ರಾಜ್ಯ

ದೊಡ್ಡಬಳ್ಳಾಪುರ: ಲಾಡ್ಜ್ ನಲ್ಲಿ ಪತ್ನಿ ಕೊಂದು ಪರಾರಿಯಾಗಿದ್ದ ಪತಿ ಆತ್ಮಹತ್ಯೆ!

ಮೂರು ದಿನಗಳ ಹಿಂದೆಯಷ್ಟೆ ಈತನ ಪತ್ನಿ, ಗೌರಿಬಿದನೂರು ತಾಲ್ಲೂಕಿನ ನಗರಗೆರೆ ನಿವಾಸಿ ವಿದ್ಯಾ (21) ಮೃತಪಟ್ಟಿದ್ದರು. ಪ್ರೀತಿಸಿ ವಿವಾಹವಾಗಿದ್ದ ದಂಪತಿಗೆ ಹೆಣ್ಣು ಮಗು ಇದೆ.

ದೊಡ್ಡಬಳ್ಳಾಪುರ: ನಗರದ ವಸತಿಗೃಹವೊಂದರಲ್ಲಿ ಮಹಿಳೆ ಮೃತಪಟ್ಟಿದ್ದ ಪ್ರಕರಣದಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದ ಆಕೆಯ ಪತಿ ಆನಂದ್ ಶವ ಪತ್ತೆಯಾಗಿದೆ.

ಅವರ ಸ್ವಂತ ಊರಾದ ಗೌರಿಬಿದನೂರು ತಾಲ್ಲೂಕಿನ ಮುದಗೆರೆ ಗ್ರಾಮದ ಕೆರೆ ಬಳಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಶವ ಪತ್ತೆಯಾಗಿದೆ.

ಮೂರು ದಿನಗಳ ಹಿಂದೆಯಷ್ಟೆ ಈತನ ಪತ್ನಿ, ಗೌರಿಬಿದನೂರು ತಾಲ್ಲೂಕಿನ ನಗರಗೆರೆ ನಿವಾಸಿ ವಿದ್ಯಾ (21) ಮೃತಪಟ್ಟಿದ್ದರು. ಪ್ರೀತಿಸಿ ವಿವಾಹವಾಗಿದ್ದ ದಂಪತಿಗೆ ಹೆಣ್ಣು ಮಗು ಇದೆ. ದೊಡ್ಡಬಳ್ಳಾಪುರದ ಗಾಂಧಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸೆ. 15ರಂದು ಬೆಳಿಗ್ಗೆ ವಿದ್ಯಾ ಮತ್ತು ಆನಂದ್ ವಸತಿಗೃಹಕ್ಕೆ ಬಂದಿರುವ ದೃಶ್ಯ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರೂ ಕೊಠಡಿಗೆ ತೆರಳಿದ ಕೆಲ ಸಮಯದ ಬಳಿಕ ಆನಂದ್ ಮಾತ್ರ ಹೊರಗೆ ಬಂದಿದ್ದ. ವಿದ್ಯಾ ಅವರ ಮೊಬೈಲ್‌ ಪೋನ್‌ ತೆಗೆದುಕೊಂಡ ಆನಂದ್‌, ಕೊಠಡಿಗೆ ಬೀಗ ಹಾಕಿ ಅಲ್ಲಿಂದ ನೇರವಾಗಿ ಮುದಗೆರೆಗೆ ತೆರಳಿದ್ದ ಎಂದು ನಗರ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಮುತ್ತುರಾಜ್‌ ತಿಳಿಸಿದ್ದಾರೆ.

ಕೊಠಡಿಯಲ್ಲಿ ವಿದ್ಯಾ ಮೃತದೇಹ ಪತ್ತೆಯಾಗಿದ್ದು, ಅವರ ಕುತ್ತಿಗೆಯ ಭಾಗದಲ್ಲಿ ಗಾಯದ ಗುರುತು ಕಂಡುಬಂದಿವೆ. ಕಂಪನಿಯ ಗುರುತಿನ ಚೀಟಿಗೆ ಬಳಸುವ ಟ್ಯಾಗ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ಇದೆ. ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯಿಂದ ಸತ್ಯ ತಿಳಿಯಲಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ವಿ.ಚಂದ್ರಕಾಂತ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ. ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ, ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!

ಸರ್ಕಾರದ ಎಲ್ಲ ಘೋಷಣೆಗಳೂ ಕಾಗದದ ಮೇಲೆಯೇ ಉಳಿಯಲಿವೆ: ಆರ್. ಅಶೋಕ್