ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಪತ್ತೆ; ಏಳು ಮಂದಿ ಬಂಧನ, ಐದು ನಾಡಬಂದೂಕು ವಶ

ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಏಳು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ನಗರದ ಹೊರವಲಯದಲ್ಲಿ ನಾಡಬಂದೂಕುಗಳ ಅಕ್ರಮ ಮಾರಾಟದಲ್ಲಿ ತೊಡಗಿದ್ದ ಜಾಲವೊಂದನ್ನು ಭೇದಿಸಿರುವ ಪೊಲೀಸರು, ಏಳು ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬಂಧಿತರನ್ನು ಪ್ರದೀಪ್ ರಮೇಶ್ (30), ರಿಜ್ವಾನ್ ಪಾಷಾ (36), ಮನೋಜ್ (28), ವೆಂಕಟರಾಜ್ (26), ಶಿವರಾಜ್ (30), ಗೋಪಿ (28) ಮತ್ತು ನಂಜಪ್ಪ (30) ಎಂದು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ಬಂಧನದೊಂದಿಗೆ, ಅವರಿಂದ ಸ್ಥಳೀಯವಾಗಿ ತಯಾರಿಸಿದ ಐದು ಪಿಸ್ತೂಲ್‌ಗಳು ಮತ್ತು 10 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 14 ರಂದು ಆನೇಕಲ್‌ನ ಹಲ್ದೇನಹಳ್ಳಿ ರೈಲ್ವೆ ಗೇಟ್ ಬಳಿ ಗಸ್ತು ತಿರುಗುತ್ತಿದ್ದಾಗ ಬ್ಯಾಗ್ ಜೊತೆಗೆ ಸಂಶಯಾಸ್ಪದವಾಗಿ ನಿಂತಿದ್ದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದರು. ಬಂಧಿತನನ್ನು ಪ್ರದೀಪ್ ಎಂದು ಗುರುತಿಸಲಾಯಿತು.

ಪೊಲೀಸರ ಪ್ರಕಾರ, ಶೋಧದ ವೇಳೆ ಆತನ ಬಳಿ ದೇಶೀಯವಾಗಿ ತಯಾರಿಸಿದ ಮೂರು ಪಿಸ್ತೂಲ್‌ಗಳು ಮತ್ತು 10 ಜೀವಂತ ಗುಂಡುಗಳು ಪತ್ತೆಯಾಗಿವೆ. ಹಲ್ದೇನಹಳ್ಳಿ ರೈಲು ನಿಲ್ದಾಣದ ಬಳಿ ಈ ಬಂದೂಕುಗಳನ್ನು ಹಸ್ತಾಂತರಿಸಲು ಕಾಯುತ್ತಿದ್ದಾಗ ಆತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ, ಪೊಲೀಸರು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಪತ್ತೆಹಚ್ಚಿದರು; ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಇತರ ಆರು ಮಂದಿಯನ್ನು ಬಂಧಿಸಲಾಗಿದೆ.

ತನಿಖೆ ವೇಳೆ, ಆರೋಪಿಗಳಾದ ರಿಜ್ವಾನ್ ಮತ್ತು ಮನೋಜ್‌ಗೆ ಸ್ಥಳೀಯವಾಗಿ ತಯಾರಿಸಿದ (ಕಂಟ್ರಿ-ಮೇಡ್) ಇನ್ನೂ ಎರಡು ಪಿಸ್ತೂಲ್‌ಗಳನ್ನು ಮಾರಾಟ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಯಿತು. ಅವರ ಬಂಧನದ ನಂತರ, ಪೊಲೀಸರು ಅವರ ಬಳಿಯಿದ್ದ ಬಂದೂಕುಗಳನ್ನು ವಶಪಡಿಸಿಕೊಂಡರು ಎಂದು ತಿಳಿಸಲಾಗಿದೆ.

ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಏಳು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 ‘ಟ್ರಂಪ್ ಟಿವಿ’ ಸ್ಟ್ರೀಮಿಂಗ್ ಆರಂಭ..!

ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ ಮಹಾ ಚರ್ಚೆ; ಸರ್ಕಾರದ ನಿಲುವೇನು..?

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!

ಕಸ್ತೂರಿರಂಗನ್ ವರದಿ ವಿವಾದ: ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ, ಕಾಂಗ್ರೆಸ್-ಬಿಜೆಪಿ ವಾಕ್ಸಮರ..!