ಸಿಎಂ ಡಿಕೆ ಶಿವಕುಮಾರ್ online desk
ರಾಜ್ಯ

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಧಾನಸೌಧಕ್ಕೆ ದೌಡಾಯಿಸಿದ ವೈದ್ಯರು! CMಗೆ ಏನಾಯ್ತು?

ಡಿ.ಕೆ. ಶಿವಕುಮಾರ್ ಅವರ ರಕ್ತದೊತ್ತಡದಲ್ಲಿ ಇಂದು ವಿಧಾನಸೌಧದಲ್ಲಿ ಏರುಪೇರು ಉಂಟಾಗಿತ್ತು. ತಕ್ಷಣವೇ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಡಿ.ಕೆ.ಶಿ ಅವರ ಆರೋಗ್ಯ ಚೇತರಿಸಿದ್ದು, ಸಹಜ ಸ್ಥಿತಿಗೆ ಮರಳಿದೆ.

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಕಾರಣ ಅವರಿಗೆ ವಿಧಾನಸೌಧದಲ್ಲೇ ಚಿಕಿತ್ಸೆ ನೀಡಲಾಗಿದೆ.

ನಿರಂತರ ಕೆಲಸದ ಒತ್ತಡ ಮತ್ತು ಓಡಾಟದ ದಣಿವಿನಿಂದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಕ್ತದೊತ್ತಡದಲ್ಲಿ ಇಂದು ವಿಧಾನಸೌಧದಲ್ಲಿ ಏರುಪೇರು ಉಂಟಾಗಿತ್ತು. ತಕ್ಷಣವೇ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಬಳಿಕ ಡಿ.ಕೆ.ಶಿ ಅವರ ಆರೋಗ್ಯ ಚೇತರಿಸಿದ್ದು, ಸಹಜ ಸ್ಥಿತಿಗೆ ಮರಳಿದೆ.

ವಿಧಾನಸೌಧದಲ್ಲೇ ಚಿಕಿತ್ಸೆ

ಇಂದು ಮಧ್ಯಾಹ್ನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸದಲ್ಲಿ ನಿರತರಾಗಿದ್ದಾಗ, ಡಿ.ಕೆ. ಶಿವಕುಮಾರ್ ಅವರಿಗೆ ಅಲ್ಪ ಸುಸ್ತು ಹಾಗೂ ವ್ಯತ್ಯಾಸ ಕಂಡುಬಂದಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ವಿಧಾನಸೌಧದ ವೈದ್ಯರನ್ನು ಕರೆಸಲಾಯಿತು.

ಸಿಎಂ ಕಚೇರಿಗೆ ಆಗಮಿಸಿದ ವೈದ್ಯರ ತಂಡ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ತಪಾಸಣೆ ನಡೆಸಿದಾಗ ಪ್ರಾಥಮಿಕ ತಪಾಸಣೆಯಲ್ಲಿ ರಕ್ತದೊತ್ತಡದಲ್ಲಿ ಏರುಪೇರಾಗಿರುವುದು ಕಂಡುಬಂದಿದೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆದ ನಂತರ ಈಗ ಅವರ ರಕ್ತದೊತ್ತಡ ಸಹಜ ಸ್ಥಿತಿಗೆ ಮರಳಿದೆ ಎಂದು ತಿಳಿದುಬಂದಿದೆ.

ಸಿಎಂ ಡಿಕೆ ಶಿವಕುಮಾರ್, ನಿನ್ನೆಯಿಂದ ರಾಜ್ಯದ ವಿವಿಧೆಡೆ ತೀವ್ರ ಪ್ರಯಾಣ ನಡೆಸಿದ್ದರು. ಇಂದು ಬೆಳಿಗ್ಗೆಯೂ ಸತತ ಸಭೆ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಈ ನಿರಂತರ ಓಡಾಟ ಮತ್ತು ಕೆಲಸದ ಒತ್ತಡದಿಂದಾಗಿ ರಕ್ತದೊತ್ತಡದಲ್ಲಿ ವ್ಯತ್ಯಾಸ ಉಂಟಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

‘ನಮಗೆ ಸೇಡು ಬೇಡ, ನ್ಯಾಯ ಬೇಕು’: ಮಣಿಪುರ ಸಂಗೀತ ಶಿಕ್ಷಕನ ಪತ್ನಿ ಕಣ್ಣೀರು

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!