ಪಾದಯಾತ್ರೆಯಲ್ಲಿ ವಿಜಯೇಂದ್ರ  
ರಾಜ್ಯ

ಬಿಜೆಪಿ 'ಬಳ್ಳಾರಿ ಚಲೋ'ಗೆ 3ನೇ ದಿನವೂ ಭರ್ಜರಿ ಸ್ಪಂದನೆ: ರೈತರ 5 ಲಕ್ಷ ರು. ವರೆಗಿನ ಸಾಲಮನ್ನಾಗೆ ವಿಜಯೇಂದ್ರ ಪಟ್ಟು!

ನಾಡಿನ ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸಲು, ಬರಗಾಲದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದರು.

ರಾಯಚೂರು: ರಾಜ್ಯದ ಸುಮಾರು 190ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರಪೀಡಿತ ಪ್ರದೇಶಗಳ ರೈತರ ಬೆಳೆ ಸಾಲವನ್ನು ₹5 ಲಕ್ಷದವರೆಗೆ ಮನ್ನಾ ಮಾಡಿ. ರೈತರ ಸಮಸ್ಯೆ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ.

ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ವರ್ತಿಸುತ್ತಿದೆ. ನವಲಿ ಜಲಾಶಯ, ನಂದವಡಿ ಏತ ನೀರಾವರಿ ಆಗಬೇಕು ಎಂದು ಆಗ್ರಹಿಸಿ, ಬರ, ರೈತರ ಆತ್ಮಹತ್ಯೆ ಹಾಗೂ ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ 3ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆಯು ಗುಡದೂರಿನಿಂದ ಬೆಳಿಗ್ಗೆ ಆರಂಭವಾಯಿತು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾಡಿನ ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸಲು, ಬರಗಾಲದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಿದರು.

ಹೊಸಪೇಟೆ ಡ್ಯಾಂನಲ್ಲಿ 31 ಟಿಎಂಸಿ ಹೂಳು ತುಂಬಿದೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಡಿಪಿಆರ್‌ಗೆ ಹಣ ಕೊಟ್ಟಿದ್ದರ. ನವಲಿ ಸಮಾನಾಂತರ ಜಲಾಶಯಕ್ಕೆ ಆದ್ಯತೆ ನೀಡಲು ಪ್ರಯತ್ನ ಮಾಡಿದ್ದರು ಎಂದು ಗಮನ ಸೆಳೆದರು. 190ಕ್ಕೂ ಹೆಚ್ಚು ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ರೈತರ ಬಗ್ಗೆ ಕಾಳಜಿಯೂ ಇಲ್ಲ. ಹೋರಾಟದ ಹಿನ್ನೆಲೆಯೂ ಇಲ್ಲ. ಗ್ರಾಮೀಣ ಭಾಗದ ರೈತರ ಸಮಸ್ಯೆ ಏನೆಂದು ಅರ್ಥ ಮಾಡಿಕೊಳ್ಳಲು ಆಗಿಲ್ಲ. ಹಿಂದೆ ಡಿಸಿಎಂ, ಬೆಂಗಳೂರು ಅಭಿವೃದ್ಧಿ ಸಚಿವರಾದುದರಿಂದ ರೈತರ ಸಂಕಷ್ಟಕ್ಕೆ ಸಮಯ ಕೊಡಲು ಆಗಿಲ್ಲ ಎಂದು ದೂರಿದ ಅವರು, ರಿಯಲ್ ಎಸ್ಟೇಟ್ ಕಡೆ ಹೆಚ್ಚು ಗಮನ ಕೊಡುವ ಮುಖ್ಯಮಂತ್ರಿಗಳು ಅದರಲ್ಲಿ ಶೇ. 25ರಷ್ಟಾದರೂ ಸಮಯವನ್ನು ಈ ನಾಡಿನ ಅನ್ನದಾತನ ಬಗ್ಗೆ ಗಮನಿಸಬೇಕು. ಬರಗಾಲ ಭೀಕರವಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸಲಿ ಎಂದು ಆಗ್ರಹಿಸಿದರು.

ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ ಇದಾಗಿದೆ ಎಂದು ಆಕ್ಷೇಪಿಸಿದ ಅವರು, ಕಾಂಗ್ರೆಸ್ ಸರ್ಕಾರದ ಅಧಿಕಾರದ 3 ವರ್ಷಗಳಲ್ಲಿ ಕರ್ನಾಟಕದಲ್ಲಿ 3655 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಸುಮಾರು 294 ರೈತರು, ರಾಯಚೂರು ಜಿಲ್ಲೆ 160ಕ್ಕೂ ಹೆಚ್ಚು, ಬೀದರ್- 220ಕ್ಕೂ ಹೆಚ್ಚು, ಕೊಪ್ಪಳ ಜಿಲ್ಲೆಯಲ್ಲಿ 80ಕ್ಕೂ ಹೆಚ್ಚು ಸೇರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 937 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಈ ವಿಚಾರವನ್ನು ಗಮನಿಸಬೇಕು ಎಂದು ತಿಳಿಸಿದರು.

ಬಿಜೆಪಿ ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಕರೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಾದಯಾತ್ರೆಯನ್ನು ತಡೆಯುವುದಾದರೆ ತಡೆಯಿರಿ. ನಮ್ಮನ್ನು ಗಲ್ಲಿಗೇರಿಸಿದರೂ ಪರವಾಗಿಲ್ಲ. ಆದರೆ, ಮೊದಲು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ತಿರುಗೇಟು ನೀಡಿದರು.

ಬಿಜೆಪಿ ಪಾದಯಾತ್ರೆಗೆ ಕಪ್ಪು ಬಾವುಟ ತೋರಿಸುವುದಕ್ಕಿಂತ ಮೊದಲು ರೈತರ ಕಣ್ಣೀರು ಒರೆಸುವ ಕೆಲಸ ಮಾಡಿ. ರಾಜ್ಯದ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಜನರೇ ನಿಮಗೆ ಉತ್ತರ ನೀಡುತ್ತಾರೆ ಎಂದು ಕಿಡಿ ಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ

ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರ

ತೈಲ ಖರೀದಿಸುವುದು ಅಥವಾ ಖರೀದಿಸದಿರುವುದು ಉಕ್ರೇನ್ ಯುದ್ಧವನ್ನು ಪರಿಹರಿಸುವುದಿಲ್ಲ: ಕೈವ್‌ನಲ್ಲಿ ರಾಜತಾಂತ್ರಿಕತೆಗೆ EAM ಜೈಶಂಕರ್ ಕರೆ

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ