ಶಿವಮೊಗ್ಗ: ಅರಣ್ಯ ಸಂಚಾರಿ ದಳ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನೆವಟೂರು ಆನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಪಿಎಸ್‌ಐ ವಿನಾಯಕ ಕೆ. ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ ಅಕ್ರಮವಾಗಿ ಇಟ್ಟಿದ್ದ 35 ಕೆ.ಜಿ ಜಿಂಕೆ ಮಾಂಸವನ್ನ ವಶಪಡಿಸಿಕೊಳ್ಳಲಾಗಿದೆ.