ಎಐ ಚಿತ್ರ 
ರಾಜ್ಯ

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದವರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣಬಿಟ್ಟಿದ್ದಾರೆ.

ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಭೀಕರ ಅಗ್ನಿಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಸಂಭವಿಸಿದೆ.

ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಪ್ರಿಯಾ ಗಜಾನನ ದಮೋನೆ (28) ಮತ್ತು ಗಂಗಾ ಗಜಾನನ ದಮೋನೆ (25) ಎಂದು ತಿಳಿದುಬಂದಿದೆ.

ತಡರಾತ್ರಿ ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದ್ದು, ಮನೆಯಲ್ಲಿದ್ದವರು ಹೊರಬರಲಾರದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣಬಿಟ್ಟಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಮನೆಯೊಳಗಿನ ಅಡುಗೆಮನೆಯಲ್ಲಿ ಸಂಭವಿಸಿದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಬೆಳಗಾವಿ: ಬೈಕ್- ಸಾರಿಗೆ ಬಸ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು!

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ