ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ ಅಗ್ನಿ ದುರಂತ: ಗಾಯಗೊಂಡಿದ್ದ ತಂದೆ-ಮಗ ಸಾವು; ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ!

ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಗಜಾನನ ಹಾಗೂ ರೋಷನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರೂ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ: ನಗರದಲ್ಲಿ ಸೆ.14ರ ಸೋಮವಾರ ತಡರಾತ್ರಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ ಹಾಗೂ ಮಗ ಚಿಕಿತ್ಸೆ ಫಲಿಸದೆ ಸೆ.16ರ ಬುಧವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಒಟ್ಟು ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಗಜಾನನ ರಾಜಾರಾಮ ಧಮೋನೆ (65) ಹಾಗೂ ಅವರ ಪುತ್ರ ರೋಷನ್ (21) ಮೃತಪಟ್ಟ ದುರ್ದೈವಿಗಳು. ಸೋಮವಾರ ತಡರಾತ್ರಿ ಮನೆಯಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯ ಜ್ವಾಲೆಗೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ವೇಳೆ ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಗಜಾನನ ಹಾಗೂ ರೋಷನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರೂ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಗಣೇಶೋತ್ಸವದ ಸಂಭ್ರಮದ ನಡುವೆ ಮಂಗಳವಾರ ನಸುಕಿನ ಜಾವ ಈ ಅಗ್ನಿ ಅವಘಡ ಸಂಭವಿಸಿತ್ತು. ಈ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮಹಿಳೆಯರಾದ ಭಾರತಿ ದಾಮೋನೆ (50), ಶಾರದಾ ಗಜಾನನ ದಾಮೋನೆ (45), ಪ್ರಿಯಾ ಗಜಾನನ ದಾಮೋನೆ (28) ಮತ್ತು ಗಂಗಾ ಗಜಾನನ ದಾಮೋನೆ (25) ಮೃತಪಟ್ಟಿದ್ದರು.

ಮಂಗಳವಾರದ ಅಗ್ನಿ ಅವಘಡದಲ್ಲಿ ಮೃತಪಟ್ಟ ನಾಲ್ವರ ಅಂತ್ಯಕ್ರಿಯೆಯನ್ನು ಅಂದೇ ಸಂಜೆ ನೆರವೇರಿಸಲಾಗಿತ್ತು. ಇದೀಗ ಗಜಾನನ ಮತ್ತು ರೋಶನ್ ಅವರ ಸಾವಿನೊಂದಿಗೆ, ಒಂದೇ ಕುಟುಂಬದ ಒಟ್ಟು ಆರು ಮಂದಿ ಈ ದುರಂತದಲ್ಲಿ ಬಲಿಯಾದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಜಕೀಯ ನಾಯಕರಿಂದ ಶುಭಾಶಯ, ‘ವಿಶ್ವದ ಅತ್ಯಂತ ಜನಪ್ರಿಯ ನಾಯಕ’ ಎಂದು ಬಣ್ಣನೆ..!

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನಾಪಡೆ, ಮುಂದುವರೆದ ಕಾರ್ಯಾಚರಣೆ..!

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

9/11 ಪಾಠ ಮರೆಯದಿರಿ, ಉಗ್ರರಿಗೆ ಆಶ್ರಯ ನೀಡುವ ವ್ಯವಸ್ಥೆ ಕಿತ್ತೊಗೆಯಿರಿ: JeM, LeT ಹೆಸರು ಪ್ರಸ್ತಾಪಿಸಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಚಾಟಿ..!

ಮದ್ಯದ ಅಮಲಿನಲ್ಲಿ ಜಡ್ಜ್‌ ಎದುರೇ ರಂಪಾಟ: ಜೈಲು ಶಿಕ್ಷೆ ವಿಧಿಸಿ ಕುಡುಕ ವಕೀಲನಿಗೆ ತಕ್ಕ ಶಾಸ್ತಿ ಮಾಡಿದ ಹೈಕೋರ್ಟ್‌..!