ಸತೀಶ್ ಜಾರಕಿಹೊಳಿ ಅವರ ಗೋಕಾಕ್‌ ನಿವಾಸ 
ರಾಜ್ಯ

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಪಡೆಯುವ ಸಲುವಾಗಿ ಈ ಕಂಪನಿಯು "ಭಾರಿ ಪ್ರಮಾಣದಲ್ಲಿ ಲಂಚ" ನೀಡಿದೆ ಮತ್ತು ಆ ಹಣವನ್ನು ವಿದೇಶಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.

ನವದೆಹಲಿ/ಬೆಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘಸಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ ಆರೋಪದಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಕುಟುಂಬ ಸದಸ್ಯರು ಮತ್ತು ಇತರ ಆಪ್ತರ ಮೇಲೆ ಬುಧವಾರ ಮತ್ತು ಗುರುವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಎರಡು ದಿನಗಳ ಕಾಲ ತೀವ್ರ ಶೋಧ ನಡೆಸಿದ್ದರು.

ಸತೀಶ್ ಜಾರಕಿಹೊಳಿ ಅವರ ಬೆಳಗಾವಿ ಹಾಗೂ ಬೆಂಗಳೂರು ಮನೆ, ಕಚೇರಿ, ಅವರ ಬಾಮೈದ, ಅಬಕಾರಿ ಇಲಾಖೆಯ ಜಂಟಿ ಆಯುಕ್ತ ವೈ. ಮಂಜುನಾಥ್ ಸೇರಿದಂತೆ ಅವರ ಆಪ್ತರ ಮನೆ ಸೇರಿದಂತೆ 18 ಕಡೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು.ದಾಳಿ ವೇಳೆ 3.45 ಕೋಟಿ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತಿಳಿಸಿದೆ.

ಸೆಪ್ಟೆಂಬರ್ 9-10 ರಂದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಅಡಿಯಲ್ಲಿ ನಡೆಸಿದ ಶೋಧನೆಯಲ್ಲಿ, ಜಾರಕಿಹೊಳಿ ಕುಟುಂಬವು ಅನೇಕ ವಿದೇಶಿ ಸಂಸ್ಥೆಗಳಲ್ಲಿ ಷೇರುಗಳನ್ನು "ಪಡೆದುಕೊಂಡಿರುವುದು" ಮತ್ತು ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರಿಂದ "ಲಂಚ" ಪಡೆದಿರುವುದು ಕಂಡುಬಂದಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಸತೀಶ್ ಜಾರಕಿಗೊಳಿ ನಿವಾಸ, ಬೆಂಗಳೂರಿನ ಡಾಲರ್ಸ್ ಕಾಲೋನಿ ಹಾಗೂ ಕ್ರೆಸೆಂಟ್ ರಸ್ತೆಯಲ್ಲಿರುವ ಅವರ ಕಚೇರಿ-ಕಮ್-ನಿವಾಸ; ಚಿಕ್ಕೋಡಿ ಸಂಸದೆಯಾಗಿರುವ ಅವರ ಪುತ್ರಿ 29 ವರ್ಷದ ಪ್ರಿಯಾಂಕಾ ಜಾರಕಿಹೊಳಿ, ಮಗ ರಾಹುಲ್ ಜಾರಕಿಹೊಳಿ ಮತ್ತು ಕರ್ನಾಟಕ ಅಬಕಾರಿ ಇಲಾಖೆಯ ಅಧಿಕಾರಿಯಾಗಿರುವ ಭಾವ ಮೈದುನ ವೈ.ಡಿ. ಮಂಜುನಾಥ್ ಅವರ ಆಸ್ತಿಗಳ ಮೇಲೆ ಇಡಿ ದಾಳಿ ನಡೆಸಿದೆ.

ಭಾರತ್ ವಾಣಿಜ್ಯ ಈಸ್ಟರ್ನ್ ಪ್ರೈವೇಟ್ ಲಿಮಿಟೆಡ್ (BVEPL) ಎಂಬ ಖಾಸಗಿ ಕಂಪನಿಯ ಮೇಲೂ ದಾಳಿ ನಡೆಸಲಾಗಿದೆ ಎಂದು ಇಡಿ ತಿಳಿಸಿದ್ದು, ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಪಡೆಯುವ ಸಲುವಾಗಿ ಈ ಕಂಪನಿಯು "ಭಾರಿ ಪ್ರಮಾಣದಲ್ಲಿ ಲಂಚ" ನೀಡಿದೆ ಮತ್ತು ಆ ಹಣವನ್ನು ವಿದೇಶಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ.

ಪ್ರಿಯಾಂಕಾ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ಅವರ ಸಹೋದರಿ ಮಹಾದೇವಿ ಮಂಜುನಾಥ್(ವೈ.ಡಿ. ಮಂಜುನಾಥ್ ಅವರ ಪತ್ನಿ) ಅವರು ಕಾಂಗೋದ 'ಎಲ್ಡೊರಾಡೊ ಮೈನಿಂಗ್ ರಿಸೋರ್ಸಸ್' ಮತ್ತು ಜಾಂಬಿಯಾದ 'ನವ ಔರಮ್ ಮೈನಿಂಗ್ ಲಿಮಿಟೆಡ್' ಮುಂತಾದ ವಿದೇಶಿ ಸಂಸ್ಥೆಗಳಲ್ಲಿ ಷೇರುಗಳನ್ನು "ಪಡೆದುಕೊಂಡಿದ್ದಾರೆ" ಎಂದು ತನಿಖಾ ಸಂಸ್ಥೆ ತಿಳಿಸಿದೆ.

"ಚಿನ್ನದ ಗಣಿಗಾರಿಕೆಯಲ್ಲಿ ತೊಡಗಿರುವ ಕಾಂಗೋದ 'ಮ್ಯಾಗ್ನಿಟ್ಯೂಡ್ ಸ್ಟಾರ್ SARL' ನಲ್ಲಿ ಸತೀಶ್ ಜಾರಕಿಹೊಳಿ ಅವರು ಸುಮಾರು ಶೇಕಡಾ 40 ರಷ್ಟು ಷೇರುಗಳನ್ನು ಹೊಂದಿದ್ದಾರೆ ಎಂಬುದು ಕೂಡ ಬಹಿರಂಗವಾಗಿದೆ. ಆಫ್ರಿಕಾದಲ್ಲಿ ಗಣಿಗಾರಿಕೆ ಆಸ್ತಿಗಳನ್ನು ಹೊಂದಿರುವ ಇತರ ವಿವಿಧ ವಿದೇಶಿ ಸಂಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ" ಎಂದು ಇಡಿ ಹೇಳಿದೆ.

ಶೋಧ ನಡೆಸಲಾದ ವಿವಿಧ ಸ್ಥಳಗಳಿಂದ 3.3 ಕೋಟಿ ರೂ. "ಲೆಕ್ಕಕ್ಕೆ ಸಿಗದ" ನಗದು ಹಾಗೂ ಅಮೆರಿಕನ್ ಡಾಲರ್ ಮತ್ತು ಯುರೋ ಸೇರಿದಂತೆ 15 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ.

"ಶೋಧದ ವೇಳೆ ಸಂಗ್ರಹವಾದ ಸಾಕ್ಷ್ಯಗಳು, ಅನಧಿಕೃತ ಮಾರ್ಗದ ಮೂಲಕ ಕಾಂಗೋದ ಸಂಸ್ಥೆಯೊಂದರಲ್ಲಿ ನಗದು ರೂಪದಲ್ಲಿ ಭಾರಿ ಪ್ರಮಾಣದ ಹೂಡಿಕೆ ಅಥವಾ ವೆಚ್ಚವನ್ನು ಮಾಡಲಾಗಿದೆ ಎಂಬುದನ್ನು ಬಹಿರಂಗಪಡಿಸಿವೆ" ಎಂದು ಇಡಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ನಿತೀಶ್ ಕುಮಾರ್ ರಾಜೀನಾಮೆ ನಂತರ ಪಕ್ಷದ ಹೆಸರು ಬದಲಾವಣೆಗೆ ಮುಂದಾದ JDU; ಇಲ್ಲಿದೆ ಕಾರಣ...

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ಜಾಗತಿಕ ಭೌಗೋಳಿಕ-ರಾಜಕೀಯ ಅನಿಶ್ಚಿತತೆ: ರಾಜಕೀಯ ಒತ್ತಡ ಹೇರಲು ಆರ್ಥಿಕ ಅಸ್ತ್ರ ಬಳಕೆ, ಬ್ರಿಕ್ಸ್ ಪ್ರತಿಕ್ರಿಯೆ ಏನು? ಇರಾನ್ ಅಧ್ಯಕ್ಷರ ಪ್ರಶ್ನೆ!

ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆಗೆ ರಾಹುಲ್​​ ಗಾಂಧಿ ಆಕ್ಷೇಪ