ಖ್ಯಾತ ಟ್ಯಾಟೂ ಕಲಾವಿದ ಅರ್ಜುನ್‌  
ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದ ಆಂಟಿ: ಮತ್ತೊಬ್ಬನ ಜೊತೆ ವಿಡಿಯೋ ಕಾಲ್‌; ಪ್ರಶ್ನಿಸಿದ್ದಕ್ಕೆ ಖ್ಯಾತ ಟ್ಯಾಟೂ ಆರ್ಟಿಸ್ಟ್‌ ಘೋಸ್ಟ್ ಅರ್ಜುನ್ ಮೇಲೆ ಹಲ್ಲೆ..!

ಸಂಪ್ರಿತಾಗೆ ಈ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆಕೆಯ ಪತಿ ಮೃತಪಟ್ಟಿದ್ದಾರೆ ಎಂದು ಅರ್ಜುನ್‌ಗೆ ತಿಳಿಸಿದ್ದಳು ಎನ್ನಲಾಗಿದೆ. ಬಳಿಕ ಅರ್ಜುನ್‌ ಕೂಡ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು.

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಖ್ಯಾತ ಟ್ಯಾಟೂ ಕಲಾವಿದ ಅರ್ಜುನ್‌ ಅವರಿಂದ ಮಹಿಳೆಯೊಬ್ಬರು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದೂ ಅಲ್ಲದೆ, ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಕಳೆದ ಎರಡು ವರ್ಷಗಳ ಹಿಂದೆ ಟ್ಯಾಟೂ ಸ್ಟುಡಿಯೋವೊಂದರಲ್ಲಿ ಅರ್ಜುನ್‌ಗೆ ಸಂಪ್ರಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ.

ಸಂಪ್ರಿತಾಗೆ ಈ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆಕೆಯ ಪತಿ ಮೃತಪಟ್ಟಿದ್ದಾರೆ ಎಂದು ಅರ್ಜುನ್‌ಗೆ ತಿಳಿಸಿದ್ದಳು ಎನ್ನಲಾಗಿದೆ. ಬಳಿಕ ಅರ್ಜುನ್‌ ಕೂಡ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು.

ಈ ಸಂದರ್ಭದಲ್ಲಿ ಸಂಪ್ರಿತಾ ಅರ್ಜುನ್‌ ಅವರನ್ನು ಮದುವೆಯಾಗುವುದಾಗಿ ಹೇಳಿದ್ದಳು ಎನ್ನಲಾಗಿದೆ. ಇದನ್ನು ನಂಬಿದ ಅರ್ಜುನ್‌ ಆಕೆಗೆ ಹಲವು ಬಾರಿ ಹಣ ನೀಡಿದ್ದಾರೆ. ಆದರೆ, ಮದುವೆಯನ್ನು ನಾಳೆ, ನಾಡಿದ್ದು ಎಂದು ಹೇಳುತ್ತಾ ಕಳೆದ ಒಂದು ವರ್ಷದಿಂದ ಮುಂದೂಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಸಂಪ್ರಿತಾಗೆ ಕರೆ ಮಾಡಿದರೂ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅರ್ಜುನ್‌ ಆಕೆಯ ಮನೆ ಬಳಿ ತೆರಳಿದ್ದರು. ಈ ವೇಳೆ ಸಂಪ್ರಿತಾ ಮತ್ತೊಬ್ಬ ವ್ಯಕ್ತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಅಶ್ಲೀಲವಾಗಿ ಮಾತನಾಡುತ್ತಿರುವುದು ಕಂಡು ಬಂದಿದೆ. ಬಳಿಕ ಅರ್ಜುನ್ ಅವರು ಅದನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಜಗಳ ತೀವ್ರಗೊಂಡಿದೆ. ಈ ವೇಳೆ ಮಹಿಳೆ ಅರ್ಜುನ್‌ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆದರೆ, ಘಟನೆ ಬಳಿಕ ಮರ್ಯಾದೆಗೆ ಅಂಜಿದ ಅರ್ಜುನ್‌, ಹಲ್ಲೆ ಅಥವಾ ಜಗಳದ ಬಗ್ಗೆ ಮಾಹಿತಿ ನೀಡದೆ ಸಾಮಾಜಿಕ ಜಾಲತಾಣದಲ್ಲಿ ಇದು ಅಪಘಾತದಿಂದ ಸಂಭವಿಸಿದ ಗಾಯ ಎಂದು ಹೇಳಿಕೊಂಡು ವಿಡಿಯೋ ಹಂಚಿಕೊಂಡಿದ್ದರು ಎನ್ನಲಾಗಿದೆ.

ಅರ್ಜುನ್‌ ಟ್ಯಾಟೂ ಕಲಾವಿದನಾಗಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ಸಿನಿಮಾಗಳಲ್ಲಿಯೂ ನಟಿಸುವ ಅವಕಾಶ ಪಡೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರು ಒಂದು ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ತೀವ್ರ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ': ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!