ಸಂಗ್ರಹ ಚಿತ್ರ 
ರಾಜ್ಯ

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದ್ದು, ತನಿಖೆ ಪೂರ್ಣಗೊಳಿಸಲು ಮೂರು ತಿಂಗಳ ಗಡುವು ವಿಧಿಸಿದೆ.

ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಸಿಬಿಐ ತನಿಖೆಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಜುಲೈನಲ್ಲಿ ನಡೆದ ವಿಚಾರಣೆಯಲ್ಲಿ ತನಿಖೆ ಕಳಪೆಯಾಗಿದ್ದು, ಸ್ವತಂತ್ರ ತನಿಖೆಯ ಬದಲಿಗೆ ಹಿಂದಿನ ತನಿಖೆಯನ್ನೇ ಆಧರಿಸಿ ವರದಿ ಸಿದ್ಧಪಡಿಸಲಾಗಿದೆ ಎಂದು ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಸಚ್‌ದೇವ್ ಅವರಿದ್ದ ಪೀಠ, ‘ವಾಸ್ತವವಾಗಿ, ಸಿಬಿಐನ ತನಿಖಾಧಿಕಾರಿ ನ್ಯಾಯಾಧೀಶರಂತೆ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಪರಿಶೀಲಿಸಿ ಅವರು ವರದಿ ಸಲ್ಲಿಸಿದ್ದಾರೆ. ಯಾವುದೇ ಸ್ವತಂತ್ರ ತನಿಖೆ ನಡೆಸಿಲ್ಲ’ ಎಂದು ಹೇಳಿತ್ತು.

ಇಂತಹ ತನಿಖೆ ಸಿಬಿಐನ ಕಳಪೆ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!