ಸಚಿವ ರಾಮಲಿಂಗಾರೆಡ್ಡಿ 
ರಾಜ್ಯ

ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ!

ಜಲಮೂಲಗಳಿಗೆ ಮಾಲಿನ್ಯ ಉಂಟುಮಾಡುವ ವಸ್ತುಗಳನ್ನು ಬಳಸದೆ, ಪರಿಸರ ಸ್ನೇಹಿ ಮೂರ್ತಿಗಳನ್ನು ಬಳಸುವಂತೆ ಸಚಿವರು ಕರೆ ನೀಡಿದರು.

ಬೆಂಗಳೂರು: ಪರಿಸರ ಸ್ನೇಹಿ ಜೇಡಿಮಣ್ಣಿನ ಮೂರ್ತಿಗಳನ್ನು ಪೂಜಿಸುವ ಮೂಲಕ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಪ್ರಕೃತಿಗೆ ಪೂರಕವಾಗಿ ಆಚರಿಸೋಣ ಎಂದು ಪರಿಸರ ಹಾಗೂ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಭಾನುವಾರ ಬೆಳಿಗ್ಗೆ ಲಾಲ್‌ ಬಾಗ್‌ ನ ಪಶ್ಚಿಮ ದ್ವಾರದಲ್ಲಿ ಮಣ್ಣಿನ ಮೂರ್ತಿಗಳನ್ನು ಸಾರ್ವಜನಿಕವಾಗಿ ಉಚಿತವಾಗಿ ವಿತರಿಸಿ ಮಾತನಾಡಿದ ಸಚಿವರು, ಸಂಪ್ರದಾಯ ಮತ್ತು ಭಕ್ತಿಭಾವದಿಂದ ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಹಬ್ಬ ಆಚರಿಸಬೇಕು ಎಂದರು.

ಜಲಮೂಲಗಳಿಗೆ ಮಾಲಿನ್ಯ ಉಂಟುಮಾಡುವ ವಸ್ತುಗಳನ್ನು ಬಳಸದೆ, ಪರಿಸರ ಸ್ನೇಹಿ ಮೂರ್ತಿಗಳನ್ನು ಬಳಸುವಂತೆ ಸಚಿವರು ಕರೆ ನೀಡಿದರು.

ಅವೆನ್ಯೂ ರಸ್ತೆಯ ಆರ್ಯ ವೈಷ್ಯ ಮಂಡಳಿ ಹಾಗೂ ವಾಸವಿ ಯುವಜನ ಸಂಘದ ವತಿಯಿಂದ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ಈ ಬಾರಿಯೂ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಗಣೇಶ ಹಾಗೂ ಗೌರಿ ಮೂರ್ತಿಗಳನ್ನು ವಿತರಿಸಲಾಯಿತು. ಈ ವರ್ಷ ಸುಮಾರು 251 ಮಣ್ಣಿನ ಮೂರ್ತಿಗಳನ್ನು ವಿತರಣೆ ಮಾಡಲಾಯಿತು

ಪರಿಸರ ಸ್ನೇಹಿ ಗಣೇಶ ಹಾಗೂ ಗೌರಿ ವಿಗ್ರಹಗಳನ್ನು ವಿತರಿಸುವ ಜೊತೆಗೆ ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಾಸವಿ ಯುವ ಜನ ಸಂಘದ ಅಧ್ಯಕ್ಷರಾದ ಗುರುಪ್ರಸಾದ್‌ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

BRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ವಿರುದ್ಧ ಮೋದಿ ಎಚ್ಚರಿಕೆ! Video

‘ಹೂಡಿಕೆ ತರಲು ಹೋಗಿದ್ದಾರೋ?, ಸ್ನೇಹಿತನ Race ನೋಡಲು ಹೋಗಿದ್ದಾರೋ?’.. ವಿಜಯ್‌ಗೆ DMK ಪ್ರಶ್ನೆ, 'ತಪ್ಪೇನು?' TVK ಖಡಕ್ ತಿರುಗೇಟು

ಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆ

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!