ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅರಣ್ಯ ಇಲಾಖೆ ಹಾಗೂ ಸಿರ್ಸಿ ಫಾರೆಸ್ಟ್ ಮೊಬೈಲ್ ಸ್ಕ್ವಾಡ್ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಇಬ್ಬರು ಬೇಟೆಗಾರರ ಬಂಧಿಸಿ, ಭಾರೀ ಪ್ರಮಾಣದ ವನ್ಯಜೀವಿ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.
ವನ್ಯಜೀವಿಗಳ ಬೇಟೆ ಹಾಗೂ ಅಕ್ರಮ ಸಾಗಾಟದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಬಂಧಿತರು ಗೋವಾ ಹಾಗೂ ಉತ್ತರ ಕನ್ನಡದ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ತಂಡವೊಂದರ ಭಾಗವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆರೋಪಿಗಳಿಂದ ವಿವಿಧ ರೀತಿಯ ವನ್ಯಜೀವಿ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೂಲ ಹಾಗೂ ಬೇಟೆಯ ಚಟುವಟಿಕೆಗಳ ಕುರಿತು ಅರಣ್ಯಾಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ವನ್ಯಜೀವಿ ಬೇಟೆ, ಅಕ್ರಮ ಸಾಗಾಟ ಹಾಗೂ ವನ್ಯಜೀವಿ ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಜಾಲವನ್ನು ಪತ್ತೆಹಚ್ಚಲು ತನಿಖೆ ಚುರುಕುಗೊಂಡಿದೆ.
ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಹಾಗೂ ಸಿರ್ಸಿ ಫಾರೆಸ್ಟ್ ಮೊಬೈಲ್ ಸ್ಕ್ವಾಡ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.