ವಿಜಯೇಂದ್ರ 
ರಾಜ್ಯ

ಪ್ರತಾಪ್ ಸಿಂಹ ಮೇಲೆ FIR ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಕೈ ಹಾಕಿದೆ: ವಿಜಯೇಂದ್ರ

ಇದು ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ.

ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಿರುವ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ನಡೆ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವಂತಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲಲಿ ಪೋಸ್ಟ್ ಮಾಡಿರುವ ಅವರು, ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿಯ ವರ್ತನೆಯಿಂದ ಉದ್ಭವಿಸಿದ ಪರಿಸ್ಥಿತಿಗೆಸರ್ಕಾರವೇ ಪರೋಕ್ಷವಾಗಿ ಪ್ರಚೋದನೆ ನೀಡಿದಂತಾಗಿದೆ ಎಂದು ಆರೋಪಿಸಿದ್ದಾರೆ.

ಗಣಪತಿ ವಿಸರ್ಜನಾ ಶೋಭಾಯಾತ್ರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ, ಶಾಂತಿಗೆ ಭಂಗವಾಗದ ರೀತಿಯಲ್ಲಿ ಯಶಸ್ವಿಯಾಗಿ ನಡೆದಿದೆ. ಆದರೆ, ಗಾಯದ ಮೇಲೆ ಬರೆ ಎಳೆದಂತೆ, ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣಕ್ಕೆ ಕೈ ಹಾಕಿದೆ.

ಇದು ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ. ಕೂಡಲೇ ಸರ್ಕಾರ ಪ್ರತಾಪ್ ಸಿಂಹ ಅವರ ಮೇಲೆ ದಾಖಲಿಸಿರುವ FIR ಅನ್ನು ರದ್ದುಗೊಳಿಸಿ ಸರ್ಕಾರ ವಿವೇಕ ಮೆರೆಯಲಿ.ಎಂದಪ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!