ಡಿಕೆ.ಶಿವಕುಮಾರ್  
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ ನೀರು ಬಿಡುಗಡೆ: ಸೆ. 24ರಂದು ಗೊನೂರು ಕೆರೆಯಲ್ಲಿ ಸಿಎಂ ಗಂಗಾ ಪೂಜೆ..!

ಹಿರಿಯೂರು, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಕಡೂರು ಹಾಗೂ ತರೀಕೆರೆ ತಾಲೂಕುಗಳ ಸುಮಾರು 80 ಕೆರೆಗಳನ್ನು ತುಂಬಿಸುವುದು ಯೋಜನೆಯ ಉದ್ದೇಶವಾಗಿದೆ.

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಗೊನೂರು ಕೆರೆಗೆ ತಲುಪಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೊನೂರು ಕೆರೆಯಲ್ಲಿ ಗಂಗಾ ಪೂಜೆ ನೆರವೇರಿಸಲಿದ್ದಾರೆ ಎಂದು ಸಚಿವ ಟಿ. ರಘುಮೂರ್ತಿ ಶನಿವಾರ ತಿಳಿಸಿದ್ದಾರೆ.

ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾ ಪೂಜೆ ಬಳಿಕ ಚಿತ್ರದುರ್ಗ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನೂ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಮಾಜಿ ಹಾಗೂ ಹಾಲಿ ಸಚಿವರು ಮತ್ತು ಚುನಾಯಿತ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಪ್ರದೇಶದ ಬಹುಕಾಲದ ಬೇಡಿಕೆಯಾಗಿರುವ ಮೇಲ್ದಂಡೆ ಯೋಜನೆಯ ಭಾಗವಾಗಿ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ. ವೈ-ಜಂಕ್ಷನ್‌ನಿಂದ 114 ಕಿ.ಮೀ ಉದ್ದದ ಕಾಲುವೆಗೆ 3 ಟಿಎಂಸಿ ನೀರು ಹರಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದರು. ಇದೀಗ ಆ ನೀರು ಗೊನೂರು ಕೆರೆಗೆ ತಲುಪಿದೆ ಎಂದು ತಿಳಿಸಿದರು.

ಹಿರಿಯೂರು, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಕಡೂರು ಹಾಗೂ ತರೀಕೆರೆ ತಾಲೂಕುಗಳ ಸುಮಾರು 80 ಕೆರೆಗಳನ್ನು ತುಂಬಿಸುವುದು ಯೋಜನೆಯ ಉದ್ದೇಶವಾಗಿದೆ. ರಾಜ್ಯದ ವಿವಿಧ ಭಾಗಗಳ ಜನರ ನಿರಂತರ ಹೋರಾಟ ಮತ್ತು ಪ್ರಯತ್ನದ ಫಲವಾಗಿ ಈ ಯೋಜನೆ ಸಾಕಾರಗೊಳ್ಳುತ್ತಿದೆ. ಇದು ಯಾವುದೇ ಒಂದು ರಾಜಕೀಯ ಪಕ್ಷದ ಸಾಧನೆಯಲ್ಲ ಎಂದು ಹೇಳಿದರು.

ಮೇಲ್ಜಂಡೆ ಯೋಜನೆಯನ್ನು 2028ರ ವೇಳೆಗೆ ಪೂರ್ಣಗೊಳಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಕೇಂದ್ರ ಸರ್ಕಾರ ಭರವಸೆ ನೀಡಿರುವ ರೂ.5,300 ಕೋಟಿ ನೆರವಿಗಾಗಿ ಕಾಯುತ್ತಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಲು ಸರ್ಕಾರ ಯೋಜಿಸುತ್ತಿದೆ. ಕೇಂದ್ರದಿಂದ ದೊರೆಯುವ ಸಹಕಾರದ ಮೇಲೂ ಯೋಜನೆಯ ಕಾಮಗಾರಿಗಳ ವೇಗ ಭಾಗಶಃ ಅವಲಂಬಿತವಾಗಿರಲಿದೆ ಎಂದು ತಿಳಿಸಿದರು.

ಯೋಜನೆಯಡಿ ಒಟ್ಟು 367 ಕೆರೆಗಳನ್ನು ತುಂಬಿಸುವುದಕ್ಕೆ ಸರ್ಕಾರ ಆದ್ಯತೆ ನೀಡಿದೆ ಎಂದು ಸಚಿವ ರಘುಮೂರ್ತಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video