ಪರಪ್ಪನ ಅಗ್ರಹಾರ - ಪ್ರಜ್ವಲ್ ರೇವಣ್ಣ 
ರಾಜ್ಯ

ಪರಪ್ಪನ ಅಗ್ರಹಾರ ಜೈಲಲ್ಲಿದ್ದ ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಸಂಕಷ್ಟ; ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್!

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಮೊಬೈಲ್ ಫೋನ್ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮಂಗಳವಾರ ಇಲ್ಲಿನ ನ್ಯಾಯಾಲಯ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಜೈಲಿನೊಳಗೆ ಮೊಬೈಲ್ ಫೋನ್ ಬಳಕೆ ಆರೋಪದ ನಂತರ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಮತ್ತು ಸಹ ಆರೋಪಿ ಪ್ರತಾಪ್ ರೈ ಅವರನ್ನು ಇಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಸಿದ ಆರೋಪ ಸಂಬಂಧ ಪೊಲೀಸರು ಇದೀಗ ತನಿಖೆಯನ್ನು ತೀವ್ರಗೊಳಿಸಿದ್ದು, ಮೊಬೈಲ್ ಹೇಗೆ ಸಿಕ್ಕಿತು? ಯಾರು ಕೊಟ್ಟರು ಎಂಬುವುದನ್ನು ಪತ್ತೆಹಚ್ಚಲು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ನೀಡುವಂತೆ ಕೋರ್ಟ್​​ಗೆ ಮನವಿ ಮಾಡಿದ್ದರು.

ಈ ಕುರಿತು ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಜೈಲಿನೊಳಗೆ ಫೋನ್ ಬಳಕೆ ಆರೋಪದ ಕುರಿತು ಹೆಚ್ಚಿನ ತನಿಖೆ ನಡೆಸಲು ಅನುಕೂಲವಾಗುವಂತೆ ಪ್ರಜ್ವಲ್ ರೇವಣ್ಣ ಮತ್ತು ರೈ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಇತ್ತೀಚೆಗೆ ಕೇಂದ್ರ ಅಪರಾಧ ಶಾಖೆ (ಸಿಸಿಬಿ) ಜೈಲಿನಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಮೊಬೈಲ್ ಫೋನ್ ಬಳಕೆ ಬೆಳಕಿಗೆ ಬಂದಿದ್ದು, ನಂತರ ಅಧಿಕಾರಿಗಳು ಹೆಚ್ಚಿನ ಭದ್ರತಾ ಸೌಲಭ್ಯದೊಳಗೆ ಮೊಬೈಲ್ ಫೋನ್ ಹೇಗೆ ಅವರಿಗೆ ಲಭ್ಯವಾಯಿತು ಎಂಬುದರ ಕುರಿತು ತನಿಖೆ ಆರಂಭಿಸಿದರು.

ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗ ನಡೆಸಿದ ದಾಳಿಯಲ್ಲಿ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಪತ್ತೆಯಾಗಿತ್ತು. ಈ ಫೋನಿನಲ್ಲಿ ಫೇಸ್‌ಬುಕ್, ವಾಟ್ಸಾಪ್, ಇನ್‌ಸ್ಟಾಗ್ರಾಂ, ನೆಟ್‌ಫ್ಲಿಕ್ಸ್ ಹಾಗೂ ಅಮೆಜಾನ್ ಪ್ರೈಮ್‌ನಂತಹ ಆ್ಯಪ್‌ಗಳು ಇದ್ದವು. ಮನೆಯವರು ಹಾಗೂ ವಕೀಲರ ಜತೆ ಮಾತನಾಡಲು ಇದನ್ನು ಬಳಸುತ್ತಿದ್ದುದು ಬೆಳಕಿಗೆ ಬಂದಿತ್ತು. ಮೊಬೈಲ್ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಪ್ರತಾಪ್ ಎಂಬಾತನನ್ನು ಮೊದಲ ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!

Ramayana: 100 ಕೋಟಿ ಸಂಭಾವನೆ ತಿರಸ್ಕರಿಸಿದ ಯಶ್; 'ರಾಮಾಯಣ'ದ ದಕ್ಷಿಣ ಭಾರತ ವಿತರಕ ಹಕ್ಕು ಪಡೆದ ರಾಕಿಂಗ್ ಸ್ಟಾರ್!

ರೀಲ್ಸ್ ಹುಚ್ಚಾಟ; ವಿಡಿಯೋ ಮಾಡುವ ವೇಳೆ 40 ಅಡಿ ಕೆಳಗೆ ಬಿದ್ದ ಯುವಕ; 2 ರಿಕ್ಷಾಗಳು ಜಖಂ, ಯುವಕ ಪಾರು, Video

'ಶೀಘ್ರದಲ್ಲೇ ಶುಗರ್ ಡ್ಯಾಡಿಯನ್ನು ಕೊಲ್ಲುತ್ತೇನೆ': ಪತ್ನಿ ಕೊಂದು ತಲೆಯನ್ನು ಫ್ರಿಡ್ಜ್‌ನಲ್ಲಿ ಇಟ್ಟಿದ್ದ ಪಾಪಿ, ಪೊಲೀಸರ ಮುಂದೆಯೇ ಬೆದರಿಕೆ!