ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿ ರಿಲೀಫ್ ಸಿಕ್ಕಿದೆ. ಎ14 ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ಆದೇಶ ಪ್ರಕಟಿಸಿದೆ. ಪ್ರದೋಷ್ ಮಾಫಿ ಸಾಕ್ಷಿಯನ್ನಾಗಿಸಿದ್ದ 59ನೇ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಪ್ರಸನ್ನ ಅವರ ಪೀಠ ರದ್ದುಪಡಿಸಿದೆ.
59ನೇ ಸೆಷನ್ಸ್ ಕೋರ್ಟ್ ಪ್ರದೋಷ್ಗೆ ಮಾಫಿ ಸಾಕ್ಷಿ ಆಗಲು ಅನುಮತಿ ನೀಡಿತ್ತು. ಆದರೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಇದಕ್ಕೆ ವಿರೋಧ ವ್ಯಕ್ತಪಡಿಸಿ, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಕುರಿತು ವಿಚಾರಣೆ ನಡೆದು, ಆದೇಶವನ್ನು ಕಾಯ್ದಿಸಿದ್ದ ಹೈಕೋರ್ಟ್ ಇಂದು ಆದೇಶ ಹೊರಡಿಸಿದ್ದು ದರ್ಶನ್ ಅರ್ಜಿಯನ್ನು ಭಾಗಷಃ ಪುರಸ್ಕರಿಸಿದೆ. ಆದರೆ ಪ್ರದೋಶ್ ಮಾಫಿ ಸಾಕ್ಷಿ ಹೇಳಿಕೆಗೆ ತಡೆ ನೀಡಿಲ್ಲ. ಬದಲಿಗೆ ಮತ್ತೊಮ್ಮೆ ಆದೇಶ ಹೊರಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.
ಇನ್ನು ಹೊಸದಾಗಿ ವಿಚಾರಣೆ ನಡೆಸುವ ಯಾವುದೇ ಅಗ್ಯವಿಲ್ಲ. ಒಂದು ವಾರದಲ್ಲಿ ಮರು ಆದೇಶ ಹೊರಡಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇದೀಗ ವಿಚಾರಣಾ ನ್ಯಾಯಾಲಯವು ಮರು ಆದೇಶವನ್ನಷ್ಟೆ ಮಾಡಬೇಕಿದೆ.