ಡಿಕೆ.ಶಿವಕುಮಾರ್  
ರಾಜ್ಯ

'ಕೈ' ಕಾರ್ಯಕರ್ತರಿಗೆ ಬಿಗ್‌ ಪವರ್‌: ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಸಮಿತಿ ರಚನೆಗೆ ಡಿಕೆಶಿ ಸೂಚನೆ..!

ಕಾಂಗ್ರೆಸ್‌ ತ್ಯಾಗ, ಜೀವನ ಮತ್ತು ಶಕ್ತಿಯ ಪ್ರತೀಕವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಹಲವು ವರ್ಷಗಳ ಕಾಲ ಜೈಲಿನಲ್ಲಿದ್ದರು. ಇಂದಿರಾ ಗಾಂಧಿ ಮತ್ತು ರಾಜೀವ್‌ ಗಾಂಧಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು.

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕರ್ತರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆರು ಸದಸ್ಯರ ಗ್ಯಾರಂಟಿ ಸಮಿತಿಗಳನ್ನು ರಚಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಮುಂದಿನ ವಾರದೊಳಗೆ ಸಮಿತಿಗಳನ್ನು ರಚಿಸುವಂತೆ ಶಾಸಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಭಾರತ್‌ ಜೋಡೋ ಯಾತ್ರೆಯ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು,ಪಕ್ಷದ ಕಾರ್ಯಕರ್ತರು ನಮ್ಮೊಂದಿಗೆ ಇದ್ದರೆ ಅವರನ್ನು ಸಬಲೀಕರಣಗೊಳಿಸಲು ನಾವು ಸಿದ್ಧರಿದ್ದೇವೆ. ಪ್ರತಿ ತಾಲ್ಲೂಕಿನಲ್ಲಿ ಸುಮಾರು 250 ಮಂದಿಗೆ ಅಧಿಕಾರ ನೀಡಲಾಗುವುದು” ಎಂದು ಹೇಳಿದರು.

ಕಾಂಗ್ರೆಸ್‌ ಕಾರ್ಯಕರ್ತರಂತೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರಿಗೆ ತ್ರಿವರ್ಣ ಧ್ವಜ ಹಿಡಿದು ನಡೆಯಲು ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್‌ ತ್ಯಾಗ, ಜೀವನ ಮತ್ತು ಶಕ್ತಿಯ ಪ್ರತೀಕವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಹಲವು ವರ್ಷಗಳ ಕಾಲ ಜೈಲಿನಲ್ಲಿದ್ದರು. ಇಂದಿರಾ ಗಾಂಧಿ ಮತ್ತು ರಾಜೀವ್‌ ಗಾಂಧಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಸೋನಿಯಾ ಗಾಂಧಿ ಅಧಿಕಾರವನ್ನು ತ್ಯಾಗ ಮಾಡಿದರು. ಬಿಜೆಪಿಯಲ್ಲಿ ತಮ್ಮ ಪ್ರಾಣ ಅಥವಾ ಅಧಿಕಾರವನ್ನು ತ್ಯಾಗ ಮಾಡಿದವರು ಯಾರಾದರೂ ಇದ್ದಾರೆಯೇ? ಎಂದು ಪ್ರಶ್ನಿಸಿದರು.

ಬಿಜೆಪಿ ಸದಸ್ಯರು ತಮ್ಮ ಪಾದಯಾತ್ರೆ ನಡೆಸಲಿ. ಅವರಿಗಿಂತ ನಾಲ್ಕು ಹೆಜ್ಜೆ ಮುಂದೆ ನಡೆಯುವ ಸಾಮರ್ಥ್ಯ ನಮಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಬೆಂಗಳೂರಿಗರಿಗೆ Good News: ಸಿದ್ಧವಾಯ್ತು ಸಹಾಯ 3.0 ಪೋರ್ಟಲ್‌: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ದೂರು ಸಲ್ಲಿಸಲು ಅವಕಾಶ..!

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ