ಗ್ಯಾನೇಂದ್ರ ಕುಮಾರ್ - ಬಸವರಾಜ್ ಕನ್ನಾಳೆ 
ರಾಜ್ಯ

KPSC ನೇಮಕಾತಿ ಹಗರಣ: IAS ಅಧಿಕಾರಿ ಗಂಗ್ವಾರ್, ಕನ್ನಾಳೆಗೆ 14 ದಿನ ನ್ಯಾಯಾಂಗ ಬಂಧನ; ಮುಂದುವರೆದ CID ತನಿಖೆ..!

ಮುಂದಿನ ಹಂತದ ತನಿಖೆಯಲ್ಲಿ ಆರೋಪಿಗಳ ಪೊಲೀಸ್‌ ಕಸ್ಟಡಿ ಅಗತ್ಯವೆನಿಸಿದರೆ, ಮತ್ತೆ ಪೊಲೀಸ್‌ ಕಸ್ಟಡಿಗೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು.

ಬೆಂಗಳೂರು: ಅಮಾನತುಗೊಂಡಿರುವ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಗಂಗ್ವಾರ್ ಹಾಗೂ ಬಸವರಾಜ್‌ ಕನ್ನಾಳೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

10 ದಿನಗಳ ಅಪರಾಧ ತನಿಖಾ ದಳದ (ಸಿಐಡಿ) ಕಸ್ಟಡಿ ಅವಧಿ ಬುಧವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಬ್ಬರನ್ನೂ ಸಿಐಡಿ ಅಧಿಕಾರಿಗಳು ನಗರದ ನ್ಯಾಯಾಲಯದ ಮುಂದೆ ಮಂಗಳವಾರ ಹಾಜರುಪಡಿಸಿದರು.

ಈ ಹಂತದಲ್ಲಿ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಪಡೆಯುವ ಅಗತ್ಯವಿಲ್ಲ ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಾಲಯವು ಇಬ್ಬರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಮುಂದಿನ ಹಂತದ ತನಿಖೆಯಲ್ಲಿ ಆರೋಪಿಗಳ ಪೊಲೀಸ್‌ ಕಸ್ಟಡಿ ಅಗತ್ಯವೆನಿಸಿದರೆ, ಮತ್ತೆ ಪೊಲೀಸ್‌ ಕಸ್ಟಡಿಗೆ ಕೋರಿ ಅರ್ಜಿ ಸಲ್ಲಿಸಬಹುದು ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು.

ಗಂಗ್ವಾರ್ ಮತ್ತು ಕನ್ನಾಳೆ ಅವರು 10 ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿದ್ದು, ಈ ಅವಧಿಯಲ್ಲಿ ಅಧಿಕಾರಿಗಳು ಇಬ್ಬರನ್ನೂ ಸುದೀರ್ಘವಾಗಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ಮಾಹಿತಿಗಳು ತನಿಖಾಧಿಕಾರಿಗಳಿಗೆ ಲಭ್ಯವಾಗಿವೆ ಎಂದು ತಿಳಿದುಬಂದಿದೆ.

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕರಣದಲ್ಲಿನ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು. ಆಗಸ್ಟ್‌ 31ರಂದು ಅವರನ್ನು 10 ದಿನಗಳ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಈ ನಡುವೆ ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಬೆಂಗಳೂರಿಗರಿಗೆ Good News: ಸಿದ್ಧವಾಯ್ತು ಸಹಾಯ 3.0 ಪೋರ್ಟಲ್‌: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ದೂರು ಸಲ್ಲಿಸಲು ಅವಕಾಶ..!

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ