ಡಿ.ಕೆ ಶಿವಕುಮಾರ್ 
ರಾಜ್ಯ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಏರ್ ಶೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಅವರು ಮನವಿ ಮಾಡಿದರು.

ಬೆಂಗಳೂರು: ಈ ಬಾರಿಯ ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ.‌ ಜೊತೆಗೆ ವಿವಿಧ ದೇಶಗಳ ರಾಯಭಾರಿಗಳು, ಅಧಿಕಾರಿಗಳನ್ನು ಆಹ್ವಾನಿಸಲು ಸೂಚನೆ ನೀಡಲಾಯಿತು.

ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ 2026ರ ಮೈಸೂರು ದಸರಾ ಆಚರಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ಗುರುವಾರ ರೇಸ್ ಕೋರ್ಸ್ ರಸ್ತೆಯ ಶಕ್ತಿಭವನದಲ್ಲಿ ನಡೆಯಿತು.

ರಾಜ್ಯಗಳ ಕಲಾ ತಂಡಗಳ ಪ್ರದರ್ಶನ ನೀಡಲು ಆಹ್ವಾನಕ್ಕೆ ನಿರ್ಧರಿಸಲಾಗಿದ್ದು, ಏರ್ ಶೋ ನಡೆಸುವ ಬಗ್ಗೆ ಕೇಂದ್ರ ರಕ್ಷಣಾ ಸಚಿವರ ಜೊತೆ ಸಿಎಂ ಚರ್ಚಿಸಿದರು. ಏರ್ ಶೋ, ಭೂ ಸೇನೆ, ವಾಯುಸೇನೆ ಹಾಗೂ ನೌಕಾಪಡೆಗಳಿಂದ ಟ್ಯಾಬ್ಲೋದಲ್ಲಿ ಹಾಗೂ ಕವಾಯತಿನಲ್ಲಿ ಭಾಗವಹಿಸಲು ತಂಡಗಳನ್ನು ಕಳುಹಿಸುವಂತೆ ಅವರು ಮನವಿ ಮಾಡಿದರು. ದಸರಾದಲ್ಲಿ ಟಿಕೆಟ್ ಪಡೆದವರಿಗೆ ಸೂಕ್ತ ಆಸನ ವ್ಯವಸ್ಥೆಗೆ ಆದ್ಯತೆ ನೀಡಲು ಸಿಎಂ ಸೂಚನೆ ನೀಡಿದರು.

ಚಿತ್ರಸಂತೆ, ಫ್ಲೀ ಮಾರ್ಕೆಟ್, ವಿಂಟೇಜ್ ಕಾರ್ ರ‍್ಯಾಲಿ, ರಂಗೋಲಿ ಸ್ಪರ್ಧೆ ಮತ್ತಿತರ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ, ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ಪ್ರತಿ ದಿನ ಒಬ್ಬ ಸಚಿವರನ್ನು ನಿಯೋಜಿಸಲು ಸಿಎಂ ಡಿಕೆಶಿ ನಿರ್ದೇಶಿಸಿದರು.

ದಸರಾ ವೇಳೆ ಡ್ರೋನ್ ಶೋ ಆಯೋಜಿಸಲು ಉದ್ದೇಶಿಸಲಾಗಿದೆ. ದಸರಾ ಜಂಬೂಸವಾರಿಯ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಭಾಗವಹಿಸಲು ಭಾರತೀಯ ಸೇನಾಪಡೆಗಳು, ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಇಸ್ರೋ, ಡಿಆರ್​​ಡಿಓ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳಿಗೆ ಆಹ್ವಾನ ನೀಡಲು ತೀರ್ಮಾನಿಸಲಾಗಿದೆ.

ರಾಜ್ಯದ ಎಲ್ಲ ಭಾಗಗಳನ್ನು ಪ್ರತಿನಿಧಿಸುವ ಕಲಾ ತಂಡಗಳಿಗೆ ಅವಕಾಶ ನೀಡಬೇಕು. ಮೈಸೂರಿನ ಅರಮನೆ ಮತ್ತಿತರ ಪ್ರಮುಖ ತಾಣಗಳ ಕುರಿತು ಕಿರುಚಿತ್ರ ನಿರ್ಮಿಸಿ, ವ್ಯಾಪಕ ಪ್ರಚಾರ ನೀಡಲು ಸಿಎಂ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ

ತೈಲ ಖರೀದಿಸುವುದು ಅಥವಾ ಖರೀದಿಸದಿರುವುದು ಉಕ್ರೇನ್ ಯುದ್ಧವನ್ನು ಪರಿಹರಿಸುವುದಿಲ್ಲ: ಕೈವ್‌ನಲ್ಲಿ ರಾಜತಾಂತ್ರಿಕತೆಗೆ EAM ಜೈಶಂಕರ್ ಕರೆ

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

ಸತತ ನಷ್ಟದಿಂದ ಚೇತರಿಕೆ ಕಂಡ ಚಿನ್ನದ ಬೆಲೆ, ಈಗ 10 ಗ್ರಾಂ ದರ ಎಷ್ಟು ಗೊತ್ತಾ?