ಬೆಂಗಳೂರು: ಗೌರಿ – ಗಣೇಶ ಹಬ್ಬದ ಹಿನ್ನೆಲೆ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.
ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 11 ರಿಂದ ಸೆಪ್ಟೆಂಬರ್ 13ರ ವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ ಎಂದು ಮಾಹಿತಿ ನೀಡಿದೆ.
ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್‌ಗಳನ್ನ ನಿಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ 240 ಬಿಎಂಟಿಸಿ ಬಸ್‌ಗಳನ್ನ ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ.
ಮೆಜೆಸ್ಟಿಕ್, ಸ್ಯಾಟಲೈಟ್ (ಮೈಸೂರು ರಸ್ತೆ) ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಸೇವೆಗಳನ್ನು ನಿರ್ವಹಿಸಲಾಗುತ್ತದೆ. ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ಪ್ರಯಾಣಿಕರ ಬೇಡಿಕೆ ಹೆಚ್ಚಿರುವ ಹಲವು ಪ್ರಮುಖ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ.
ಹಬ್ಬ ಮುಗಿದ ಬಳಿಕ ಊರುಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆ ಸೆಪ್ಟೆಂಬರ್ 14 ರಿಂದ ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗಾಗಿ ಕೂಡ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್ ಆರ್ ಟಿಸಿ ಮಾಹಿತಿ ನೀಡಿದೆ.