ಸತೀಶ್ ಜಾರಕಿಹೊಳಿ 
ರಾಜ್ಯ

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ

ಇಂದು ನಗರದಲ್ಲಿ ತಮ್ಮ ಹಾಗೂ ತಮ್ಮ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ನಡೆಸಿದ ದಾಳಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.

ಬೆಂಗಳೂರು: ನಮ್ಮ ಸಂಸ್ಥೆಗಳ ವಾರ್ಷಿಕ ವಹಿವಾಟು 2,000 ಕೋಟಿ ರೂ.ಗೂ ಅಧಿಕ ಇದೆ. ಹೀಗಿರುವಾಗ ಸಿಕ್ಕಿದೆ ಎನ್ನಲಾದ 2 ಕೋಟಿ ರೂ. ನಗದು ನಮಗೆ ದೊಡ್ಡ ಮೊತ್ತವೇ ಅಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ನಗರದಲ್ಲಿ ತಮ್ಮ ಹಾಗೂ ತಮ್ಮ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ನಡೆಸಿದ ದಾಳಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.

ಇಡಿ ದಾಳಿ ವೇಳೆ ನಮ್ಮ ಮನೆಯಲ್ಲಿ ಪತ್ತೆಯಾದ 2 ಕೋಟಿ ರೂ. ಹಣ ನಮ್ಮದೇ, ಅದನ್ನು ಕಾನೂನುಬದ್ಧವಾಗಿ ಕ್ಲೈಮ್ ಮಾಡುತ್ತೇವೆ. ಆಫ್ರಿಕಾದಲ್ಲಿ ಮೈನಿಂಗ್ ಮತ್ತು ಟ್ರೇಡಿಂಗ್ ಕಂಪನಿ ಆರಂಭಿಸಲು ಯೋಜನೆ ರೂಪಿಸಿದ್ದೆವು. ಆದರೆ ಇನ್ನೂ ಹೂಡಿಕೆ ಮಾಡಿಲ್ಲ. ಮಾಡುವ ಪ್ರಕ್ರಿಯೆಯಲ್ಲಿದ್ದೇವೆ ಎಂದರು.

ಇದೇ ವಿದೇಶಿ ಹೂಡಿಕೆ ವಿಚಾರ ಮುಂದಿಟ್ಟುಕೊಂಡು ನಮ್ಮ ಮೇಲೆ ಇಡಿ ದಾಳಿ ನಡೆಸಲಾಗಿದೆ. ಮಗ ಮತ್ತು ಮಗಳ ಹೆಸರಿನಲ್ಲಿ ಕಂಪನಿ ಮಾಡಿರುವುದು ನಿಜ. ಈ ಸಂಬಂಧ ಆದಾಯ ತೆರಿಗೆ (IT) ಇಲಾಖೆಗೆ ಈಗಾಗಲೇ ಎಲ್ಲಾ ದಾಖಲೆ ಒದಗಿಸಿದ್ದೇವೆ. ಇಡಿ ಕೇಳಿದಾಗಲೂ ಅಗತ್ಯ ದಾಖಲೆ ನೀಡುತ್ತೇವೆ ಎಂದು ವಿವರಿಸಿದರು.

ನಾನು ಎಲ್ಲಿಯೂ ಜಾತಿ ವಿಚಾರ ತಂದು ಸಮರ್ಥಿಸಿಕೊಳ್ಳುವುದಿಲ್ಲ. ತಪ್ಪು ಮಾಡಿದರೆ ಜಾತಿಯನ್ನು ತರಲು ಸಾಧ್ಯವಿಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ ಇದನ್ನು ಸಂಪೂರ್ಣವಾಗಿ ಕಾನೂನಾತ್ಮಕವಾಗಿಯೇ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ತಾಯಿಯ ಅಂತ್ಯಕ್ರಿಯೆಗೆ ಚಿನ್ಮಯ್ ಕೃಷ್ಣ ದಾಸ್‌ಗೆ 5 ಗಂಟೆಗಳ ಪೆರೋಲ್‌: ರಾಧಾ-ಕೃಷ್ಣ ಮೂರ್ತಿಯ ಪಾದ ಸ್ಪರ್ಶಿಸಿ ಕಣ್ಣೀರಿಡುತ್ತಿರುವ ವಿಡಿಯೋ ವೈರಲ್!

ಪಾಕಿಸ್ತಾನವನ್ನು ಹಿಂದಿಕ್ಕಿದ ಭಾರತದ ನ್ಯೂಕ್ಲಿಯರ್ ಬಲ: ಇಂಡಿಯಾದ ಬತ್ತಳಿಕೆಯಲ್ಲಿ 190 ಅಣ್ವಸ್ತ್ರಗಳು; ಯಾವ ದೇಶದಲ್ಲಿ ಎಷ್ಟು ಅಣ್ವಸ್ತ್ರ?

'ಅವರಿಗೆ ನನ್ನ ಕಾಲೆಳೆಯುವುದು ಇಷ್ಟ': ವೈಭವ್ ಸೂರ್ಯವಂಶಿ ಜೊತೆಗಿನ ಬಾಂಧವ್ಯದ ಬಗ್ಗೆ ಮೊಹಮ್ಮದ್ ಶಮಿ