ಕರ್ನಾಟಕ ಲೋಕಸೇವಾ ಆಯೋಗ (KPSC) Online Desk
ರಾಜ್ಯ

KPSC Scam: ನಿನಗೆ 5 ರೂಪಾಯಿ ರೇಷನ್ ಕೂಡ ಸಿಗದ ಹಾಗೆ ಮಾಡುತ್ತೇವೆ; ಅಕ್ರಮ ವಿರುದ್ಧ ದೂರು ದಾಖಲಿಸಿದ್ದವರಿಗೆ ಬೆದರಿಕೆ ಕರೆ

KPSC Scam: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಿಗೆ ಬೆದರಿಕೆ ಕರೆಗಳು ಬರುತ್ತಿದೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಮುಖ್ಯ ದೂರುದಾರ ಹಾಸನ ಮೂಲದ ಡಾ. ಮಂಜುನಾಥ್ ಅವರಿಗೆ ಬಂದಿರುವ 7 ನಿಮಿಷಗಳ ಸುದೀರ್ಘ ಬೆದರಿಕೆ ಕರೆಯ ಆಡಿಯೋ ಇದೀಗ ಭಾರಿ ಸಂಚಲನ ಮೂಡಿಸಿದೆ. ಹಗರಣದ ವಿರುದ್ಧ ದೂರು ನೀಡಿ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ಆರೋಪಿಗಳ ಕಡೆಯವರು ಅವರಿಗೆ ನಿರಂತರವಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ವರದಿಗಳ ಪ್ರಕಾರ, ಪರೀಕ್ಷಾ ಅಕ್ರಮದಲ್ಲಿ ತೇರ್ಗಡೆಯಾಗಿ ಎಫ್‌ಐಆರ್‌ನಲ್ಲಿ ಹೆಸರಿರುವ ಅಭ್ಯರ್ಥಿಯೊಬ್ಬರ ಸಂಬಂಧಿಕರು ಹಾಗೂ ಸ್ನೇಹಿತರು ಡಾ. ಮಂಜುನಾಥ್ ಅವರಿಗೆ ಕರೆ ಮಾಡಿ, ಒಂದು ವೇಳೆ ಆಕೆ (ಆರೋಪಿ ಅಭ್ಯರ್ಥಿ) ಸೂಸೈಡ್ ಮಾಡಿಕೊಂಡರೆ ಯಾರು ಹೊಣೆ? ಎಂದು ಪ್ರಶ್ನಿಸಿ ಮಾನಸಿಕವಾಗಿ ಒತ್ತಡ ಹೇರಲು ಯತ್ನಿಸಿದ್ದಾರೆ ಎನ್ನಲಾಗಿದೆ. ಜೊತೆಗೆ, ನೀವು ಏನು ದಾಖಲೆ ಇಟ್ಟುಕೊಂಡು ದೂರು ಕೊಟ್ಟಿದ್ದೀರಾ? ಯಾರು ಅಕ್ರಮ ಎಸಗಿದ್ದಾರೋ ಅವರ ವಿರುದ್ಧ ಹೋರಾಡಿ. ಆಗ ನಾವು ನಿಮಗೆ ಶಹಬ್ಬಾಸ್‌ಗಿರಿ ಕೊಡುತ್ತೇವೆ ಎಂದಿದ್ದಾರೆ ಎನ್ನಲಾಗಿದೆ.

ಮುಂದುವರೆದು, ಮತ್ತೊಬ್ಬ ದೂರುದಾರೆ ಭಾವನಗೂ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಅದರಂತೆ, ನೀನು ಎಲ್ಲಿ ಇರುತ್ತೀಯಾ ಹೇಳು? ಬೆಂಗಳೂರಿನಲ್ಲಿ ಇರುತ್ತೀಯಾ? ನಿನಗೆ 5 ರೂಪಾಯಿ ರೇಷನ್ ಕೂಡ ಸಿಗದಹಾಗೆ ಮಾಡಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಪ್ರಕರಣವೇನು?

ಪಶುಸಂಗೋಪನೆ ಇಲಾಖೆಯ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ಆರೋಪಿಸಿ ಜುಲೈ 25 ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಂಜುನಾಥ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಒಎಂಆರ್ ಶೀಟ್ ತಿದ್ದುಪಡಿ ಮಾಡಿರುವ ಆರೋಪ ಕೇಳಿಬಂದಿದೆ. ಜೊತೆಗೆ,  ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ (CID) ತಂಡವು ಕೆಪಿಎಸ್‌ಸಿಯ ಮಾಜಿ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಬಂಧಿಸಿ ಅಮಾನತುಗೊಳಿಸಿದೆ. ಇದರೊಂದಿಗೆ, ಈ ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ಡೀಲ್ ಕುದುರಿಸುತ್ತಿದ್ದ ಮುಖ್ಯ ಮಧ್ಯವರ್ತಿ ಬಸವರಾಜ್ ಕನ್ನಾಳೆ ಎಂಬಾತನನ್ನು ಸಿಐಡಿ ಬಂಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ