ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನಗಳ ಆಡಳಿತ ಪೂರೈಸಿದೆ  
ರಾಜ್ಯ

CM ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ 100 ದಿನಗಳ ಆಡಳಿತ ಸಂಭ್ರಮ: ವಿಧಾನಸೌಧದಲ್ಲಿ ಕಾರ್ಯಕ್ರಮ; Video

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಇಂದು ಗುರುವಾರ 100 ದಿನಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ “ದೃಢ ಕರ್ನಾಟಕ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ” ಎಂಬ ವಿಶೇಷ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಿದ್ದಾರೆ.

ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ರಾಜ್ಯದ ಎಲ್ಲ ಸಚಿವರು, ಶಾಸಕರು, ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು, ವಿವಿಧ ಕ್ಷೇತ್ರಗಳ ಕಾರ್ಮಿಕರು ಹಾಗೂ ಸಮಾಜದ ವಿವಿಧ ವರ್ಗಗಳ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಡಿ ಕೆ ಶಿವಕುಮಾರ್ ಅವರು ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಲಿದ್ದು, ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ತಮ್ಮ ಜೀವನದ ಮೇಲೆ ಬೀರಿರುವ ಪರಿಣಾಮ ಹಾಗೂ ರಾಜ್ಯದ ಭವಿಷ್ಯದ ಅಭಿವೃದ್ಧಿಯ ಕುರಿತು ಅವರೊಂದಿಗೆ ಚರ್ಚಿಸಲಿದ್ದಾರೆ.

ರೈತರು, ಆಟೊರಿಕ್ಷಾ ಚಾಲಕರು, ಕೂಲಿ ಕಾರ್ಮಿಕರು, ಗಿಗ್‌ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್‌ನ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಅವರು ಮೇ 28ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘BRICS‌ ನಿಂದ ಭಾರತಕ್ಕೇನು ಲಾಭ?’: ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನೆ, ತಿರುಗೇಟು ಕೊಟ್ಟ BJP

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಬೆಂಗಳೂರಿಗರಿಗೆ Good News: ಸಿದ್ಧವಾಯ್ತು ಸಹಾಯ 3.0 ಪೋರ್ಟಲ್‌: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ದೂರು ಸಲ್ಲಿಸಲು ಅವಕಾಶ..!