ಸಾಂದರ್ಭಿಕ ಚಿತ್ರ 
ರಾಜ್ಯ

ಸೆ.20 ರಿಂದ 108 ಸೇವೆ ಬಂದ್: ಸರ್ಕಾರಕ್ಕೆ ಸಿಬ್ಬಂದಿ ಡೆಡ್‌ಲೈನ್; 3,500 ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ!

ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು, ಸೆಪ್ಟೆಂಬರ್ 20 ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟಕ್ಕಿಳಿಯುವುದಾಗಿ ಸಂಘಟನೆಗಳು ತಿಳಿಸಿವೆ.

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಅಂಬುಲೆನ್ಸ್‌ ನೌಕರರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು, ಸೆಪ್ಟೆಂಬರ್ 20 ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟಕ್ಕಿಳಿಯುವುದಾಗಿ ಸಂಘಟನೆಗಳು ತಿಳಿಸಿವೆ.

ಈ ಸಂಬಂಧ ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ’ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್ ನೌಕರರ ಸಂಘದ ಪದಾಧಿಕಾರಿಗಳು ಆರೋಗ್ಯ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜಿವಿಕೆ ಸಂಸ್ಥೆಯ ಅಧೀನದಲ್ಲಿ ಸುಮಾರು 35,000 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದುಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರು. ಪರಿಹಾರ, ಜೇಷ್ಠತೆ ಆಧಾರದ ಮೇಲೆ ಸಿಬ್ಬಂದಿಗೆ ವೇತನ ನಿಗದಿ ಮಾಡಬೇಕು. ಕಾರ್ಮಿಕ ಇಲಾಖೆ ಪ್ರಕಾರ ಪ್ರತಿ ತಿಂಗಳು 7ರ ಒಳಗೆ ವೇತನ ನೀಡಬೇಕು. ಎಲ್ಲಾ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ, ಆ್ಯಂಬುಲೆನ್ಸ್ ಸ್ವಚ್ಛಗೊಳಿಸಲು ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದೆ.

ಸೆ.4 ರಂದು ಪತ್ರ ಬರೆದಿರುವ ಸಂಘದ ಪದಾಧಿಕಾರಿಗಳು, 15 ದಿನಗಳ ಒಳಗಾಗಿ ಬೇಡಿಕೆ ಈಡೇರಿಸದದಸಿದ್ದರೆ ಸೆ.20 ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟ ನಡೆಸುತ್ತೇವೆ. ನಂತರದ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದ್ದಾರೆ.

108 ಆ್ಯಂಬುಲೆನ್ಸ್ ನೌಕರರ ಮುಷ್ಕರದಿಂದ ರೋಗಿಗಳಿಗೆ ಸಮಸ್ಯೆಯಾದರೆ ಸಂಬಂಧಿಸಿದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚಾಲಕರಿಗೆ ಯಾವುದೇ ಸಮಸ್ಯೆ ಇದ್ದಲ್ಲಿ ಕಂಪನಿಯೊಂದಿಗೆ ಮಾತುಕತೆ ನಡೆಸಬೇಕು. ಕಂಪನಿಗೆ ತಮ್ಮ ಚಾಲಕರು ಮತ್ತು ನಿರ್ವಾಹಕರನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಕಂಪನಿ ಬಿಟ್ಟು ಹೋಗಬೇಕು ಎಂದು ಸಚಿವ ಯು.ಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್: ವೃತ್ತಿಪರ ಕೋರ್ಸ್‌ಗಳಲ್ಲಿ ಶೇ. 7.5 ರಷ್ಟು ಒಳಮೀಸಲಾತಿ, ಕರಡು ನಿಯಮ ಪ್ರಕಟ!

KPSC Scam: ನಿನಗೆ 5 ರೂಪಾಯಿ ರೇಷನ್ ಕೂಡ ಸಿಗದ ಹಾಗೆ ಮಾಡುತ್ತೇವೆ; ಅಕ್ರಮ ವಿರುದ್ಧ ದೂರು ದಾಖಲಿಸಿದ್ದವರಿಗೆ ಬೆದರಿಕೆ ಕರೆ

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!