ಡಾ. ಅಂಕಿತಾ 
ರಾಜ್ಯ

ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ: ಸರ್ಕಾರಿ ವೈದ್ಯೆ ಡಾ. ಅಂಕಿತಾ ಮಾಡಿದ್ದೇನು?

ಬಾಗಲಕೋಟೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಉಮೇಶ್ ಮೇಟಿ ಅವರ ಸೊಸೆಯಾಗಿರುವ ಡಾ. ಅಂಕಿತಾ ಯರಗಲ್ ಅವರು ಪೂರ್ಣಾವಧಿ ಸ್ನಾತಕೋತ್ತರ(MD) ವ್ಯಾಸಂಗ ಮಾಡುತ್ತಿದ್ದಾರೆ.

ಬಾಗಲಕೋಟೆ: ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಅವರ ಸೊಸೆ ಡಾ. ಅಂಕಿತಾ ಯರಗಲ್ ಅವರು ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ.

ಬಾಗಲಕೋಟೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜಕುಮಾರ ಯರಗಲ್ ಅವರ ಪುತ್ರಿ ಹಾಗೂ ಉಮೇಶ್ ಮೇಟಿ ಅವರ ಸೊಸೆಯಾಗಿರುವ ಡಾ. ಅಂಕಿತಾ ಯರಗಲ್ ಅವರು ಪೂರ್ಣಾವಧಿ ಸ್ನಾತಕೋತ್ತರ(MD) ವ್ಯಾಸಂಗ ಮಾಡುತ್ತಿದ್ದರೂ, ಪ್ರತಿ ತಿಂಗಳು ಸರ್ಕಾರದಿಂದ 75,000 ರೂ. ವೇತನ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಡಾ. ಅಂಕಿತಾ ಯರಗಲ್ ಅವರು 2025ರ ಸೆಪ್ಟೆಂಬರ್‌ನಿಂದ ಬಾಗಲಕೋಟೆಯ ವಾಂಬೆ ಕಾಲೋನಿಯ ‘ನಮ್ಮ ಕ್ಲಿನಿಕ್’ಗೆ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದರು. ತದನಂತರ, 2026ರ ಮಾರ್ಚ್‌ನಲ್ಲಿ ಬಾಗಲಕೋಟೆಯ ಎಸ್.ಎನ್. ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ. (ಪ್ಯಾಥಾಲಜಿ) ಕೋರ್ಸ್‌ಗೆ ಪ್ರವೇಶ ಪಡೆದು ಏಪ್ರಿಲ್‌ನಿಂದ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.

ನಿಯಮಗಳ ಪ್ರಕಾರ ಬೆಳಗ್ಗೆ 9 ರಿಂದ ಸಂಜೆ 4:30 ರವರೆಗೆ ನಮ್ಮ ಕ್ಲಿನಿಕ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅಂಕಿತಾ, ಕಾಲೇಜಿನಲ್ಲಿ ಪೂರ್ಣಾವಧಿ ಶಿಕ್ಷಣ ಪಡೆಯುತ್ತಿರುವುದರಿಂದ ಕ್ಲಿನಿಕ್‌ಗೆ ಸರಿಯಾಗಿ ಹಾಜರಾಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಸಿಗದೆ ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್ ಬಹುತೇಕ ಬಂದ್ ಆದ ಸ್ಥಿತಿಯಲ್ಲಿದೆ.

ಸರ್ಕಾರಿ ನಿಯಮಾವಳಿ ಪ್ರಕಾರ ಎಂ.ಡಿ. ವ್ಯಾಸಂಗ ಮಾಡುತ್ತಾ ಸರ್ಕಾರಿ ಸೇವೆಯ ವೇತನ ಪಡೆಯುವುದು ಕಾನೂನುಬಾಹಿರವಾಗಿದೆ. ಈ ಬಗ್ಗೆ ಡಾ. ರಾಜಕುಮಾರ ಯರಗಲ್ ಮಾತ್ರ ನುಣುಚಿಕೊಳ್ಳೋ ಕೆಲಸ ಮಾಡುತ್ತಿದ್ದಾರೆ.

ಇನ್ನು ಆರೋಗ್ಯ ಇಲಾಖೆ ಸಹ ಈ ಬಗ್ಗೆ ಮೌನವಾಗಿದ್ದು, ಇಷ್ಟೆಲ್ಲ ಅಕ್ರಮ ಬಯಲಾದ್ರೂ ಡಿಎಚ್‌ಓ ಯರಗಲ್ ವಿರುದ್ಧವಾಗಲಿ ಅಥವಾ ಅವರ ಮಗಳ ವಿರುದ್ಧವಾಗಲಿ ಯಾವುದೇ ಕ್ರಮ ಜರುಗಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ BRICS; ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಗೆಲುವು!

'ಗ್ಲೋಬಲ್ ಸೌತ್' ನಿಯಮ-ರೂಪಿಸುವ ಶಕ್ತಿಯಾಗಬೇಕು, ಅದರ ನೇತೃತ್ವ ವಹಿಸಲು ಭಾರತ ಸಿದ್ಧ": BRICS ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಗಂಡನ ಕೊಲೆ; ಮುಖ, ಮರ್ಮಾಂಗಕ್ಕೆ ಗಾಯ, ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ!

'ಇನ್ನೂ ನಾಲ್ಕೈದು ಸಚಿವರ ಮೇಲೆ ED ದಾಳಿ ಹೇಳಿಕೆ': ಈ ರೀತಿಯ ರೇಡ್ ನಲ್ಲಿ ಅವರು ಪರಿಣಿತರು: CM ಡಿಕೆಶಿಗೆ ಮಾಜಿ ಸಚಿವ ಕೆಎನ್ ರಾಜಣ್ಣ ಟಾಂಗ್

ಟ್ರ್ಯಾಕ್ಟರ್‌ ಸಾಲ, ವರದಕ್ಷಿಣೆ ಕಿರುಕುಳ ಆರೋಪ; 10 ತಿಂಗಳ ಮದುವೆ, 5 ತಿಂಗಳ ಗರ್ಭಿಣಿ ದುರಂತ ಅಂತ್ಯ!