ಸಾಂದರ್ಭಿಕ ಚಿತ್ರ 
ರಾಜ್ಯ

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಪ್ರಕರಣ: ವಿಧಾನಸೌಧ ಠಾಣೆಯಲ್ಲಿ zero FIR ದಾಖಲು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಜಂಟಿ ಪ್ರಚಾರ ಸಭೆ ನಡೆಸಿದ್ದ ವೇದಿಕೆಯನ್ನು ‘ಶುದ್ಧೀಕರಣ’ಗೊಳಿಸಿದ ಆರೋಪದ ಮೇಲೆ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರ ಭಟ್ ಸೇರಿದಂತೆ ಹಲವರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಶೂನ್ಯ ಎಫ್‌ಐಆರ್ (Zero FIR) ದಾಖಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖರ್ಗೆ ಅವರ ಕಾರ್ಯಕ್ರಮದ ಬಳಿಕ ನಡೆದಿದ್ದ ಎನ್ನಲಾದ ಶುದ್ಧೀಕರಣ ಕಾರ್ಯವು ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಶೂನ್ಯ ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಉತ್ತರಾಖಂಡದ ಹಲ್ದ್ವಾನಿ ಪೊಲೀಸ್ ಠಾಣೆಯ ವ್ಯಾಪ್ತಿಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 ಹಾಗೂ ನಾಗರಿಕ ಹಕ್ಕುಗಳ ರಕ್ಷಣಾ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿವಿಧ ಧಾರ್ಮಿಕ, ಜನಾಂಗೀಯ, ಭಾಷಾ ಅಥವಾ ಪ್ರಾದೇಶಿಕ ಗುಂಪುಗಳು, ಜಾತಿಗಳು ಅಥವಾ ಸಮುದಾಯಗಳ ನಡುವೆ ದ್ವೇಷ, ವೈರತ್ವ ಅಥವಾ ಅಸಹಕಾರವನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್‌ನ ಸೆಕ್ಷನ್ 196 ಅನ್ವಯಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

'ಅಸಹ್ಯಕರ' ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್‌ ತರಾಟೆ!

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್: ಇನ್ಮುಂದೆ ತಮ್ಮ ಹೆಸರಿಗೆ ಮೊದಲು 'Tr' ಬಳಸುವ ಅವಕಾಶ!