ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

'ಬರದ ಸಂಕಷ್ಟದಲ್ಲಿರುವ ರೈತರೊಂದಿಗೆ ಸರ್ಕಾರವಿದೆ': ಸಿಎಂ ಡಿಕೆ ಶಿವಕುಮಾರ್ ಭರವಸೆ!

ರೈತ ಉಳಿದರೆ ನಾಡು ಉಳಿಯುತ್ತದೆ. ಮಳೆ ಕೈಕೊಟ್ಟರೂ ರೈತನ ಕೈಬಿಡದ ಸರ್ಕಾರ, ಬೆಳೆ ಉಳಿಸಲು ₹28.52 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿದೆ ಎಂದು ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:"ಬರದ ಸಂಕಷ್ಟದಲ್ಲಿರುವ ರೈತರೊಂದಿಗೆ ಸರ್ಕಾರವಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭರವಸೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರೈತರ ಜಮೀನುಗಳಿಗೆ ತೆರಳಿ, ಅನ್ನದಾತರ ಸಮಸ್ಯೆಗಳನ್ನು ಆಲಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹಂಚಿಕೊಂಡಿದ್ದು, ನಿಮ್ಮೊಂದಿಗೆ ಸರ್ಕಾರವಿದೆ ಎಂದು ಧೈರ್ಯ ತುಂಬಿರುವುದಾಗಿ ತಿಳಿಸಿದ್ದಾರೆ.

ರೈತ ಉಳಿದರೆ ನಾಡು ಉಳಿಯುತ್ತದೆ. ಮಳೆ ಕೈಕೊಟ್ಟರೂ ರೈತನ ಕೈಬಿಡದ ಸರ್ಕಾರ, ಬೆಳೆ ಉಳಿಸಲು ₹28.52 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿದೆ. ನಷ್ಟಕ್ಕೊಳಗಾದ ರೈತರಿಗೆ ವಿಮಾ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಲು ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದಿದ್ದಾರೆ.

ಬರಪೀಡಿತ ಪ್ರದೇಶದ ರೈತರ ಸಾಲ ವಸೂಲಿಗೆ ತಡೆ, ತ್ವರಿತ ವಿಮಾ ಪರಿಹಾರ, ಗ್ರಾಮೀಣ ಕೃಷಿ ಕಾರ್ಮಿಕರಿಗೆ ಆರ್ಥಿಕ ನೆರವು ಹಾಗೂ ಬೆಳೆ ಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ತುರ್ತು ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಕಷ್ಟದ ಪ್ರತಿಯೊಂದು ಹೆಜ್ಜೆಯಲ್ಲೂ ಸರ್ಕಾರ ಅನ್ನದಾತನ ಬೆನ್ನಿಗೆ ನಿಲ್ಲಲಿದ್ದು, ರೈತರು ಯಾವುದೇ ಕಾರಣಕ್ಕೂ ಧೃತಿಗೆಡುವ ಅಗತ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!