ಕೆಎನ್ ರಾಜಣ್ಣ ಮತ್ತು ಎಸ್ ರವಿ 
ರಾಜ್ಯ

ಕೆ.ಎನ್ ರಾಜಣ್ಣಗೆ ಮುಖಭಂಗ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ CM ಆಪ್ತ ಎಸ್.ರವಿ ಅವಿರೋಧ ಆಯ್ಕೆ!

ಅಪೆಕ್ಸ್‌ ಬ್ಯಾಂಕ್‌ಗೆ 4 ತಿಂಗಳ ಮೊದಲೇ ಚುನಾವಣೆ ನಡೆಯಬೇಕಿತ್ತು. ಆದರೆ ಆಕಾಂಕ್ಷಿಗಳ ಮಧ್ಯೆ ಪ್ರಭಲ ಸ್ಪರ್ಧೆ ಇದ್ದ ಕಾರಣ ಚುನಾವಣೆ ಮುಂದೂಡಿಕೆಯಾಗಿತ್ತು. ಅಂತಿಮವಾಗಿ ರವಿ ಮತ್ತು ರಾಜಣ್ಣ ಮಧ್ಯೆ ಪೈಪೋಟಿ ತೀವ್ರವಾಗಿತ್ತು.

ಬೆಂಗಳೂರು: ರಾಜ್ಯ ಸಹಕಾರ ಕ್ಷೇತ್ರದ ಪ್ರಮುಖ ಸಂಸ್ಥೆಯಾದ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಗಾದಿ ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ ಅವರ ಪಾಲಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಶರಣಗೌಡ ಬಯ್ಯಾಪುರ ಆಯ್ಕೆಯಾಗಿದ್ದಾರೆ.

ಅಪೆಕ್ಸ್‌ ಬ್ಯಾಂಕ್‌ಗೆ 4 ತಿಂಗಳ ಮೊದಲೇ ಚುನಾವಣೆ ನಡೆಯಬೇಕಿತ್ತು. ಆದರೆ ಆಕಾಂಕ್ಷಿಗಳ ಮಧ್ಯೆ ಪ್ರಭಲ ಸ್ಪರ್ಧೆ ಇದ್ದ ಕಾರಣ ಚುನಾವಣೆ ಮುಂದೂಡಿಕೆಯಾಗಿತ್ತು. ಅಂತಿಮವಾಗಿ ರವಿ ಮತ್ತು ರಾಜಣ್ಣ ಮಧ್ಯೆ ಪೈಪೋಟಿ ತೀವ್ರವಾಗಿತ್ತು. ಆದರೆ ಇಂದು ಕಾಂಗ್ರೆಸ್‌ ಹೈಕಮಾಂಡ್‌ ರವಿ ಅವರಿಗೆ ಅಧ್ಯಕ್ಷ ಸ್ಥಾನ, ಶರಣಗೌಡ ಬಯ್ಯಾಪುರ ಅವರಿಗೆ ಉಪಾಧ್ಯಕ್ಷ ಸ್ಥಾನವನ್ನು ಕಲ್ಪಿಸಿ ಕುತೂಹಲಕ್ಕೆ ತೆರೆ ಎಳೆದಿದೆ.

ಮೊದಲ ಎರಡೂವರೆ ವರ್ಷಕ್ಕೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಎಂಎಲ್​ಸಿ ಎಸ್.ರವಿ, ಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ್ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕೊನೆಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಬಂಧಿ ಹಾಗೂ ಆಪ್ತರಾಗಿರುವ ವಿಧಾನ ಪರಿಷತ್ ಸದಸ್ಯ ರವಿ ಅವರಿಗೆ ಸ್ಥಾನ ಕೊಡಿಸುವಲ್ಲಿ ಗೆದ್ದಿದ್ದಾರೆ. ಸಿದ್ದರಾಮಯ್ಯ ಆಪ್ತ ರಾಜಣ್ಣ ಅವರಿಗೆ ನಿರಾಸೆಯಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಕೈತಪ್ಪಿದ ಹಿನ್ನೆಲೆ KN ರಾಜಣ್ಣ ಅಸಮಾಧಾನಗೊಂಡಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹುದ್ದೆಗಾಗಿ, ಸಿದ್ದರಾಮಯ್ಯ ಪರಮೇಶ್ವರ್ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ರಾಜಣ್ಣ ಒತ್ತಡ ಹಾಕಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ರಾಜಣ್ಣ ಒತ್ತಡಕ್ಕೆ ಮಣಿಯಲಿಲ್ಲ.

11 ವರ್ಷ ಇತಿಹಾಸ ಇರುವ ಅಫೆಕ್ಸ್ ಬ್ಯಾಂಕ್ ಚುನಾವಣೆ ಹಿನ್ನೆಲೆ, ಎಲ್ಲಾ ನಿರ್ದೇಶಕ, ಸಿಎಂ ಅಭಿಪ್ರಾಯದ ಮೇರೆಗೆ ಬ್ಯಾಂಕ್‌ನ ಅಧ್ಯಕ್ಷರನ್ನ ಅವಿರೋಧವಾಗಿ ಘೋಷಣೆ ಮಾಡಿದ್ದೇವೆ. ಅಧ್ಯಕ್ಷರಾಗಿ ಎಸ್​ ರವಿ ಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ್‌ರನ್ನ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದೇವೆ ಎಂದಿದ್ದಾರೆ.

ನಿನ್ನೆ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. ನಿರ್ದೇಶಕರು, ಸಚಿವರು ಎಲ್ಲರೂ ಇದ್ದರೂ. ಈ ಬ್ಯಾಂಕ್‌ನಲ್ಲಿ ಬಹುತೇಕ ಚುನಾವಣೆ ನಡೆಯದ ಪರಂಪರೆ. ಈ ಪರಂಪರೆಯನ್ನ ಮುಂದುವರೆಸಲಾಗಿದೆ. 2.5 ವರ್ಷಕ್ಕೆ ಸೀಮಿತವಾಗಿ ಆಯ್ಕೆ ಮಾಡಲಾಗಿದೆ. ಅವಧಿ ಮುಗಿದ ಬಳಿಕ ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟು ಇನ್ನಿಬ್ಬರಿಗೆ ಅವಕಾಶ ಕೊಡಬೇಕು ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!

‘BRICS‌ ನಿಂದ ಭಾರತಕ್ಕೇನು ಲಾಭ?’: ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನೆ, ತಿರುಗೇಟು ಕೊಟ್ಟ BJP

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

Cricket: ಇಂಗ್ಲೆಂಡ್ ನಲ್ಲೂ ಪಾಕಿಸ್ತಾನ ಕ್ರಿಕೆಟಿಗರಿಗೆ ಮುಖಭಂಗ, ವಲಸಿಗರೆಂದು ತಪ್ಪಾಗಿ ಭಾವಿಸಿ ಪ್ರತಿಭಟನೆ! ಮುಂದೇನಾಯ್ತು?

2.5 ಲಕ್ಷ ರೂ ಸಾಲಶೂಲಕ್ಕೆ ಸಿವಿಲ್ ಸರ್ವಿಸ್ ಆಕಾಂಕ್ಷಿ ಬಲಿ; ಸಾವಿಗೂ ಮುನ್ನ 19 ಮಂದಿಯ ಹೆಸರುಗಳ ಉಲ್ಲೇಖ!