ಪ್ರಿಯಾಂಕ್ ಖರ್ಗೆ  online desk
ರಾಜ್ಯ

ಕರಾವಳಿಗರ ಕೈಗೆ ರಕ್ತ ಸವರುತ್ತಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕೆಲಸಗಳು ಮೂಗಿಗೆ ತುಪ್ಪ ಸವರಿದಂತೆ ಕಾಣುತ್ತಿದೆ - ಪ್ರಿಯಾಂಕ್ ಖರ್ಗೆ

ಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕಿನ ಪ್ರದೇಶವಾಗಿ ಮಾತ್ರ ಕಾಣುತ್ತದೆ, ನಾವು ಕರಾವಳಿಯಲ್ಲಿ ಪ್ರಗತಿಯ ಸಾಧ್ಯತೆಗಳನ್ನು ಕಾಣುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ಮಂಗಳೂರು ಕ್ಯಾಬಿನೆಟ್ ಬಗ್ಗೆ "ಮೂಗಿಗೆ ತುಪ್ಪ ಸವರುವ ಕ್ಯಾಬಿನೆಟ್" ಎನ್ನುವುದು ಬಿಜೆಪಿಗರ ಹತಾಶೆಯ ಟೀಕೆಯಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕರಾವಳಿಗರ ಕೈಗೆ ರಕ್ತ ಸವರುವುದನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿಪರ ನಿಲುವುಗಳನ್ನು ನೋಡಿ ತಳಮಳ ಶುರುವಾಗಿದೆ. ಬಿಜೆಪಿ ಕರಾವಳಿಯನ್ನು ಕೋಮುವಾದದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿತ್ತು, ನಾವು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕಿನ ಪ್ರದೇಶವಾಗಿ ಮಾತ್ರ ಕಾಣುತ್ತದೆ, ನಾವು ಕರಾವಳಿಯಲ್ಲಿ ಪ್ರಗತಿಯ ಸಾಧ್ಯತೆಗಳನ್ನು ಕಾಣುತ್ತಿದ್ದೇವೆ. ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರವಾಗಿತ್ತು, ನಾವು ಕರಾವಳಿಗರ ಆತ್ಮಗೌರವವನ್ನು ಗೌರವಿಸಲು ಕಾಲಿಟ್ಟಿದ್ದೇವೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಬಿಜೆಪಿ ಕರಾವಳಿಯಲ್ಲಿ ಕೋಮು ಕಲಹದ ಚರ್ಚೆಗಳನ್ನು ಮಾತ್ರ ಹುಟ್ಟು ಹಾಕುತ್ತಿತ್ತು, ನಾವು ಡೇಟಾ ಸೆಂಟರ್, ವಾಟರ್ ಮೆಟ್ರೋ, ಪ್ರವಾಸೋದ್ಯಮ, ಮರೀನ್ ಬಯೋಟೆಕ್, ಮಾಹಿತಿ ತಂತ್ರಜ್ಞಾನಗಳಂತಹ ಪ್ರಗತಿಪರ ವಿಷಯಗಳ ಚರ್ಚೆ ಹುಟ್ಟುಹಾಕಿದ್ದೇವೆ.

ದಕ್ಷಿಣ ಕನ್ನಡದ ಜನರ ಬೇಡಿಕೆಗಳನ್ನು ಕೇಳಿಸಿಕೊಳ್ಳುವ ಕೆಲಸ ಬಿಜೆಪಿಗರು ಮಾಡಿರಲಿಲ್ಲ, ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಿದ್ದು ನಮ್ಮ ಸರ್ಕಾರ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕೋಮು ಪ್ರಚೋದನೆ ಮತ್ತು ರಕ್ತ ಕಣ್ಣೀರು ಇವೆರಡನ್ನೂ ಹೊರತುಪಡಿಸಿದರೆ ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!

ಕರಾವಳಿಯ 3 ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಘೋಷಣೆ ಐತಿಹಾಸಿಕವಾದುದು, ಕರಾವಳಿಯನ್ನು ಮತಬ್ಯಾಂಕ್ ಮಾಡಿಕೊಂಡಿದ್ದ ಬಿಜೆಪಿಗೆ ಈ ಅಭಿವೃದ್ಧಿಪರ ನಿಲುವು ತಳೆಯುವುದಕ್ಕೆ ಸಾಧ್ಯವಾಗಲಿಲ್ಲ ಏಕೆ? ಎಂದು ಪ್ರಶ್ನಿಸಿರುವ ಪ್ರಿಯಾಂಕ್ ಖರ್ಗೆ, ಜನತೆ ಕೋಮು ವಿಷಯಗಳನ್ನು ಬಿಟ್ಟು ಪ್ರಗತಿಯ ವಿಷಯಗಳತ್ತ ಚಿಂತನೆಗಳನ್ನು ಆರಂಭಿಸಿರುವುದೇ ಬಿಜೆಪಿಗೆ ಅಸ್ತಿತ್ವದ ಭಯ ಕಾಡಲು ಶುರುವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video

'ಒಳ ಉಡುಪಿನಲ್ಲಿ ಆ ದೃಶ್ಯ ಮಾಡಿ ಅಂದ್ರು': ಬಾಲಿವುಡ್ ನಿರ್ದೇಶಕರ ಕರಾಳ ಮುಖ ಬಿಚ್ಚಿಟ್ಟ ನಟಿ ರಾಧಿಕಾ ಆಪ್ಟೆ!

ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ದುರಂತ ಸಾವು, Video Viral

ದೆಹಲಿ ವಿವಿ ಚುನಾವಣೆ ಫಲಿತಾಂಶ ಪ್ರಕಟ: 4 ಹುದ್ದೆಗಳ ಪೈಕಿ 3ರಲ್ಲಿ ABVP ಭರ್ಜರಿ ಜಯ; ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಪಕ್ಷೇತರ!

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್