ರಾಜ್ಯ

'ವಂದೇ ಮಾತರಂ' ವಿವಾದ: ಸರ್ಕಾರಿ ಕಾರ್ಯಕ್ರಮದಿಂದ BJP ಶಾಸಕ ಚನ್ನಬಸಪ್ಪ ವಾಕ್‌ಔಟ್; Video

ಶಿವಮೊಗ್ಗದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ‘ವಂದೇ ಮಾತರಂ’ನ ಎರಡು ಚರಣಗಳನ್ನು ಹಾಡಿದ ಬಳಿಕ ಗೀತೆಯನ್ನು ಮೊಟಕುಗೊಳಿಸಿದ್ದಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಶಿವಮೊಗ್ಗ: ‘ವಂದೇ ಮಾತರಂ’ ರಾಷ್ಟ್ರಗೀತೆಯನ್ನು ಎರಡು ಚರಣಗಳಿಗಷ್ಟೇ ಸೀಮಿತಗೊಳಿಸಿರುವುದನ್ನು ವಿರೋಧಿಸಿ ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಸರ್ಕಾರಿ ಕಾರ್ಯಕ್ರಮದಿಂದ ಸಿಟ್ಟಿನಿಂದ ಹೊರನಡೆದ ಘಟನೆ ನಡೆದಿದೆ.

ಶಿವಮೊಗ್ಗದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ‘ವಂದೇ ಮಾತರಂ’ನ ಎರಡು ಚರಣಗಳನ್ನು ಹಾಡಿದ ಬಳಿಕ ಗೀತೆಯನ್ನು ಮೊಟಕುಗೊಳಿಸಿದ್ದಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ರಾಷ್ಟ್ರಗೀತೆಯನ್ನು ಮಧ್ಯದಲ್ಲೇ ಏಕೆ ನಿಲ್ಲಿಸಲಾಯಿತು ಎಂದು ಅವರು ಪ್ರಶ್ನಿಸಿದರು. ಈ ವಿಚಾರದಲ್ಲಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಅವರು ಒತ್ತಾಯಿಸಿದರು.

‘ವಂದೇ ಮಾತರಂ’ನ ಆರು ಚರಣಗಳ ಗಾಯನಕ್ಕೆ ಹಲವು ರಾಜ್ಯಗಳಲ್ಲಿ ವಿವಾದ

‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ರಾಜ್ಯಗಳಲ್ಲಿ ವಿವಾದ ಉಂಟಾಗಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ ಈ ವಿಚಾರದಲ್ಲಿ ವಾಗ್ವಾದ ನಡೆದಿದೆ. ಇತ್ತೀಚೆಗೆ ಶ್ರೀನಗರದಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ‘ವಂದೇ ಮಾತರಂ’ನ ಆರು ಚರಣಗಳನ್ನು ಹಾಡಲಾಗಿತ್ತು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು.

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, ನ್ಯಾಷನಲ್ ಕಾನ್ಫರೆನ್ಸ್ ಕೂಡ ಕಾಂಗ್ರೆಸ್‌ನ ನಿರ್ಣಯವನ್ನು ಗೌರವಿಸಬೇಕು ಎಂದು ಸಾಮಾಜಿಕ ಮಾಧ್ಯಮದ ಮೂಲಕ ಹೇಳಿದ್ದರು.

ಆದರೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರದ ಜನರು ಜೈಲಿಗೆ ಹೋಗಬೇಕು ಎಂದು ಕಾಂಗ್ರೆಸ್ ಬಯಸುತ್ತಿದೆಯೇ ಎಂದು ಕೇಳಿದ್ದಾರೆ.

ಮುಖ್ಯಮಂತ್ರಿಯ ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಜಮ್ಮು-ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ, ಜಮ್ಮು-ಕಾಶ್ಮೀರದ ಜನರ ಮಾತು ಇಲ್ಲಿ ಎಲ್ಲಿಂದ ಬಂತು ನಮ್ಮ ನಿರೀಕ್ಷೆ ಇರುವುದು ಜಮ್ಮು-ಕಾಶ್ಮೀರ ಸರ್ಕಾರದಿಂದ ಮಾತ್ರ. ಇದಕ್ಕೂ ಜನರಿಗೂ ಯಾವುದೇ ಸಂಬಂಧವಿಲ್ಲ. ಹಾಗೆಯೇ ‘ವಂದೇ ಮಾತರಂ’ ಹಾಡುವ ಸಂದರ್ಭದಲ್ಲಿ ಸರ್ಕಾರ ಎದ್ದು ನಿಲ್ಲುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...

ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ

ಡ್ರಾಮಾ ಬಿಡಿ, ಎರಡು ವಾರದಲ್ಲಿ 2 ಕೋಟಿ ರೂ. ಠೇವಣಿ ಇಡಿ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

'ಯಾರನ್ನೂ ಸ್ಟಾಪ್ ಮಾಡೋಕೆ ಆಗಲ್ಲ, ಯಾವ ದಾಖಲೆ ಬೇಕಾದ್ರೂ ಬಿಡುಗಡೆ ಮಾಡಿಕೊಳ್ಳಲಿ: ಸಿಎಂ ಶಿವಕುಮಾರ್; Video