ಬಿಜೆಪಿ ಪ್ರತಿಭಟನೆ  
ರಾಜ್ಯ

ಸರ್ಕಾರದ ಖಜಾನೆ ಖಾಲಿ: ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ! Video

ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಪರಿಶೀಲಿಸುವ ವೇಳೆ ಹಣಕಾಸು ಇಲಾಖೆ ಮಂಗಳವಾರ ಈ ಎಚ್ಚರಿಕೆ ನೀಡಿತ್ತು.

ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟದತ್ತ ಸಾಗುತ್ತಿದೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸಿ ರಾಜ್ಯದ ಬಿಜೆಪಿ ನಾಯಕರು ವಿಧಾನಸೌಧದ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಸದ್ಯದ ಸೀಮಿತ ಆರ್ಥಿಕ ಅವಕಾಶವನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳುವಾಗ ಎಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ಹಣಕಾಸು ಇಲಾಖೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ಸೂಚಿಸಿತ್ತು. ನಿಧಿ ಹಂಚಿಕೆಯಲ್ಲಿ ‘ವಾಸ್ತವಿಕ ಮತ್ತು ವಿವೇಕಯುತ’ ನಿಲುವು ಅಗತ್ಯ ಎಂದು ಇಲಾಖೆ ಹೇಳಿತ್ತು.

ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಪರಿಶೀಲಿಸುವ ವೇಳೆ ಹಣಕಾಸು ಇಲಾಖೆ ಮಂಗಳವಾರ ಈ ಎಚ್ಚರಿಕೆ ನೀಡಿತ್ತು. ಸುಮಾರು ರೂ.10,000 ಕೋಟಿ ವೆಚ್ಚದ ಈ ಯೋಜನೆಯನ್ನು 2026-27 ಮತ್ತು 2027-28ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಪ್ರಸ್ತಾಪಿಸಲಾಗಿತ್ತು.

ಬಜೆಟ್‌ನಲ್ಲಿ ಅನುದಾನ ಮೀಸಲಿಡದ ಅಥವಾ ಹಣವನ್ನು ನಿಗದಿಪಡಿಸದ ದೊಡ್ಡ ಯೋಜನೆಯನ್ನು ಆರಂಭಿಸುವುದರಿಂದ ನಗದು ಹರಿವು ಹಾಗೂ ಹಣಕಾಸು ನಿರ್ವಹಣೆಯಲ್ಲಿ ಸವಾಲುಗಳು ಎದುರಾಗಬಹುದು ಎಂದು ಹಣಕಾಸು ಇಲಾಖೆ ತನ್ನ ಟಿಪ್ಪಣಿಯಲ್ಲಿ ತಿಳಿಸಿತ್ತು.

ಇದರ ಬೆನ್ನಲ್ಲೇ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವ ವಹಿಸಿದ್ದರು. ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ ಸಮರ್ಪಕ ಆಡಳಿತ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಹಣಕಾಸು ಇಲಾಖೆಯ ಇತ್ತೀಚಿನ ಅಭಿಪ್ರಾಯಗಳು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಬಹಿರಂಗಪಡಿಸಿವೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

ರಾಜ್ಯದ ಆರ್ಥಿಕ ಮಿತಿಗಳ ನಡುವೆಯೂ ಕಾಂಗ್ರೆಸ್ ಸರ್ಕಾರ ‘ಸುಳ್ಳು ಭರವಸೆಗಳನ್ನು’ ನೀಡುತ್ತಿದೆ ಹಾಗೂ ಕರ್ನಾಟಕದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ದೂರಿದರು.

ಈ ನಡುವೆ ಹಣಕಾಸು ಇಲಾಖೆಯ ಸಲಹೆಯನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಖಾತೆಯನ್ನೂ ಹೊಂದಿರುವ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಒಪ್ಪಿಕೊಂಡಿದ್ದು, ಸರ್ಕಾರದ ಹಿತದೃಷ್ಟಿಯಿಂದ ಹಣಕಾಸು ಇಲಾಖೆ ಎಚ್ಚರಿಕೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದರು.

ಹಣಕಾಸು ಇಲಾಖೆಯ ಅಂದಾಜಿನ ಪ್ರಕಾರ, 2026-27 ರ ಕರ್ನಾಟಕದ ವಿತ್ತೀಯ ಕೊರತೆಯು ವಿತ್ತೀಯ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ ಚೌಕಟ್ಟಿನ ಅಡಿಯಲ್ಲಿ ಅನುಮತಿಸಲಾದ ಶೇಕಡಾ 3 ರ ಮಿತಿಯ ವಿರುದ್ಧ 2.95 ಶೇಕಡಾ ಎಂದು ಯೋಜಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳ ಬಾಕಿ ವೆಚ್ಚ 2 ಲಕ್ಷ ಕೋಟಿ ರೂ.ಗಳನ್ನು ಮೀರಿರುವುದನ್ನು ಗಮನಿಸಿದ ಹಣಕಾಸು ಇಲಾಖೆಯು ರಾಜ್ಯದ ಅಸ್ತಿತ್ವದಲ್ಲಿರುವ ಬದ್ಧತೆಗಳತ್ತ ತಿರುಗಿ ನೋಡುವಂತೆ ಮಾಡಿದೆ.

ಇದರಂತೆ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಲ್ಲಿನ ಬಾಕಿ ಬಿಲ್‌ಗಳ ಮೊತ್ತವೇ ರೂ.36,136 ಕೋಟಿಯಷ್ಟಿದೆ ಎಂದು ಹಣಕಾಸು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ-Sanjay Raut

ಮೀರಾಬಾಯಿ ಚಾನುಗೆ ಬೆಳ್ಳಿ: 98ರ ಬಳಿಕ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತಕ್ಕೆ ವೇಟ್‌ಲಿಫ್ಟಿಂಗ್‌ನಲ್ಲಿ ಮೊದಲ ಪದಕ!

Asian Games 2026: ಭಾರತಕ್ಕೆ ಶೂಟಿಂಗ್‌ನಿಂದ ಮತ್ತೊಂದು ಪದಕ; ಪುರುಷರ ಸ್ಕೀಟ್ ತಂಡಕ್ಕೆ ಕಂಚು