ಕರ್ನಾಟಕ ಲೋಕಾಯುಕ್ತ  online desk
ರಾಜ್ಯ

ಗೃಹ ಸಚಿವರ ತವರಲ್ಲೇ ಲಂಚಬಾಕ ಪೊಲೀಸರು : ರೌಡಿಶೀಟರ್‌ನಿಂದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೇದೆಗಳು!

ನಗರದ ಬ್ರಹ್ಮಪುರ ಪೊಲೀಸ್‌ ಠಾಣೆಯ ಹಿಂಬದಿಯಲ್ಲೇ ಕಾನ್‌ಸ್ಟೆಬಲ್‌ಗಳು ಲಂಚ ಪಡೆಯುತ್ತಿದ್ದಾಗ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕಾನ್‌ಸ್ಟೆಬಲ್‌ ಪರಶುರಾಮ್‌ ಸಿಕ್ಕಿ ಬಿದ್ದಿದ್ದು, ಮತ್ತೊಬ್ಬ ಕಾನ್‌ಸ್ಟೆಬಲ್‌ ವೀರೇಶ ಪರಾರಿಯಾಗಿದ್ದಾರೆ

ಕಲಬುರಗಿ: ರೌಡಿಶೀಟರ್‌ಗಳಿಗೆ ಗಡಿಪಾರು ಮಾಡುವುದಾಗಿ ಹೆದರಿಸಿ ಅವರಿಂದ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಪೊಲೀಸ್ ಪೇದೆಗಳು ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಬ್ರಹ್ಮಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ಗಳಾದ ಪರಶುರಾಮ್ ಮತ್ತು ವೀರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯ ಪೇದೆಗಳಾದ ವೀರೇಶ್, ಪರಶುರಾಮ್ ಇಬ್ಬರು ಸೇರಿಕೊಂಡು ರೌಡಿಶೀಟರ್‌ ಖನ್ನಾ ಪಟೇಲ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಕೇಳಿದಷ್ಟು ಹಣ ಕೊಡದಿದ್ದರೆ ಗಡಿಪಾರು ಮಾಡುವುದಾಗಿ ಹೆದರಿಸಿದ್ದಾರೆ.

ಖನ್ನಾ ಪಟೇಲ್‌ಗೆ ಗಡಿಪಾರಿನ ಬೆದರಿಕೆ ಹಾಕಿ ಮೊದಲಿಗೆ 50,000 ಲಂಚ ಪಡೆದಿದ್ದಾರೆ. ಅಷ್ಟು ಸಾಲದ್ದಕ್ಕೆ ಮತ್ತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆ ಇತ್ತ ಲೋಕಾಯುಕ್ತ ಎಸ್‌ಪಿ ಸಿದ್ದರಾಜ್ ನೇತೃತ್ವದಲ್ಲಿ ಬಲೆಗೆ ಕೆಡವಲು ಸಿದ್ಧತೆ ನಡೆಸಿದ್ದಾರೆ.

ನಗರದ ಬ್ರಹ್ಮಪುರ ಪೊಲೀಸ್‌ ಠಾಣೆಯ ಹಿಂಬದಿಯಲ್ಲೇ ಕಾನ್‌ಸ್ಟೆಬಲ್‌ಗಳು ಲಂಚ ಪಡೆಯುತ್ತಿದ್ದಾಗ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕಾನ್‌ಸ್ಟೆಬಲ್‌ ಪರಶುರಾಮ್‌ ಸಿಕ್ಕಿ ಬಿದ್ದಿದ್ದು, ಮತ್ತೊಬ್ಬ ಕಾನ್‌ಸ್ಟೆಬಲ್‌ ವೀರೇಶ ಪರಾರಿಯಾಗಿದ್ದಾರೆ. ಇಲ್ಲಿನ ಬಾಪುನಗರದ ಮಾಂಗರವಾಡಿ ಗಲ್ಲಿಯ ಕಾರ್ತಿಕ್‌ ಪಾಟೀಲ ರೂಢಿಗತ ಕಳ್ಳನಾಗಿದ್ದು, ಆತನ ವಿರುದ್ಧ ಎಂಒಬಿ ಶೀಟ್‌ ಚಾಲ್ತಿಯಲ್ಲಿದೆ.

1 ಲಕ್ಷ ಕೊಡಬೇಕು. ಇಲ್ಲದಿದ್ದರೆ ಗಡೀಪಾರು ಮಾಡಲಾಗುವುದು ಎಂದು ಕಾರ್ತಿಕ್‌ ಕುಟುಂಬಕ್ಕೆ‌ ಅಪರಾಧ ವಿಭಾಗದ ಈ ಕಾನ್‌ಸ್ಟೆಬಲ್‌ಗಳು ಹೆದರಿಸಿದ್ದರು. ಅದರಲ್ಲಿ ಮುಂಗಡವಾಗಿ ₹50 ಸಾವಿರ ಪಡೆದಿದ್ದರು. ಬಳಿಕ ಮತ್ತೆ 20 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾಕಾರನ ತಂದೆ ಮೇಲೆ ಹಲ್ಲೆ ಆರೋಪ; ದೆಹಲಿಯಲ್ಲಿ ಭಾರೀ ಹೈಡ್ರಾಮಾ; ಹಿಂದೂತ್ವ ಕಾರ್ಯಕರ್ತನ ಬಂಧನಕ್ಕೆ ಆಗ್ರಹ, ಪೊಲೀಸ್ ಠಾಣೆಗೆ CJP ಮುತ್ತಿಗೆ

ನೇಪಾಳ ಜಲಪ್ರಳಯ ನಡುವೆ ಮಹಾ ಪವಾಡ; ಮೃತ್ಯುಕೂಪದಿಂದ ಹೊರಬಂದ ಕಾರ್ಮಿಕರು, ತ್ರಿಶೂಲಿ-3A ಸುರಂಗದಿಂದ ಇಬ್ಬರು ಜೀವಂತ ರಕ್ಷಣೆ..!

Climate compensation ವಿವಾದ; ಭಾರತದಿಂದ ನೆರವು ಸ್ವೀಕರಿಸಿದ್ದೇವೆ, ಯಾವುದೇ ಪರಿಹಾರಕ್ಕೂ ಬೇಡಿಕೆ ಇಟ್ಟಿಲ್ಲ; ನೇಪಾಳ ಸ್ಪಷ್ಟನೆ..!

ನೇಪಾಳ ಪ್ರವಾಹ ದುರಂತ: ನಾಪತ್ತೆಯಾದವರ ಕುಟುಂಬಕ್ಕೆ ಭಾರತ ನೆರವು, DNA ಪರೀಕ್ಷೆಗೆ ಕೇಂದ್ರದಿಂದ ವ್ಯವಸ್ಥೆ..!

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ