ಐಶ್ವರ್ಯಾ 
ರಾಜ್ಯ

ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ತರಾಟೆ ಬಳಿಕ ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿ ಕ್ಷಮೆಯಾಚನೆ

ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಈ ವೇಳೆ ಐಶ್ವರ್ಯ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಮಂಡ್ಯ: ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗರ್ಭಗುಡಿಗೆ ಬಿಡುವ ವಿಚಾರದಲ್ಲಿ ಕಿರಿಕ್ ಮಾಡಿದ್ದರು.

ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್‌ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಈ ವೇಳೆ ಐಶ್ವರ್ಯ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷಮೆ ಕೋರಲು ಕೋರ್ಟ್ ತಾಕೀತು ಹಿನ್ನೆಲೆ ಐಶ್ವರ್ಯಗೌಡ ಬಹಿರಂಗ ಕ್ಷಮೆಕೋರಿದ್ದಾರೆ.

ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಹೆಚ್ಚು ಜನಸಂದಣಿ ಇದ್ದಿದ್ದರಿಂದ ಹಾಗೂ ನನ್ನ ಮಕ್ಕಳಿಗೆ 'ಅಮ್ಮ' ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು.

ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ವೀಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ.

ಕರ್ತವ್ಯನಿರತ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ ಗೌಡ ಅವರ ಪುತ್ರಿ ಐಶ್ವರ್ಯಾ ಅವರು ಮಹಿಳಾ ಪಿಎಸ್‌ಐ ಬಳಿ ಕ್ಷಮೆ ಯಾಚಿಸಿದರೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಾಗತಿಕ ವ್ಯವಸ್ಥೆ ಒತ್ತಡದಲ್ಲಿದೆ, ಬಹುಪಕ್ಷೀಯತೆಗೆ ಸುಧಾರಣೆ ಅಗತ್ಯ: ವಿಶ್ವಸಂಸ್ಥೆಯಲ್ಲಿ ಜೈಶಂಕರ್ ಕರೆ

ಸಾಂಪ್ರದಾಯಿಕ ಮಾಧ್ಯಮಗಳಿಗೆ ಸೆಡ್ಡು ಹೊಡೆದ ಅಮೆರಿಕಾ ಅಧ್ಯಕ್ಷ; ಶ್ವೇತಭವನದಿಂದ 24/7 ‘ಟ್ರಂಪ್ ಟಿವಿ’ ಸ್ಟ್ರೀಮಿಂಗ್ ಆರಂಭ..!

ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ ಮಹಾ ಚರ್ಚೆ; ಸರ್ಕಾರದ ನಿಲುವೇನು..?

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!

ಕಸ್ತೂರಿರಂಗನ್ ವರದಿ ವಿವಾದ: ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ, ಕಾಂಗ್ರೆಸ್-ಬಿಜೆಪಿ ವಾಕ್ಸಮರ..!