ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್ AI Image
ರಾಜ್ಯ

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್; ಜೀರೋ ಬಿಲ್ ಬದಲು ಬಂತು ₹5 ಸಾವಿರ ಬಿಲ್! ಬೆಸ್ಕಾಂ ವಿರುದ್ಧ ಆಕ್ರೋಶ

ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಈವರೆಗೆ ನಿಯಮಿತವಾಗಿ ಜೀರೋ ಬಿಲ್ ಪಡೆಯುತ್ತಿದ್ದ ಫಲಾನುಭವಿಗಳಿಗೆ ಬೆಸ್ಕಾಂ ದಿಢೀರನೇ ₹4,000 ದಿಂದ ₹5,000 ವರೆಗೆ ಭಾರಿ ಮೊತ್ತದ ವಿದ್ಯುತ್ ಬಿಲ್ ನೀಡಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಪ್ರತಿ ತಿಂಗಳು ಜೀರೋ ಬಿಲ್ ನೋಡಿ ನಿರಾಳವಾಗುತ್ತಿದ್ದ ಜನರಿಗೆ, ಈ ಬಾರಿ ಬಂದಿರುವ ಕರೆಂಟ್ ಬಿಲ್ ನೋಡಿ ಶಾಕ್ ಹೊಡೆದಂತಾಗಿದೆ. ಯಾಕಂದ್ರೆ, ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದ ಬೆಂಗಳೂರಿನ ನೂರಾರು ಕುಟುಂಬಗಳಿಗೆ ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರನೇ ನಾಲ್ಕರಿಂದ ಐದು ಸಾವಿರ ರೂಪಾಯಿ ಬಿಲ್ ಕೈಸೇರಿದ್ದು, ರಾಜಧಾನಿಯಲ್ಲಿ ಬೆಸ್ಕಾಂ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಈವರೆಗೆ ನಿಯಮಿತವಾಗಿ ಜೀರೋ ಬಿಲ್ ಪಡೆಯುತ್ತಿದ್ದ ಬೆಂಗಳೂರಿನ ಶಿವಾಜಿನಗರದ ಮಖಾನ್ ಕಾಂಪೌಂಡ್ ಸೇರಿದಂತೆ ಹಲವು ಭಾಗಗಳ ನಿವಾಸಿಗಳಿಗೆ, ಈ ಬಾರಿ ಇದ್ದಕ್ಕಿದ್ದಂತೆ ಬೆಸ್ಕಾಂ ನಿಂದ ₹4,000 ದಿಂದ ₹5,000 ವರೆಗಿನ ಭಾರಿ ಮೊತ್ತದ ವಿದ್ಯುತ್ ಬಿಲ್ ಬಂದಿದೆ. ಸಣ್ಣ ಮನೆಗಳಿಗೂ ಇಷ್ಟೊಂದು ದೊಡ್ಡ ಮೊತ್ತದ ಬಿಲ್ ಬಂದಿರುವುದನ್ನು ವಿರೋಧಿಸಿ ಸ್ಥಳೀಯರು ಬೆಸ್ಕಾಂ ವಿರುದ್ಧ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಉಚಿತ ಸೌಲಭ್ಯ ಸಿಗುತ್ತದೆ ಎಂದು ನಿರಾಳವಾಗಿದ್ದ ಕುಟುಂಬಗಳಿಗೆ ಏಕಾಏಕಿ ಇಷ್ಟೊಂದು ಮೊತ್ತದ ಬಿಲ್ ಬಂದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಹಾಗಾದ್ರೆ, ಇಷ್ಟೊಂದು ದೊಡ್ಡ ಬಿಲ್ ಬರಲು ಕಾರಣವೇನು?

ಬೆಸ್ಕಾಂ ಅಧಿಕಾರಿಗಳ ಪ್ರಕಾರ, ಕಳೆದ ಎರಡು ತಿಂಗಳುಗಳಿಂದ ಬಿಲ್ಲಿಂಗ್ ಸಾಫ್ಟ್‌ವೇರ್ ಅಥವಾ ಸರ್ವರ್‌ಗಳಲ್ಲಿ ಎದುರಾಗಿರುವ ತಾಂತ್ರಿಕ ಸಮಸ್ಯೆಯಿಂದಾಗಿ ಉಚಿತ ಯೂನಿಟ್‌ಗಳು ಸರಿಯಾಗಿ ಲೆಕ್ಕಾಚಾರವಾಗದೆ ಪೂರ್ಣ ಬಿಲ್ ಜನರೇಟ್ ಆಗುತ್ತಿದೆ ಎನ್ನಲಾಗಿದೆ.

ಒಟ್ಟಾರೆಯಾಗಿ, ಈ ಹಿಂದಿನ ತಿಂಗಳುಗಳಲ್ಲಿ ಜೀರೋ ಬಿಲ್ ಪಡೆಯುತ್ತಿದ್ದ ಗ್ರಾಹಕರು, ಇದು ತಾಂತ್ರಿಕ ದೋಷದಿಂದ ಬಂದಿರುವ ಬಿಲ್ ಆಗಿದೆಯೇ ಅಥವಾ ತಾವು ನಿಜವಾಗಿಯೂ ಈ ಮೊತ್ತವನ್ನು ಪಾವತಿಸಬೇಕೇ ಎಂಬ ಗೊಂದಲ ಹಾಗೂ ಆತಂಕದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಅರೇಬಿಯಾದಲ್ಲಿ ಮುಂದುವರೆದ ಹೌತಿ ಉಗ್ರರ ಅಟ್ಟಹಾಸ; ಕ್ಷಿಪಣಿ ದಾಳಿ ತೀವ್ರ, ದಕ್ಷಿಣ ಭಾಗದಲ್ಲಿ ಭಾರೀ ಸ್ಫೋಟ!

‘ನನ್ನನ್ನು ಬೆನ್ನಟ್ಟಿದರು, ಕೊನೆಗೆ ಡಿಕ್ಕಿ ಹೊಡೆದರು’: Road Rage, ಕಾರು ಚಾಲಕನ ಕರಾಳ ಮುಖ ಬಯಲು ಮಾಡಿದ ಮಹಿಳಾ ಬೈಕ್ ರೈಡರ್! Video

‘ಧರ್ಮಕ್ಕಿಂತ ಮಾನವೀಯತೆ ಮುಖ್ಯ’: 18 ವರ್ಷಗಳಿಂದ ಗಣೇಶೋತ್ಸವಕ್ಕೆ ಮುಸ್ಲಿಂ ಮಹಿಳೆ ಸಾರಥ್ಯ, ಹೋಮ-ಹವನಗಳಲ್ಲಿ ಭಾಗಿ

ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಕನಸು ನನಸು; ಶಾಸ್ತ್ರೋಕ್ತವಾಗಿ ನೆರವೇರಿದ ಗೃಹ ಪ್ರವೇಶ!

ನಟ ಜಗ್ಗೇಶ್​​ ಕೈಗೆ ದುಬಾರಿ ವಾಚ್ ಗಿಫ್ಟ್ ನೀಡಿದ ಶಿವರಾಜ್ ಕುಮಾರ್- ಗೀತಾ ದಂಪತಿ! ಇದರ ಬೆಲೆ ಎಷ್ಟು ಗೊತ್ತಾ?