ಡಾ ಜಿ ಪರಮೇಶ್ವರ್  
ರಾಜ್ಯ

ರಾಜ್ಯದಲ್ಲಿ ಬರದಿಂದ 18 ಸಾವಿರ ಕೋಟಿ ರೂ. ನಷ್ಟ; ಪರಿಹಾರ ಕೋರಿ ಶೀಘ್ರದಲ್ಲೇ ಕೇಂದ್ರಕ್ಕೆ ಮನವಿ: DCM ಪರಮೇಶ್ವರ್

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ನಿಯಮಗಳ ಅನ್ವಯ ವಿಪತ್ತು ಪರಿಹಾರ ನೀಡುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮೊದಲ ಅಧಿಕೃತ ಮನವಿ ಸಲ್ಲಿಸಲಿದೆ.

ಬೆಂಗಳೂರು: ಆರಂಭಿಕ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲಾಗಿರುವ 101 ತಾಲೂಕುಗಳಲ್ಲಿ ಬೆಳೆ ಹಾಗೂ ಆರ್ಥಿಕ ನಷ್ಟ ಒಟ್ಟಾರೆ ಅಂದಾಜು 18,000 ಕೋಟಿಯಷ್ಟಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಬುಧವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಖಾತೆಯನ್ನೂ ಹೊಂದಿರುವ ಪರಮೇಶ್ವರ್‌ ಅವರು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ನಿಯಮಗಳ ಅನ್ವಯ ವಿಪತ್ತು ಪರಿಹಾರ ನೀಡುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮೊದಲ ಅಧಿಕೃತ ಮನವಿ ಸಲ್ಲಿಸಲಿದೆ ಎಂದು ಹೇಳಿದರು. ನಷ್ಟದ ಸಮಗ್ರ ಮೌಲ್ಯಮಾಪನ ಪೂರ್ಣಗೊಂಡಂತೆ ಹೆಚ್ಚುವರಿ ಮನವಿಗಳನ್ನೂ ಸಲ್ಲಿಸಲಾಗುವುದು ಎಂದು ತಿಳಿಸಿದರು.

2020ರ ಕೇಂದ್ರ ಸರ್ಕಾರದ ಬರ ನಿರ್ಧಾರ ಕೈಪಿಡಿಯಲ್ಲಿ ನಿಗದಿಪಡಿಸಿರುವ ಉಪಗ್ರಹ ಚಿತ್ರಗಳು, ಮಣ್ಣಿನ ತೇವಾಂಶ ಹಾಗೂ ಮಳೆ ಕೊರತೆಯ ಅವಧಿಯ ಮಾನದಂಡಗಳ ಆಧಾರದ ಮೇಲೆ 101 ತಾಲೂಕುಗಳನ್ನು ಈಗಾಗಲೇ ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗಿದೆ.

ಇನ್ನೂ 42 ತಾಲೂಕುಗಳಲ್ಲಿ ಸ್ಥಳ ಪರಿಶೀಲನೆ ನಡೆಯುತ್ತಿದ್ದು, 24 ತಾಲೂಕುಗಳಲ್ಲಿ ಪರಿಶೀಲನೆ ಪೂರ್ಣಗೊಂಡಿದೆ. ಉಳಿದ 18 ತಾಲೂಕುಗಳಲ್ಲಿ ಪರಿಶೀಲನೆ ಮುಂದುವರಿದಿದೆ ಎಂದು ತಿಳಿಸಿದರು.

ಹಿಂದಿನ ಬರದ ಸಂದರ್ಭದಲ್ಲೂ ಕರ್ನಾಟಕವು ಕೇಂದ್ರದಿಂದ ಹೆಚ್ಚಿನ ನೆರವು ಕೋರಿತ್ತು. ಆದರೆ, ಸುಪ್ರೀಂ ಕೋರ್ಟ್‌ ಮೊರೆ ಹೋದ ಬಳಿಕ ಕೇವಲ 3,500 ಕೋಟಿ ರೂ. ನೆರವು ದೊರೆತಿತ್ತು. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ರೈತರಿಗೆ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದುವರಿದು ಪ್ರಯತ್ನಿಸಲಿದೆ. ಸಾಲ ಮನ್ನಾ ಸೇರಿದಂತೆ ವಿವಿಧ ಕ್ರಮಗಳನ್ನೂ ಪರಿಗಣಿಸಲಾಗುವುದು. ಆದರೆ, ದೇಶಾದ್ಯಂತ ರೈತರ ಸಾಲ ಮನ್ನಾ ಮಾಡುವುದು ಮುಖ್ಯವಾಗಿ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಒಳಪಟ್ಟ ವಿಷಯವಾಗಿದೆ ಎಂದು ಹೇಳಿದರು.

ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ 72,000 ಕೋಟಿ ರೂ. ಕೃಷಿ ಸಾಲವನ್ನು ಮನ್ನಾ ಮಾಡಿತ್ತು. ಇದೇ ರೀತಿಯ ಸಾಲ ಮನ್ನಾಕ್ಕಾಗಿ ರಾಜ್ಯದ ಬಿಜೆಪಿ ನಾಯಕರು, ಸಂಸದರು ಸೇರಿದಂತೆ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ದು ನೆರವು ಪಡೆಯಲಿ ಎಂದು ಸಲಹೆ ನೀಡಿದರು.

ಈ ಹಿಂದೆ ರಾಜ್ಯ ಸರ್ಕಾರಗಳೂ ರೈತರ ಸಾಲ ಮನ್ನಾ ಮಾಡಿವೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ರೈತರ ಸಾಲ ಮನ್ನಾ ಮಾಡಲಾಗಿತ್ತು ಎಂದು ಅವರು ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಬೆಂಗಳೂರಿಗರಿಗೆ Good News: ಸಿದ್ಧವಾಯ್ತು ಸಹಾಯ 3.0 ಪೋರ್ಟಲ್‌: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ದೂರು ಸಲ್ಲಿಸಲು ಅವಕಾಶ..!

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ