ಶಾಂತಾ ಹೊಸಮನಿ 
ರಾಜ್ಯ

KPSC ಹಗರಣ: ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಕೊನೆಗೂ ಪ್ರತ್ಯಕ್ಷ; ಸಿಐಡಿ ವಿಚಾರಣೆಗೆ ಹಾಜರು

ಶಾಂತಾ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಂದು ಅವರು ಸಿಐಡಿ ಕಚೇರಿಗೆ ಅಗಮಿಸಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಜೈಲು ಪಾಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರು ಕೊನೆಗೂ ಗುರುವಾರ ಪ್ರತ್ಯಕ್ಷವಾಗಿದ್ದು, ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಶಾಂತಾ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಂದು ಅವರು ಸಿಐಡಿ ಕಚೇರಿಗೆ ಅಗಮಿಸಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಪಶುವೈದ್ಯಾಧಿಕಾರಿಗಳ ಅಕ್ರಮ ನೇಮಕಾತಿ ಹಗರಣ ಬಹಿರಂಗವಾದ ಬೆನ್ನಲ್ಲೇ ಶಾಂತಾ ನಾಪತ್ತೆಯಾಗಿದ್ದರು. ವಿಚಾರಣೆ ಸಂಬಂಧ ಸಿಐಡಿ ಅಧಿಕಾರಿಗಳು ಅವರಿಗೆ ನೋಟಿಸ್ ನೀಡಿದ್ದರು. ಅಲ್ಲದೆ, ಆರೋಪಿಯ ಪತ್ತೆಗಾಗಿ ರಾಜ್ಯ ಸೇರಿದಂತೆ ಹೊರ ರಾಜ್ಯಗಳಲ್ಲಿಯೂ ಶೋಧ ನಡೆಸಿದ್ದರು.

ಪಶುವೈದ್ಯರ ಅಕ್ರಮ ನೇಮಕಾತಿ ಸಂಬಂಧ ಮಮಿತಾ ಎಂಬ ಅಭ್ಯರ್ಥಿಯ ಜೊತೆ ಮೂರು ಬಾರಿ ಫೋನ್ ಮೂಲಕ ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ ಮಾತುಕತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇಡಿ ಅಧಿಕಾರಿಗಳಿಗೂ ಸಿಗದೇ ಅವರು ಪರಾರಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೋಯೆಲ್ ಟಾಟಾ ವಿರೋಧದ ನಡುವೆ ಟಾಟಾ ಸನ್ಸ್ ಅಧ್ಯಕ್ಷರಾಗಿ ಚಂದ್ರಶೇಖರನ್ ಮರುನೇಮಕ!

Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ; ಹಾಗಾದ್ರೆ, ಕೊನೆಯ ದಿನಾಂಕ ಯಾವಾಗ?

ಇನ್ನೂ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ; ಒಟ್ಟು ಸಂಖ್ಯೆ 124ಕ್ಕೆ ಏರಿಕೆ

ಭಾರತ ವಿಶ್ವಾಸಾರ್ಹ ಸೆಮಿಕಂಡಕ್ಟರ್ ಉತ್ಪಾದನಾ ತಾಣ, ಉದ್ಯಮಕ್ಕೆ ಅನುಕೂಲ ವಾತಾವರಣ ನಿರ್ಮಿಸಲು ಸರ್ಕಾರ ಸಿದ್ಧ: ಪ್ರಧಾನಿ ಮೋದಿ

ನಾನು ಇನ್ನೆಲ್ಲಿಗೆ ಹೋಗೋಕಾಗುತ್ತೆ, ಇಲ್ಲಿನ ಜನರನ್ನೆ ನಂಬಿಕೊಂಡಿದ್ದೀನಿ: ರಾಮನಗರದಿಂದಲೇ ಸ್ಪರ್ಧೆ ಖಚಿತ; ನಿಖಿಲ್ ಕುಮಾರಸ್ವಾಮಿ