ಸಚಿವ ಶಿವಲಿಂಗೇ ಗೌಡಗೆ ಬಾಲಕಿ ಪ್ರಶ್ನೆ  
ರಾಜ್ಯ

'ನಾವು ದಲಿತರು ಅಂತ ಹೀಗೆ ಮಾಡೋದಾ ಸರ್?': ಬಾಲಕಿಯ ಪ್ರಶ್ನೆಗೆ ಸಚಿವ ಶಿವಲಿಂಗೇ ಗೌಡ ಗರಂ; Video

ಗ್ರಾಮವೊಂದರಲ್ಲಿ ಮೂಲಸೌಕರ್ಯ ಹಾಗೂ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಸಚಿವರ ಮುಂದೆ ಅಹವಾಲು ತೋಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಬಾಲಕಿ, ತಮ್ಮ ಭಾಗದ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಾ ನಾವು ದಲಿತರು ಅಂತ ಹೀಗೆ ಮಾಡೋದಾ ಸರ್ ಎಂದು ನೇರವಾಗಿ ಪ್ರಶ್ನಿಸಿದ್ದಾಳೆ.

ಅರಸೀಕೆರೆ ಶಾಸಕ ಹಾಗೂ ಸಚಿವ ಕೆ. ಎಮ್. ಶಿವಲಿಂಗೇಗೌಡ ಅವರು ಸಾರ್ವಜನಿಕರ ಕುಂದುಕೊರತೆ ಆಲಿಸುವ ಸಂದರ್ಭದಲ್ಲಿ ಬಾಲಕಿಯೊಬ್ಬಳು ಕೇಳಿದ ಪ್ರಶ್ನೆಗೆ ಕೋಪಗೊಂಡು ಗರಂ ಆದ ಘಟನೆ ನಡೆದಿದೆ.

ಗ್ರಾಮವೊಂದರಲ್ಲಿ ಮೂಲಸೌಕರ್ಯ ಹಾಗೂ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಸಚಿವರ ಮುಂದೆ ಅಹವಾಲು ತೋಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಬಾಲಕಿ, ತಮ್ಮ ಭಾಗದ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಾ ನಾವು ದಲಿತರು ಅಂತ ಹೀಗೆ ಮಾಡೋದಾ ಸರ್ ಎಂದು ನೇರವಾಗಿ ಪ್ರಶ್ನಿಸಿದ್ದಾಳೆ.

ಹಾಸನ ಜಿಲ್ಲೆಯ ಶಾಂತಿಗ್ರಾಮದ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ವರದಿ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹಾಸ್ಟೆಲ್‌ನ ಸರಿಯಾದ ವ್ಯವಸ್ಥೆ ಇಲ್ಲದೆ ಬಾಲಕಿಯರು ತಗಡಿನ ಶೆಡ್‌ನಲ್ಲಿ ವಾಸಿಸುತ್ತಿದ್ದ ಪರಿಸ್ಥಿತಿಯನ್ನು ಕಂಡು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಲಕಿಯ ಈ ಮಾತಿನಿಂದ ತೀವ್ರ ಅಸಮಾಧಾನಗೊಂಡ ಸಚಿವರು ವೇದಿಕೆಯ ಮೇಲೆಯೇ ಆಕೆಯ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ತಮ್ಮ ಊರಿನ ರಸ್ತೆ, ನೀರು ಅಥವಾ ಇತರ ಮೂಲಸೌಕರ್ಯಗಳ ಕೊರತೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಬಾಲಕಿ, ತಾರತಮ್ಯ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ಸಚಿವರನ್ನು ಪ್ರಶ್ನೆ ಕೇಳಿದ್ದಾಳೆ. ಈ ಮಾತನ್ನು ಕೇಳುತ್ತಿದ್ದಂತೆ ಕೋಪಗೊಂಡ ಶಿವಲಿಂಗೇಗೌಡರು, ಅಭಿವೃದ್ಧಿ ಕೆಲಸಗಳಲ್ಲಿ ನಾವು ಯಾವುದೇ ಜಾತಿ ಭೇದ ಮಾಡುವುದಿಲ್ಲ ಎಂದು ಆಕೆಗೆ ತರಾಟೆಗೆ ತಗೆದುಕೊಂಡರು.

ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಇಂತಹ ಸೂಕ್ಷ್ಮ ಸಮಸ್ಯೆಗಳನ್ನು ತಕ್ಷಣವೇ ಪರಿಶೀಲಿಸಿ ಬಗೆಹರಿಸುವಂತೆ ಸಚಿವರು ಸೂಚನೆ ನೀಡಿದರು.

ಮೂಲಭೂತ ಸೌಕರ್ಯಗಳೂ ಇಲ್ಲದ ಜಾಗದಲ್ಲಿ ಹೆಣ್ಣುಮಕ್ಕಳು ಕಷ್ಟಪಡುತ್ತಿರುವ ದೃಶ್ಯಗಳನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದವು.ಶಾಂತಿಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಕಟ್ಟಡ ದುರಸ್ತಿಯಲ್ಲಿದ್ದ ಕಾರಣ, ಅಲ್ಲಿನ ವಿದ್ಯಾರ್ಥಿನಿಯರನ್ನು ಸರಿಯಾದ ಸೌಲಭ್ಯವಿಲ್ಲದ ತಗಡಿನ ಶೆಡ್‌ಗೆ ಸ್ಥಳಾಂತರಿಸಲಾಗಿತ್ತು.

ಸಚಿವರು ಸ್ಥಳಕ್ಕೆ ಭೇಟಿ ನೀಡಿದಾಗ ಬಾಲಕಿಯೊಬ್ಬಳು ತನ್ನ ನೋವನ್ನು ತೋಡಿಕೊಳ್ಳುತ್ತಾ, ನಾವು ದಲಿತರು ಅಂದಾಕ್ಷಣ ನಮ್ಮನ್ನು ಈ ರೀತಿ ನಡೆಸಿಕೊಳ್ಳಬೇಕಾ ಸರ್? ಕನಿಷ್ಠ ಸೌಲಭ್ಯಗಳೂ ಇಲ್ಲದ ಶೆಡ್‌ನಲ್ಲಿ ನಮ್ಮನ್ನು ಇಟ್ಟಿದ್ದಾರೆ ಎಂದು ಪ್ರಶ್ನಿಸಿದ್ದಾಳೆ.

ಬಾಲಕಿಯ ಈ ಮಾತುಗಳನ್ನು ಕೇಳಿ ಭಾವುಕರಾದ ಹಾಗೂ ಕೆರಳಿದ ಸಚಿವ ಶಿವಲಿಂಗೇಗೌಡರು ಸ್ಥಳದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಜರೆದರು. ಸಚಿವರು ಅಧಿಕಾರಿಗೆ ನೇರವಾಗಿ ನಿನ್ನ ಸ್ವಂತ ಮಕ್ಕಳಾಗಿದ್ದರೆ ಇಂತಹ ಶೆಡ್‌ನಲ್ಲಿ ಮಲಗಿಸುತ್ತಿದ್ದೀಯಾ, ಇವರಿಗೆ ಸೂಕ್ತ ವ್ಯವಸ್ಥೆ ಮಾಡಲು ನಿನಗೇನು ರೋಗ ಬಂದಿತ್ತಾ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಬೆಂಗಳೂರಿಗರಿಗೆ Good News: ಸಿದ್ಧವಾಯ್ತು ಸಹಾಯ 3.0 ಪೋರ್ಟಲ್‌: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ದೂರು ಸಲ್ಲಿಸಲು ಅವಕಾಶ..!

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ