ದರ್ಶನ್, ಪ್ರದೋಷ್ 
ರಾಜ್ಯ

D Bossಗೆ ಬಿಗ್​ ಶಾಕ್​; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

ಈ ಹಿಂದೆ ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಆದೇಶವನ್ನು ಮಾರ್ಪಡಿಸಿ ಮತ್ತೊಮ್ಮೆ ಹೊಸ ಆದೇಶ ಹೊರಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಬುಧವಾರ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಕರಣದ 14ನೇ ಆರೋಪಿ ಪ್ರದೋಷ್ 'ಮಾಫಿ ಸಾಕ್ಷಿ'ಯಾಗುವುದಕ್ಕೆ ಮತ್ತೆ ಒಪ್ಪಿಗೆ ನೀಡಿದೆ.

ಈ ಹಿಂದೆ ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಆದೇಶವನ್ನು ಮಾರ್ಪಡಿಸಿ ಮತ್ತೊಮ್ಮೆ ಹೊಸ ಆದೇಶ ಹೊರಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು.

ಅದರಂತೆ ಇಂದು ಮತ್ತೊಮ್ಮೆ ಆದೇಶ ಹೊರಡಿಸಿದ 59ನೇ ಸಿಸಿಹೆಚ್ ಕೋರ್ಟ್, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕಾರ ಮಾಡಿದೆ.

ಪ್ರದೋಷ್‌ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ನಟ ದರ್ಶನ್‌ ಅವರು, ಮಾಫಿ ಸಾಕ್ಷಿ ತಡೆ ಹಿಡಿಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರದೋಷ್ ಮಾಫಿ ಸಾಕ್ಷಿಗೆ ಒಪ್ಪಿಗೆ ನೀಡಿ, ನ್ಯಾಯಮೂರ್ತಿ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಆದೇಶ ಹೊರಡಿಸಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಕೋರ್ಟ್, ಮಾಫಿ ಸಾಕ್ಷಿಗೆ ನಿಮ್ಮ ಒಪ್ಪಿಗೆ ಇದೆಯೇ ಎಂದು ಪ್ರದೋಷ್​ಗೆ ಪ್ರಶ್ನಿಸಿದ್ದು, ಇದಕ್ಕೆ ಪ್ರದೋಷ್ ಒಪ್ಪಿಗೆ ಇದೆ ಎಂದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿರುವುದರಿಂದ ಅಸೂಯೆ, ಷಡ್ಯಂತ್ರ ಮಾಡಿ ಪ್ರದೋಷ್ ವಿರುದ್ಧ ಪೊಲೀಸರು ಎನ್‌ಸಿಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ತನಿಖೆ ಮುಗಿಯುವವರೆಗೂ ಮಾಫಿ ಸಾಕ್ಷಿ ಮುಂದೂಡುವಂತೆ ದರ್ಶನ್ ವಕೀಲರು ಮನವಿ ಮಾಡಿದರು. ಆದರೆ ಕೋರ್ಟ್, ದರ್ಶನ್ ವಕೀಲರ ಮನವಿ ತಿರಸ್ಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!

ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!

'ನಟಿ ಮಮಿತಾ ಬೈಜುರನ್ನೇ ಮದುವೆಯಾಗುತ್ತೇನೆ, ಬೇರೆ ಮಹಿಳೆಗೆ ಜಾಗವಿಲ್ಲ, ವಯಸ್ಸಿನ ಅಂತರ ಇರಬಹುದು, ಆದ್ರೆ...'

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4 ರಷ್ಟು MDR ಶುಲ್ಕ! ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ