ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!

ರಾಜ್ಯದಲ್ಲಿ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಪ್ರಸ್ತುತ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೇರಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭೀಕರ ಬರ ಎದುರಾಗಿದ್ದು, ತಕ್ಷಣವೇ ಶೇ.50 ರಷ್ಟು ಮಧ್ಯಂತರ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಪ್ರಸ್ತುತ ಒಟ್ಟು ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೇರಿದೆ. ದೀರ್ಘಕಾಲದ ಮಳೆಯ ಕೊರತೆಯು ಕೃಷಿ, ನೀರಿನ ಲಭ್ಯತೆ, ಜಾನುವಾರು ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಇದರಿಂದಾಗಿ 40 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟದ ಭೀತಿ ಎದುರಾಗಿದೆ ಎಂದು ರಾಜ್ಯದಲ್ಲಿ ಹದಗೆಡುತ್ತಿರುವ ಬರ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಆತಂಕವಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ತಂಡದ ಪರಿಶೀಲನಾ ಪ್ರಕ್ರಿಯೆಗೆ ಸಮಯ ಹಿಡಿಯುವುದರಿಂದ, ರೈತರಿಗೆ ಇನ್‌ಪುಟ್ ಸಬ್ಸಿಡಿ ಮತ್ತು ಕುಡಿಯುವ ನೀರು ಪೂರೈಕೆಗೆ ನೆರವಾಗಲು ಕೋರಿದ ಅನುದಾನದ ಶೇ.50 ರಷ್ಟು ಮಧ್ಯಂತರ ಪರಿಹಾರ ಹಾಗೂ SDRF ನ ಎರಡನೇ ಕಂತನ್ನು ಮುಂಗಡವಾಗಿ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ, ಕಂಚಿನ ಪದಕಕ್ಕೆ ತೃಪ್ತಿ!

ನಾವು 'ಭಯೋತ್ಪಾದನೆಯ ಸಂತ್ರಸ್ತರು, ಆದರೆ ಮಂಡಿಯೂರಿ ಶರಣಾಗಲಿಲ್ಲ; UN ಸಾಮಾನ್ಯ ಸಭೆಯಲ್ಲಿ ಇರಾನ್ ಅಧ್ಯಕ್ಷರ ಪ್ರಬಲ ಭಾಷಣ!

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ

ಆ ಮೆಂಟಲ್ ಬಗ್ಗೆ ನನ್ನ ಕೇಳಬೇಡ್ರಿ; ನೀವ್ಯಾಕೆ ದಿನಾ ಆ ವ್ಯಕ್ತಿಗೆ ಮೈಕ್ ಹಿಡೀತೀರಾ: ಮಾಧ್ಯಮ ವಿರುದ್ಧ ಪ್ರತಾಪ್ ಸಿಂಹ ಗರಂ!