಿ, ತನ್ನ ಮನೆಯ ಬಳಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನ ಮೇಲೆ ದಾಳಿ ಮಾಡಿದ್ದವು. ತಲೆಗೆ ಕಚ್ಚಿ ತೀವ್ರ ಗಾಯಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಹಗರಣ: ಕುಮಾರಸ್ವಾಮಿ ವಿರುದ್ದವೇ ಪ್ರಾಸಿಕ್ಯೂಷನ್ ಅಸ್ತ್ರ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಈ ಬಾರಿ ಬ್ರಿಕ್ಸ್ ಶೃಂಗಸಭೆಯೇಕೆ ಮಹತ್ವವನ್ನು ಪಡೆದುಕೊಂಡಿದೆ? (ಹಣಕ್ಲಾಸು)

ಶಸ್ತ್ರಾಸ್ತ್ರ ಹೊಂದಿದ್ದ 'ಬಿಜೆಪಿ ಗೂಂಡಾಗಳು' TMC ಕಚೇರಿಗೆ ನುಗ್ಗಿ, ಧ್ವಂಸ ಮಾಡಿದ್ದಾರೆ: ಅಭಿಷೇಕ್ ಬ್ಯಾನರ್ಜಿ

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಗ್ರಾನೈಟ್ ಉದ್ಯಮಿ, ಜೆಮ್ ಗ್ರೂಪ್‌ ಅಧ್ಯಕ್ಷ ವೀರಮಣಿ ಬಂಧನ; ಪೆನ್ ಡ್ರೈವ್‌ನಿಂದ ಬಯಲಾಯಿತು ಹೀನ ಕೃತ್ಯ!

ಭಾರತ-ಇರಾನ್ ನಡುವೆ ವ್ಯಾಪಾರ ಒಪ್ಪಂದ ಮಾತುಕತೆ ನಡೆಯುತ್ತಿಲ್ಲ: ಮಾರ್ಕೊ ರೂಬಿಯೊ