ಸಾಂದರ್ಭಿಕ ಚಿತ್ರ 
ರಾಜ್ಯ

72 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್: ಇದೇ ಮೊದಲ ಬಾರಿಗೆ ದೆಹಲಿ ಬದಲು ಗುಜರಾತ್‌ನಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ!

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ನವದೆಹಲಿ: 72 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯ ಹೊರಗೆ ನಡೆಯಲಿದ್ದು, ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ವಿಶ್ವದ ಅತಿ ಎತ್ತರದ ಪ್ರತಿಮೆಯಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ()ಯನ್ನು ಹೊಂದಿರುವ ಏಕ್ತಾ ನಗರ ಎಂದು ಮರುನಾಮಕರಣಗೊಂಡಿರುವ ಕೆವಾಡಿಯಾದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ನಡೆಯಲಿದೆ. ಈ ಮೂಲಕ ದಶಕಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಲಾಗಿದೆ.

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ನಡೆಸುವುದು ಹಲವು ದಶಕಗಳ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. 1954 ರಲ್ಲಿ ಮೊದಲ ರಾಷ್ಟ್ರೀಯ ಪ್ರಶಸ್ತಿಗಳನ್ನು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಸಲಾಯಿತು. ಅಂದಿನಿಂದ ಇಲ್ಲಿಯವರೆಗೆ ಹೆಚ್ಚಿನ ಪ್ರಶಸ್ತಿ ಪ್ರದಾನ ಸಮಾರಂಭಗಳನ್ನು ಇಲ್ಲಿಯೇ ಆಯೋಜಿಸಲಾಗಿದೆ. ಸಾಮಾನ್ಯವಾಗಿ ರಾಷ್ಟ್ರಪತಿಯೇ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಾರೆ. ಇದೇ ಮೊದಲ ಬಾರಿ ದೆಹಲಿಯಿಂದ ಗುಜರಾತ್ ನ ಏಕ್ತಾ ನಗರಕ್ಕೆ ಸಮಾರಂಭವನ್ನು ಸ್ಥಳಾಂತರಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಈ ತಿಂಗಳ ಕೊನೆಯಲ್ಲಿ ಗುಜರಾತ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಭೇಟಿಯ ಸಂದರ್ಭದಲ್ಲಿ ಅವರು ಏಕ್ತಾ ನಗರಕ್ಕೆ ತೆರಳಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

SC/ST ಪ್ರಕರಣ; ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್: 14 ದಿನ ನ್ಯಾಯಾಂಗ ಬಂಧನ!

‘ಎದ್ದು ನಿಲ್ಲೋಕೆ ಆಗ್ತಿಲ್ವಾ?’; DMK ಶಾಸಕನಿಗೆ ಸಿಎಂ ವಿಜಯ್ ನೆರವು, 'ಏನ್ರೋ ನಡೀತಿದೆ' ಎಂದ ಉದಯನಿಧಿ ಸ್ಟಾಲಿನ್ ! Video

ಬಿ. ನಾಗೇಂದ್ರಗೆ ಬಿಗ್ ಶಾಕ್​: ಮಾಜಿ ಸಚಿವರನ್ನು ಮತ್ತೆ ತೀವ್ರ ವಿಚಾರಣೆಗೆ ಒಳಪಡಿಸಿದ ED; ಮರು ವಿಚಾರಣೆ ಯಾಕೆ?

ಆಂಧ್ರ ಮಹಿಳೆಯ ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್ ಸೇರಿ ಹಲವು ವಸ್ತುಗಳನ್ನು ಹೊರತೆಗೆದ ವೈದ್ಯರು!