ಹೈಕೋರ್ಟ್  
ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರಿಗೆ BLO ಜವಾಬ್ದಾರಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್..!

ಮಹಿಳೆಯರು ಮತ್ತು ಮಕ್ಕಳಿಗೆ ಒದಗಿಸಲಾಗುತ್ತಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳು (ಐಸಿಡಿಎಸ್) ಹಾಗೂ ಬಾಲ್ಯದ ಆರೈಕೆ ಮತ್ತು ಅಭಿವೃದ್ಧಿ ಸೇವೆಗಳ ವಿತರಣೆಗೆ ಇದರಿಂದ ಅಡಚಣೆಯಾಗುತ್ತಿದೆ.

ಬೆಂಗಳೂರು: ಅಂಗನವಾಡಿ ಕಾರ್ಯಕರ್ತರನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿಎಲ್‌ಒ) ನಿಯೋಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗ (ಇಸಿಐ)ಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ದಾವಣಗೆರೆಯ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ರಾಜ್ಯ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ವಕೀಲ ಉಮಾಪತಿ ಎಸ್. ವಾದ ಮಂಡಿಸಿ, ಅಂಗನವಾಡಿ ಕಾರ್ಯಕರ್ತರನ್ನು ಬಿಎಲ್‌ಒಗಳಾಗಿ ನೇಮಕ ಮಾಡಿರುವುದರಿಂದ ಹಲವು ಗಂಭೀರ ಪರಿಣಾಮಗಳು ಉಂಟಾಗುತ್ತಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಮೊದಲನೆಯದಾಗಿ, ಮಹಿಳೆಯರು ಮತ್ತು ಮಕ್ಕಳಿಗೆ ಒದಗಿಸಲಾಗುತ್ತಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳು (ಐಸಿಡಿಎಸ್) ಹಾಗೂ ಬಾಲ್ಯದ ಆರೈಕೆ ಮತ್ತು ಅಭಿವೃದ್ಧಿ ಸೇವೆಗಳ ವಿತರಣೆಗೆ ಇದರಿಂದ ಅಡಚಣೆಯಾಗುತ್ತಿದೆ ಎಂದು ವಾದಿಸಿದರು.

ಎರಡನೆಯದಾಗಿ, ಈಗಾಗಲೇ ಕಲ್ಯಾಣ ಕಾರ್ಯಕ್ರಮಗಳ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಮೇಲೆ ಹೆಚ್ಚುವರಿ ಚುನಾವಣಾ ಕರ್ತವ್ಯಗಳನ್ನು ಹೊರಿಸಲಾಗುತ್ತಿದೆ ಎಂದು ತಿಳಿಸಿದರು.

ಮೂರನೆಯದಾಗಿ, ಬಿಎಲ್‌ಒಗಳ ಕರ್ತವ್ಯಗಳು ಈಗ ಕೇವಲ ಸಾಮಾನ್ಯ ಕಚೇರಿ ಕೆಲಸಗಳಿಗೆ ಸೀಮಿತವಾಗಿಲ್ಲ. ಮನೆ-ಮನೆಗೆ ತೆರಳಿ ಮತದಾರರ ವಿವರಗಳ ಪರಿಶೀಲನೆ, ಗಣತಿ ಸೇರಿದಂತೆ ಸೂಕ್ಷ್ಮ ಸ್ವರೂಪದ ಕ್ಷೇತ್ರ ಕಾರ್ಯಗಳನ್ನು ಅವರು ನಿರ್ವಹಿಸಬೇಕಾಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ

ಬಿಜೆಪಿ 'ಬಳ್ಳಾರಿ ಚಲೋ'ಗೆ 3ನೇ ದಿನವೂ ಭರ್ಜರಿ ಸ್ಪಂದನೆ: ರೈತರ 5 ಲಕ್ಷ ರು. ವರೆಗಿನ ಸಾಲಮನ್ನಾಗೆ ವಿಜಯೇಂದ್ರ ಪಟ್ಟು!

ತೈಲ ಖರೀದಿಸುವುದು ಅಥವಾ ಖರೀದಿಸದಿರುವುದು ಉಕ್ರೇನ್ ಯುದ್ಧವನ್ನು ಪರಿಹರಿಸುವುದಿಲ್ಲ: ಕೈವ್‌ನಲ್ಲಿ ರಾಜತಾಂತ್ರಿಕತೆಗೆ EAM ಜೈಶಂಕರ್ ಕರೆ