ಉತ್ತರ ಕನ್ನಡ: ಕೃಷಿ ವಿಜ್ಞಾನಿ ಹಾಗೂ ಕೃಷಿ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಂಜುನಾಥ ನಾಯ್ಕ(65) ಅವರು ಗಣೇಶ ಹಬ್ಬದ ಪೂಜೆಗಾಗಿ ನೀರು ತರಲು ಹೋದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ.
ಕೃಷಿ ವಿಜ್ಞಾನಿಯಾಗಿ, ನೂರಾರು ವಿದ್ಯಾರ್ಥಿಗಳಿಗೆ ಹಾಗೂ ಸಂಶೋಧನಾರ್ಥಿಗಳಿಗೆ ಗುರುಗಳಾಗಿ ಮತ್ತು ಕೃಷಿಕರಿಗೆ ಉತ್ತಮ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದ ಮಂಜುನಾಥ ಅವರು ಗಣೇಶ ಹಬ್ಬಕ್ಕೆ ಊರಿಗೆ ಹೋಗಿದ್ದರು. ಈ ವೇಳೆ ಗಣೇಶ ಪೂಜೆಗೆ ನೀರು ತರಲೆಂದು ಹೋದಾಗ ಬಾವಿಗೆ ಬಿದ್ದು ಮೃತ ಪಟ್ಟಿದ್ದಾರೆ. ಅವರ ಸ್ವಗ್ರಾಮದಲ್ಲೇ ಅಂತ್ಯಕ್ರಿಯೆ ನಡೆದಿದೆ.
ಉತ್ತನ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ಕೋನಳ್ಳಿ ಗ್ರಾಮದ ಮಂಜುನಾಥ ಅವರು, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಗೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ(VC) ಕಾರ್ಯನಿರ್ವಹಿಸಿದ್ದರು.